TVS Jupiter 110: ಟಿವಿಎಸ್ ಜುಪಿಟರ್ 110 ಸ್ಕೂಟರ್ ವಿಡಿಯೋ ರಿವ್ಯೂ.. ಹೇಗಿದೆ.. ನೀವೇ ನೋಡಿ!
ಟಿವಿಎಸ್ ಮೋಟಾರ್ (TVS Motor) ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ವಿವಿಧ ಬೈಕ್ ಮತ್ತು ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಗುರುವಾರ ನೂತನ 2024ರ ನವೀಕರಿಸಿದ ಜುಪಿಟರ್ 110 (Jupiter 110) ಸ್ಕೂಟರ್‌ನ್ನು ಬಿಡುಗಡೆ ಮಾಡಿದೆ. ನಮಗೆ ಈ ಹೊಚ್ಚ ಹೊಸ ಟಿವಿಎಸ್ ಜುಪಿಟರ್ 110 ಸ್ಕೂಟರ್ ಟೆಸ್ಟ್ ಡ್ರೈವ್ ಮಾಡಲು ಅವಕಾಶ ದೊರೆಯಿತು. ಬನ್ನಿ.. ಹೇಗಿದೆ ಎಂಬುದರ ವಿಡಿಯೋ ರಿವ್ಯೂ ನಿಮಗಾಗಿ..
2024ರ ನೂತನ ಟಿವಿಎಸ್ ಜುಪಿಟರ್ 110 (TVS Jupiter 110) ಸ್ಕೂಟರ್ ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯವಿದೆ. ರೂ.73,700 (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿದೆ. ಡ್ರಮ್, ಡ್ರಮ್ ಅಲಾಯ್, ಡ್ರಮ್ ಎಸ್‌ಎಕ್ಸ್‌ಸಿ ಮತ್ತು ಡಿಸ್ಕ್ ಎಸ್‌ಎಕ್ಸ್‌ಸಿ ಎಂಬ 4 ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದ್ದು, ಡಾನ್ ಬ್ಲೂ, ಗ್ಯಾಲಕ್ಟಿಕ್ ಕಾಪರ್ ಮ್ಯಾಟ್ ಮತ್ತು ಸ್ಟಾರ್ಲೈಟ್ ಬ್ಲೂ ಗ್ಲೋಸ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ಈ ಜುಪಿಟರ್ 110 ಸ್ಕೂಟರ್ ಐಗೋ ಅಸಿಸ್ಟ್ (iGO Assist) ಎಂಬ ತಂತ್ರಜ್ಞಾನದ ಜೊತೆಯಲ್ಲಿ 113 ಸಿಸಿ ಸಿಂಗಲ್-ಸಿಲಿಂಡರ್ ಫೋರ್-ಸ್ಟ್ರೋಕ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 5.9 ಕೆಡಬ್ಲ್ಯೂ ಗರಿಷ್ಠ ಶಕ್ತಿ ಹಾಗೂ 9.8 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಐಗೋ ಅಸಿಸ್ಟ್ ಇಲ್ಲದ ರೂಪಾಂತರಗಳು 9.2 ಎನ್ಎಂ ಪೀಕ್ ಟಾರ್ಕ್ ಮಾತ್ರ ಹೊರಹಾಕುತ್ತವೆ.
ಹೊಚ್ಚ ಹೊಸ ಟಿವಿಎಸ್ ಜುಪಿಟರ್ 110 ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಹೊಸದಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್, ಟರ್ನ್ ಇಂಡಿಕೇಟರ್ ಮತ್ತು ವಿಶಾಲವಾದ (ವೈಡ್) ಎಲ್ಇಡಿ ಡಿಆರ್‌ಎಲ್‌ನ್ನು ಒಳಗೊಂಡಿದೆ. ಇಂಟಲಿಜೆಂಟ್ ಸ್ಟಾರ್ಟ್-ಸ್ಟಾಪ್, ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನಂತಹ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ನೂತನ ಟಿವಿಎಸ್ ಜುಪಿಟರ್ 110 ಸ್ಕೂಟರ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಗ್ಯಾಸ್ ಫೀಲ್ಡ್ ಡ್ಯಾಂಪರ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆ ಒದಗಿಸಲು ಮುಂದೆ 220 ಎಂಎಂ ಪೆಟಲ್ ಡಿಸ್ಕ್ ಹಾಗೂ ಹಿಂದೆ 130 ಎಂಎಂ ಡ್ರಮ್ ಬ್ರೇಕ್‌ನ್ನು ಪಡೆದಿದೆ. 12-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದ್ದು, ಟೈರ್‌ಗಳು ಸಹ ಉತ್ತಮವಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








