TVS: ಟಿವಿಎಸ್ ವಾಹನಗಳಿಗಾಗಿ ಕ್ಯೂ ನಿಂತ ಗ್ರಾಹಕರು.. ಐಕ್ಯೂಬ್ ಇ-ಸ್ಕೂಟರ್ ನಂಬರ್ 1 ಆಗುತ್ತಾ?

ದಕ್ಷಿಣ ಭಾರತ ಟಿವಿಎಸ್ ಮೋಟಾರ್ (TVS Motor) ಪ್ರಮುಖ ದ್ವಿಚಕ್ರ ವಾಹನ (Two-wheeler) ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ಹಲವು ಸ್ಕೂಟರ್ ಹಾಗೂ ಬೈಕ್‌ಗಳನ್ನು ಮಾರಾಟ ಮಾಡುತ್ತಿದೆ. ಟಿವಿಎಸ್ ಕಂಪನಿಯು ಶುಕ್ರವಾರ ಅಕ್ಟೋಬರ್ (2024) ತಿಂಗಳ ವಾಹನ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ನಿರೀಕ್ಷಿತ ಮಟ್ಟಕ್ಕಿಂತ ಉತ್ತಮವಾದ ಪ್ರಗತಿ ಸಾಧಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕಳೆದ ತಿಂಗಳು (ಅಕ್ಟೋಬರ್ - 2024) ಟಿವಿಎಸ್ ಮೋಟಾರ್ ಒಟ್ಟು 489,015 ಯುನಿಟ್ ದ್ವಿಚಕ್ರ & ತ್ರಿಚಕ್ರ ವಾಹನಗಳನ್ನು (ದೇಶೀಯ ಮಾರಾಟ - ರಫ್ತು) ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 434,714 ಯುನಿಟ್‌ಗೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 13% ಬೆಳವಣಿಗೆ ಸಾಧಿಸಿದೆ.

Tvs Motor October 2024 Records Highest Sales 13 Percent Growth iQube Have Big Demand

ಟಿವಿಎಸ್ ಮೋಟಾರ್ ದ್ವಿಚಕ್ರ ವಾಹನ (Two wheeler) ಮಾರಾಟದಲ್ಲಿಯೂ ಉತ್ತಮವಾದ ಪ್ರಗತಿ ಕಂಡಿದೆ. ಈ ಅಕ್ಟೋಬರ್‌ನಲ್ಲಿ 478,159 ಯುನಿಟ್ ಬೈಕ್ ಮತ್ತು ಸ್ಕೂಟರ್‌ಗಳನ್ನು ಮಾರಾಟಗೊಳಿಸಿದ್ದು, ಶೇಕಡ 14% ಅಭಿವೃದ್ಧಿ ಸಾಧಿಸಿದೆ. 2023ರ ಅಕ್ಟೋಬರ್‌ ತಿಂಗಳಲ್ಲಿ 420,610 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಿತ್ತು.

ಈ ಅಕ್ಟೋಬರ್‌ನಲ್ಲಿ ಟಿವಿಎಸ್ ಕಂಪನಿಯು ಗರಿಷ್ಠ ಸಂಖ್ಯೆಯಲ್ಲಿ (ದ್ವಿಚಕ್ರ & ತ್ರಿಚಕ್ರ) ವಾಹನಗಳನ್ನು ವಿದೇಶಕ್ಕೂ ರಫ್ತು ಮಾಡಿದೆ. ಬರೋಬ್ಬರಿ 87,952 ಯುನಿಟ್‌ಗಳನ್ನು ವಿವಿಧ ದೇಶಗಳಿಗೆ ಕಳುಹಿಸಿಕೊಟ್ಟಿದೆ. 2023ರ ಇದೇ ಅವಧಿಯಲ್ಲಿ ವಿದೇಶಕ್ಕೆ ರಫ್ತು ಮಾಡಿದ 87,952 ಯುನಿಟ್‌ಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇಕಡ 9% ಪ್ರಗತಿಯಾಗಿದೆ. ಆದರೆ, ತ್ರಿಚಕ್ರ ವಾಹನಗಳನ್ನು ಹಿನ್ನೆಡೆ ಅನುಭವಿಸಿದ್ದು, 10,856 ಯುನಿಟ್‌ಗಳನ್ನು ಮಾರಲಾಗಿದೆ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನ (Electric Two-wheeler) ಮಾರಾಟದಲ್ಲಿ ಟಿವಿಎಸ್ ಉತ್ತಮವಾದ ಬೆಳವಣಿಗೆ ಸಾಧಿಸಿದೆ. ದಸರಾ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆ, ಹೋದ ತಿಂಗಳು (ಅಕ್ಟೋಬರ್) 29,308 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 20,153 ಯುನಿಟ್‌ಗೆ ಹೋಲಿಸಿದರೆ ಶೇಕಡ 45% ಪ್ರಗತಿಯಾಗಿದೆ.

ಟಿವಿಎಸ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರಾಟದಲ್ಲಿ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸಲು 'ಐಕ್ಯೂಬ್' ಎಲೆಕ್ಟ್ರಿಕ್ ಸ್ಕೂಟರ್ ಪ್ರಮುಖ ಕಾರಣವಾಗಿದೆ. ಐಕ್ಯೂಬ್, ಐಕ್ಯೂಬ್ ಎಸ್ ಮತ್ತು ಐಕ್ಯೂಬ್ ಎಸ್‌ಟಿ ಎಂಬ 3 ವಿರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಜೊತೆಗೆ ರೂ.1.07 ಲಕ್ಷದಿಂದ ರೂ.1.37 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ.

ಈ ಟಿವಿಎಸ್ ಐಕ್ಯೂಬ್ (TVS iQube) ಇ-ಸ್ಕೂಟರ್ 2.2 ಕೆಡಬ್ಲ್ಯೂಹೆಚ್, 3.04 ಕೆಡಬ್ಲ್ಯೂಹೆಚ್ ಮತ್ತು 5.1 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 75 ರಿಂದ 150 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಫುಲ್-ಕಲರ್ ಟಿಎಫ್‌ಟಿ ಸ್ಕ್ರೀನ್, ವಾಯ್ಸ್ ಅಸಿಸ್ಟ್-ಅಲೆಕ್ಸಾ ಸ್ಕಿಲ್‌ಸೆಟ್‌, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಡಿಜಿಟಲ್ ಡಾಕ್ಯುಮೆಂಟ್ ಸ್ಟೋರೇಜ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಒಟ್ಟಾರೆಯಾಗಿ ಟಿವಿಎಸ್ ಕಂಪನಿ ದ್ವಿಚಕ್ರ ವಾಹನಗಳು ಅದ್ಭುತವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಸಹ ಖರೀದಿ ಮಾಡುತ್ತಿದ್ದಾರೆ. ಅದರಲ್ಲೂ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಪ್ರತೇಕ ಅಭಿಮಾನಿ ಬಳಗವಿದ್ದು, ಈ ಹಬ್ಬದ ಋತುವಿನಲ್ಲಿ ದೊಡ್ಡ ಪ್ರಮಾಣದಲ್ಲಿ ಮಾರಾಟವಾಗಿವೆ. ಮುಂಬರುವ ದಿನಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುವ ನಿರೀಕ್ಷೆಯಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, November 3, 2024, 13:00 [IST]
English summary
Tvs october 2024 records highest sales 13 percent growth iqube have big demand
Read more on tvs motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+