TVS: ಆಕ್ಟಿವಾ ಸ್ಕೂಟರ್‌ನ್ನು ಹಿಂದಿಕ್ಕಿ ನಂಬರ್ 1 ಆಗುತ್ತಾ ಟಿವಿಎಸ್ ಜುಪಿಟರ್.. ಬೆಲೆ ಎಷ್ಟು, ಮೈಲೇಜ್ ಏನು?
ಭಾರತದ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಟಿವಿಎಸ್ ಮೋಟಾರ್ (TVS Motor) ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಕೈಗೆಟುಕುವ ದರದಲ್ಲಿ ವಿವಿಧ ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇತ್ತೀಚೆಗೆ, 2024ರ ಜೂನ್ ತಿಂಗಳ ಪ್ರಮುಖ ಸ್ಕೂಟರ್‌ಗಳ ಮಾರಾಟದ ಅಂಕಿಅಂಶಗಳು ಪ್ರಕಟಗೊಂಡಿದ್ದು, ಟಿವಿಎಸ್ ಜುಪಿಟರ್ (TVS Jupiter) ಎರಡನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಹೋಂಡಾ ಆಕ್ಟಿವಾ (Honda Activa) ಮುಂದುವರಿದೆ.
ಜೂನ್ನಲ್ಲಿ 72,100 ಯುನಿಟ್ ಟಿವಿಎಸ್ ಜುಪಿಟರ್ ಸ್ಕೂಟರ್ ಮಾರಾಟ ಮಾಡಲಾಗಿದೆ. 2023ರ ಜೂನ್ ತಿಂಗಳಲ್ಲಿ ಮಾರಿದ 64,252 ಯುನಿಟ್‌ಗೆ ಹೋಲಿಸಿದರೆ, ಶೇಕಡ 12.21% ಬೆಳವಣಿಗೆಯಾಗಿದೆ. ಈ ಅಂಕಿಸಂಖ್ಯೆಯು ಜುಪಿಟರ್ ಜನಪ್ರಿಯತೆ ಯಾವ ಮಟ್ಟದಲ್ಲಿದೆ ಎಂಬುದನ್ನು ತೋರಿಸುತ್ತದೆ. ಹೀಗೆ ಮಾರಾಟವಾಗುವುದು ಮುಂದುವರಿದರೆ, ಹೋಂಡಾ ಆಕ್ಟಿವಾವನ್ನು ಹಿಂದಿಕ್ಕಿದರೂ ಅಚ್ಚರಿಯಿಲ್ಲ.

ಮೊದಲಿಗೆ ಟಿವಿಎಸ್ ಜುಪಿಟರ್ 125 (TVS Jupiter 125) ಕುರಿತಂತೆ ಮಾತನಾಡೋಣ. ಈ ಸ್ಕೂಟರ್ ರೂ.89,155 ದಿಂದ ರೂ.99,805 ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಡ್ರಮ್, ಡಿಸ್ಕ್ ಹಾಗೂ ಸ್ಮಾರ್ಟ್‌ಕನೆಕ್ಟ್ ಎಂಬ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯನ್ನು ಹೊಂದಿದೆ. ಪ್ರಿಸ್ಟಿನ್ ವೈಟ್, ಇಂಡಿಬ್ಲೂ, ಡಾನ್ ಆರೆಂಜ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.
ಈ ಜುಪಿಟರ್ 125 ಶಕ್ತಿಯುತ ಪವರ್‌ಟ್ರೇನ್ ಪಡೆದಿದೆ. 124.8 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.2 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 10.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 57.27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಿವಿಎಸ್ ಜುಪಿಟರ್ 125 ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಮತ್ತು ಡ್ರಮ್ ಬ್ರೇಕ್‌ನ್ನು ಹೊಂದಿದೆ. ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) 12-ಇಂಚಿನ ಅಲಾಯ್ ವೀಲ್‌ಗಳು ಮತ್ತು 90/90-12 ಅಳತೆಯ ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ. 108 ಕೆಜಿ ತೂಕವಿದ್ದು, 5.1 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಒಳಗೊಂಡಿದ್ದು, 33 ಲೀಟರ್ ಸಾಮರ್ಥ್ಯದ ಸ್ಟೋರೇಜ್ ಅನ್ನು ತನ್ನದಾಗಿಸಿಕೊಂಡಿದೆ.
ಟಿವಿಎಸ್ ಜುಪಿಟರ್ 110 (TVS Jupiter 110) ಸ್ಕೂಟರ್ ಕೂಡ ಖರೀದಿಗೆ ಲಭ್ಯವಿದೆ. ಇದು ರೂ.77,431 ದಿಂದ ರೂ.93,026 ಎಕ್ಸ್ ಶೋರೂಂ ದರವನ್ನು ಹೊಂದಿದೆ. 109.7 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 7.88 ಪಿಎಸ್ ಗರಿಷ್ಠ ಶಕ್ತಿ ಹಾಗೂ 8.8 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ ಡ್ರಮ್ ಬ್ರೇಕ್‌ನ್ನು ಪಡೆದಿದೆ.

ಟಿವಿಎಸ್ ಜುಪಿಟರ್ ಸ್ಕೂಟರ್‌ಗೆ ಹೋಂಡಾ ಡಿಯೋ ಪ್ರಬಲ ಪ್ರತಿಸ್ಪರ್ಧಿಯಾಗಿದ್ದು, ರೂ.74,629 ದಿಂದ ರೂ.82,130 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 109.51 ಸಿಸಿ ಏರ್-ಕೋಲ್ಡ್ ಸಿಂಗಲ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀ ಫೋಬ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








