TVS Raider: ಟಿವಿಎಸ್ ರೈಡರ್ 125 ಬೈಕ್ ಖರೀದಿಸಬೇಕೇ.. ಏನಿದರ ವಿಶೇಷತೆ, ವಿಡಿಯೋ ನೋಡಿ

ದೇಶದ ಪ್ರಮುಖ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ ಟಿವಿಎಸ್ ಮೋಟಾರ್ (TVS Motor) ಹಳ್ಳಿಯಿಂದ ದಿಲ್ಲಿವರೆಗೆ ಖ್ಯಾತಿಗಳಿಸಿದೆ. ಕಂಪನಿಯು ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗುವ ನಿಟ್ಟಿನಲ್ಲಿ ಸ್ಪರ್ಧಾತ್ಮಕ ದರದಲ್ಲಿ ಬೈಕ್ ಮತ್ತು ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ನೀವು ದಿನನಿತ್ಯದ ಬಳಕೆಗೆ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದುಕೊಂಡಿರುವ ಮೋಟಾರ್‌ಸೈಕಲ್‌ವೊಂದನ್ನು ಖರೀದಿಸಲು ಯೋಚಿಸಿದ್ದೀರಾ... ಹಾಗಾದರೆ 'ಟಿವಿಎಸ್ ರೈಡರ್ 125' ಉತ್ತಮ ಆಯ್ಕೆಯಾಗಲಿದೆ. ಈ ಬೈಕ್ ವಿಶೇಷತೆಗಳ ಕುರಿತಂತೆ ತಿಳಿಯಬೇಕೇ.. ನಮ್ಮ 'ಡ್ರೈವ್‌ಸ್ಪಾರ್ಕ್' ತಂಡದ ಪ್ರತಿನಿಧಿ ಮಾಡಿರುವ ಜಬರ್ದಸ್ತ್ ವಿಡಿಯೋವನ್ನು ಸಂಪೂರ್ಣವಾಗಿ ವೀಕ್ಷಿಸಿರಿ..

ಬೆಲೆ, ರೂಪಾಂತರಗಳು: ದೇಶೀಯ ಮಾರುಕಟ್ಟೆಯಲ್ಲಿ ಟಿವಿಎಸ್ ರೈಡರ್ 125 (TVS Raider 125) ಮೋಟಾರ್‌ಸೈಕಲ್‌ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ರೂ.98,709 ದಿಂದ ರೂ.1.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸಿಂಗಲ್ ಸೀಟ್ ಹಾಗೂ ಸ್ಪ್ಲಿಟ್ ಸೀಟ್ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

ಕಾರ್ಯಕ್ಷಮತೆ: ಈ ಬೈಕ್ ಶಕ್ತಿಯುತ 124.8 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದೆ. 11.38 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 11.2 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೂ ಲಭ್ಯವಿದೆ. 67 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ವೈಶಿಷ್ಟ್ಯಗಳು: ನೂತನ ಟಿವಿಎಸ್ ರೈಡರ್ 125 ಮೋಟಾರ್‌ಸೈಕಲ್‌ ಎಲ್ಇಡಿ ಹೆಡ್‌ಲೈಟ್, ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್, ಹ್ಯಾಲೊಜೆನ್ ಇಂಡಿಕೇಟರ್‌ಗಳು, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಐಡಲ್ ಸ್ಟಾಪ್/ ಸ್ಟಾರ್ಟ್ ಸಿಸ್ಟಮ್, ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯ (ಫೀಚರ್)ಗಳನ್ನು ಪಡೆದಿದೆ. ಇಕೋ, ಸ್ಪೋರ್ಟ್ ಎಂಬ ರೈಡಿಂಗ್ ಮೋಡ್‌ನ್ನು ಒಳಗೊಂಡಿದೆ.

TVS Raider 125 Spotify King Of The Commuter Bikes Watch Video IN Kannada

ಸುರಕ್ಷತೆಗೆ ಏನು: ಈ ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) 5-ಸ್ಟೆಪ್ ಪ್ರಿಲೋಡ್ ಅಡ್ಜಸ್ಟೆಬಲ್ ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಹಾಗೆಯೇ ರೂಪಾಂತರಗಳಿಗೆ ಅನುಗುಣವಾಗಿ ಮುಂದೆ (ಫ್ರಂಟ್) 240ಎಂಎಂ ಡಿಸ್ಕ್/ 130ಎಂಎಂ ಡ್ರಮ್ ಮತ್ತು ಹಿಂದೆ (ರೇರ್) 130ಎಂಎಂ ಡ್ರಮ್ ಬ್ರೇಕ್‌ನ್ನು ಪಡೆದಿದೆ.

ಬಣ್ಣಗಳು & ತೂಕ: ಹೊಚ್ಚ ಹೊಸ ಟಿವಿಎಸ್ ರೈಡರ್ 125 ಮೋಟಾರ್‌ಸೈಕಲ್‌ ಸ್ಟ್ರೈಕಿಂಗ್ ರೆಡ್ ಮತ್ತು ಬ್ಲೇಜಿಂಗ್ ಬ್ಲೂ ಸೇರಿದಂತೆ ಹಲವು ಆಕರ್ಷಕ ಬಣ್ಣಗಳ ಆಯ್ಕೆಯನ್ನು ಪಡೆದಿದೆ. 123 ಕೆಜಿ ತೂಕವಿರುವ ಈ ಬೈಕ್ 10 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, July 9, 2024, 14:14 [IST]
English summary
Tvs raider 125 spotify king of the commuter bikes watch video in kannada
Read more on tvs motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+