ವರಮಹಾಲಕ್ಷ್ಮಿ ಹಬ್ಬ: ನೀವು ಮನೆಗೆ ತರಬಹುದಾದ ಅತ್ಯುತ್ತಮ ಸ್ಕೂಟರ್‌ಗಳಿವು.. ರೂ.82,586 ಆರಂಭಿಕ ಬೆಲೆ
ಪ್ರತಿವರ್ಷ ಶ್ರಾವಣ ಮಾಸದಲ್ಲಿ ವರಮಹಾಲಕ್ಷ್ಮಿ (Varamahalakshmi) ಹಬ್ಬವನ್ನು ಆಚರಿಸಲಾಗುತ್ತದೆ. ಈ ವರ್ಷ ಆಗಸ್ಟ್ 16 ಶುಕ್ರವಾರದಂದು ಹಬ್ಬ ಬಂದಿದೆ. ಅಂದು ಧನ, ಕನಕ ನೀಡುವ ಲಕ್ಷ್ಮಿಯನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸಲಾಗುತ್ತದೆ. ಹಬ್ಬಕ್ಕೆ ನೀವು ಹೊಚ್ಚ ಹೊಸ ದ್ವಿಚಕ್ರ ವಾಹನವನ್ನು ಖರೀದಿಸಲು ಆಲೋಚಿಸಿದರೆ, ಟಿವಿಎಸ್ ಎನ್‌ಟಾರ್ಕ್ 125, ಹೋಂಡಾ ಡಿಯೋ 125 ಹಾಗೂ ಸುಜುಕಿ ಆಕ್ಸೆಸ್ 125 ಸ್ಕೂಟರ್‌ಗಳು ಉತ್ತಮ ಆಯ್ಕೆಯಾಗಲಿವೆ. ಬನ್ನಿ.. ಈ ಸ್ಕೂಟರ್‌ಗಳ ಬೆಲೆ, ಹಾಗೂ ವಿಶೇಷತೆ ಬಗ್ಗೆ ಸಂಪೂರ್ಣವಾದ ವಿವರವನ್ನು ತಿಳಿಯೋಣ.
ಮೊದಲಿಗೆ ಟಿವಿಎಸ್ ಎನ್‌ಟಾರ್ಕ್ 125 (TVS NTORQ 125) ಕುರಿತಂತೆ ಮಾತನಾಡೋಣ. ಇದು ರೂ.87,271 ದಿಂದ ರೂ.1.08 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 124.8 ಸಿಸಿ ಏರ್-ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 9.38 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 10.6 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 47 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಟಿವಿಎಸ್ ಎನ್‌ಟಾರ್ಕ್ 125 ಹ್ಯಾಲೊಜೆನ್ ಹೆಡ್‌ಲೈಟ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, 20-ಲೀಟರ್ ಅಂಡರ್ ಸೀಟ್ ಸ್ಟೋರೇಜ್, ಯುಎಸ್‌ಬಿ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 111 ಕೆಜಿ ತೂಕವಿದ್ದು, 5.8 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್, ಡಿಸ್ಕ್ ಬ್ರೇಕ್‌ನ್ನು ಪಡೆದಿದೆ.
ಹೋಂಡಾ ಡಿಯೋ 125 (Honda Dio 125) ಕೂಡ ಜನಪ್ರಿಯ ಸ್ಕೂಟರ್ ಆಗಿದ್ದು, ರೂ.85,050 ದಿಂದ ರೂ.92,950 ಎಕ್ಸ್ ಶೋರೂಂ ದರವನ್ನು ಪಡೆದಿದೆ. 123.92 ಸಿಸಿ ಏರ್-ಕೋಲ್ಡ್ ಫ್ಯುಯೆಲ್-ಇಂಜೆಕ್ಟ್ದ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 8.28 ಪಿಎಸ್ ಗರಿಷ್ಠ ಶಕ್ತಿ ಹಾಗೂ 10.4 ಎನ್ಎಂ ಹೊರಹಾಕುತ್ತದೆ. ಜೊತೆಗೆ 48 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಹೋಂಡಾ ಡಿಯೋ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಫಂಕ್ಷನಾಲಿಟಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಈ ಸ್ಕೂಟರ್ 104 ಕೆಜಿ ತೂಕವಿದ್ದು, 5.3 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡಿಸ್ಕ್ ಬ್ರೇಕ್‌ನ್ನು ಒಳಗೊಂಡಿದೆ.
ಸುಜುಕಿ ಆಕ್ಸೆಸ್ 125 (Suzuki Access 125) ಬಗ್ಗೆ ಹೇಳುವುದಾದರೆ, ಈ ಸ್ಕೂಟರ್ ರೂ.82,586 ದಿಂದ ರೂ.94,082 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 124 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 8.7 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 10 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 45 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಸುಜುಕಿ ಆಕ್ಸೆಸ್ 125 ಸ್ಕೂಟರ್ ಎಲ್ಇಡಿ ಹೆಡ್ ಲೈಟ್, ಸೆಮಿ ಡಿಜಿಟಲ್ ಇನ್ಫಾರ್ಮಶನ್ ಪ್ಯಾನೆಲ್, ಸುಜುಕಿ ರೈಡ್ ಕನೆಕ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಬರೋಬ್ಬರಿ 103 ಕೆಜಿ ತೂಕವಿದ್ದು, 5.6 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications