TVS: ಶೀಘ್ರ ಟಿವಿಎಸ್‌ನಿಂದ ವಿಶ್ವದ ಮೊದಲ ಸಿಎನ್‌ಜಿ ಸ್ಕೂಟರ್ ಬಿಡುಗಡೆ.. ಯಾವುದು?

ಭಾರತದ ಪ್ರಮುಖ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ ಟಿವಿಎಸ್ ಮೋಟಾರ್ (TVS Motor) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕವಾಗಿರುವ ಹಲವು ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಸದ್ಯ ಟಿವಿಎಸ್ ಕಂಪನಿಯು ವಿವಿಧ ಪರ್ಯಾಯ ಇಂಧನ (Fuel) ತಂತ್ರಜ್ಞಾನ ಅಭಿವೃದ್ಧಿಪಡಿಸುವಲ್ಲಿ ಕಾರ್ಯನಿರ್ವಹಿಸುತ್ತಿದ್ದು, ತನ್ನ ದ್ವಿಚಕ್ರ ವಾಹನಗಳಲ್ಲಿ ಸಿಎನ್‌ಜಿ (CNG) ಎಂಜಿನ್‌ನ್ನು ಪರಿಚಯಿಸಲು ಸಾಕಷ್ಟು ತಯಾರಿ ನಡೆಸುತ್ತಿದೆ ಎಂದು 'ಆಟೋ ಕಾರ್ ಪ್ರೊಫೆಷನಲ್' ವರದಿ ಮಾಡಿದೆ. ಎಲ್ಲ ಅಂದುಕೊಂಡಂತೆ ನಡೆದರೆ, ಮುಂಬರುವ ದಿನಗಳಲ್ಲಿ ಜನಪ್ರಿಯ ಜುಪಿಟರ್ (Jupiter) ಸ್ಕೂಟರ್‌ ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೆ ಲಭ್ಯವಾಗಲಿದೆ.

ಮೂಲಗಳ ಪ್ರಕಾರ, ಟಿವಿಎಸ್ ಕಂಪನಿ 'ಯು740' ಸಂಕೇತ ನಾಮ (Code Name) ಹೊಂದಿರುವ 125 ಸಿಸಿ ಸಿಎನ್‌ಜಿ ಸ್ಕೂಟರ್ ಅಭಿವೃದ್ಧಿಪಡಿಸುವ ಕೆಲಸವನ್ನು ಶುರು ಮಾಡಿದೆ. ಈ ವರ್ಷದ ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ಉತ್ಪಾದನೆ ಆರಂಭವಾಗಬಹುದು ಎನ್ನಲಾಗಿದ್ದು, ಈ ವರ್ಷಾಂತ್ಯ ಅಥವಾ 2025ರ ಆರಂಭದಲ್ಲಿ ಮಾರುಕಟ್ಟೆಗೆ ಬರಬಹುದು ಎಂದು ಅಂದಾಜಿಸಲಾಗಿದೆ. ಬಹುಶಃ ಇದೇ ವಿಶ್ವದ ಪ್ರಥಮ ಸಿಎನ್‌ಜಿ ಸ್ಕೂಟರ್ ಎಂಬ ಹೆಗ್ಗಳಿಕೆಗೂ ಪಾತ್ರವಾಗಬಹುದು.

Tvs Jupiter 125 Cng Scooter Launch Coming Months Details

ಟಿವಿಎಸ್ ಮೋಟಾರ್ ತಿಂಗಳಿಗೆ ಸರಿ ಸುಮಾರು 1,000 ಯುನಿಟ್ ಸಿಎನ್‌ಜಿ ಸ್ಕೂಟರ್‌ಗಳನ್ನು ಮಾರಾಟಗೊಳಿಸುವ ಸಾಧಾರಣ ಗುರಿಯನ್ನು ಹೊಂದಿದೆ ಎಂದು ಹೇಳಲಾಗಿದೆ. ಇದು ಕಂಪನಿಯು ಇಂಗಾಲ ಹೊರಸೂಸುವ ದ್ವಿಚಕ್ರ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ. ಈಚೆಗೆ ಬಿಡುಗಡೆಗೊಂಡ ಪ್ರಪಂಚದ ಮೊದಲ ಬಜಾಜ್ ಫ್ರೀಡಂ 125 ಸಿಎನ್‌ಜಿ ಮೋಟಾರ್‌ಸೈಕಲ್‌ನಂತೆ ಜುಪಿಟರ್ ಸ್ಕೂಟರ್ ಕೂಡ ಸಿಎನ್‌ಜಿ/ ಪೆಟ್ರೋಲ್ ಟ್ಯಾಂಕ್‌ ಎರಡನ್ನು ಹೊಂದಿರಬಹುದು ಎನ್ನಲಾಗಿದೆ.

ಆದಾಗ್ಯೂ ನೂತನ ಸ್ಕೂಟರ್ ಹೇಗಿರಲಿದೆ, ಯಾವಾಗ ಬಿಡುಗಡೆಯಾಗುತ್ತದೆ ಎಂಬುದರ ಕುರಿತಂತೆ ಟಿವಿಎಸ್ ಕಂಪನಿಯ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ. ಪ್ರಸ್ತುತ ದೇಶೀಯವಾಗಿ ಖರೀದಿಗೆ ಸಿಗುವ ಇಂಧನ ಚಾಲಿತ ಟಿವಿಎಸ್ ಜೂಪಿಟರ್ 125 (TVS Jupiter 125) ಸ್ಕೂಟರ್ ರೂ.89,155 ದಿಂದ ರೂ.99,805 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

Tvs Jupiter 125 Cng Scooter Launch Coming Months Details

ಈ ಜುಪಿಟರ್ ಸ್ಕೂಟರ್ 124.8 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 8.2 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 10.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 57.27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 108 ಕೆಜಿ ತೂಕವಿದ್ದು, 5.1 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ.

ನೂತನ ಟಿವಿಎಸ್ ಜುಪಿಟರ್ ಡ್ರಮ್, ಡಿಸ್ಕ್ ಮತ್ತು ಸ್ಮಾರ್ಟ್‌ಕನೆಕ್ಟ್ ಎಂಬ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ನ್ನು ಒಳಗೊಂಡಿದೆ. ಜೊತೆಗೆ ಲಗೇಜ್ ಸಾಗಿಸಲು ಆಸನದ ಕೆಳಗೆ (ಸೀಟ್ ಅಂಡರ್) ಬರೋಬ್ಬರಿ 33 ಲೀಟರ್ ಸಾಮರ್ಥ್ಯದ ಸ್ಟೋರೇಜ್ (ಸಂಗ್ರಹ ಪೆಟ್ಟಿಗೆ) ಕೂಡ ಇದೆ.

ಈ ಸ್ಕೂಟರ್ ಎಲ್ಇಡಿ ಹೆಡ್‌ಲ್ಯಾಂಪ್ ಹಾಗೂ ಎಲ್ಇಡಿ ಟೈಲ್ ಲ್ಯಾಂಪ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಮುಂಭಾಗ (ಫ್ರಂಟ್) ಮತ್ತು ಹಿಂಭಾಗ (ರೇರ್) 12-ಇಂಚಿನ ಅಲಾಯ್ ವೀಲ್‌ಗಳು ಹಾಗೂ 90/90-12 ಅಳತೆಯ ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source: Autocar Professional

Article Published On: Thursday, July 11, 2024, 16:16 [IST]
English summary
Tvs jupiter 125 cng scooter launch coming months details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+