ಅಗ್ಗದ ದರಕ್ಕೆ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್ ಬಿಡುಗಡೆ.. ನಿರೀಕ್ಷೆಗೂ ಮೀರಿದ ವೈಶಿಷ್ಟ್ಯಗಳು!

ರಾಯಲ್ ಎನ್‌ಫೀಲ್ಡ್ (Royal Enfield) ಪ್ರೀಮಿಯಂ ಮೋಟಾರ್‌ಸೈಕಲ್‌ಗಳ ತಯಾರಿಕೆಗೆ ಹೆಸರುವಾಸಿಯಾಗಿದೆ. 2022ರ ಆಗಸ್ಟ್‌ನಲ್ಲಿ ದೇಶೀಯ ಯುವ ಗ್ರಾಹಕರಿಗಾಗಿ ಹೊಚ್ಚ ಹೊಸ 'ಹಂಟರ್ 350' ಬೈಕ್‌ನ್ನು ಮಾರಾಟಕ್ಕೆ ತಂದಿತ್ತು. ಸದ್ಯ, ಈ ಮೋಟಾರ್‌ಸೈಕಲ್‌ನ್ನು ನವೀಕರಿಸಿದೆ. ಶನಿವಾರ 2025ರ ಮಾಡೆಲ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಇದು ಹಲವು ಹೊಸತನಗಳಿಗೆ ಸಾಕ್ಷಿಯಾಗಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

2025ರ ನೂತನ ರಾಯಲ್ ಎನ್‌ಫೀಲ್ಡ್ ಹಂಟರ್ 350 (Royal Enfield Hunter 350) ಬೈಕ್ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಫ್ಯಾಕ್ಟರಿ ಬ್ಲ್ಯಾಕ್ ಬಣ್ಣದೊಂದಿಗೆ ಸಿಗುವ ಆರಂಭಿಕ ಶ್ರೇಣಿ ರೂಪಾಂತರ, ರೂ.1,49,900 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

2005 New Royal Enfield Hunter 350 Bike Launched Rs 1 50 Starting Price Details

ಅದೇ ರೀತಿಯಲ್ಲಿ ರಿಯೋ ವೈಟ್ ಮತ್ತು ಡ್ಯಾಪರ್ ಗ್ರೇ ಬಣ್ಣಗಳ ಆಯ್ಕೆಯಲ್ಲಿ ದೊರೆಯುವ ಮಧ್ಯಮ ಶ್ರೇಣಿ ರೂಪಾಂತರ, ರೂ.1,76,750 ದರವನ್ನು ಒಳಗೊಂಡಿದೆ. ಟೋಕಿಯೋ ಬ್ಲಾಕ್, ಲಂಡನ್ ರೆಡ್ ಮತ್ತು ರೆಬೆಲ್ ಬ್ಲೂ ಬಣ್ಣದೊಂದಿಗೆ ಲಭ್ಯವಿರುವ ರೂಪಾಂತರ, ರೂ.1,81,750 (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ.

ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಮೋಟಾರ್‌ಸೈಕಲ್, ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಇದು ನೋಡುಗರನ್ನು ಸೆಳೆಯುತ್ತದೆ. ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್ ಹಾಗೂ ಎಲ್ಇಡಿ ಟರ್ನ್ ಸಿಗ್ನಲ್‌ಗಳನ್ನು ಪಡೆದಿದೆ. ಈ ಬೈಕ್ 2,055 ಎಂಎಂ ಉದ್ದ, 810 ಎಂಎಂ ಅಗಲ ಹಾಗೂ 1,070 ಎಂಎಂ ಎತ್ತರವಿವೂ ಇದೆ. ಜೊತೆಗೆ 160 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,370 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

2005 New Royal Enfield Hunter 350 Bike Launched In India Rs 1 50 Starting Price Details

ನೂತನ ರಾಯಲ್ ಎನ್‌ಫೀಲ್ಡ್ ಹಂಟರ್ 350 ಮೋಟಾರ್‌ಸೈಕಲ್‌ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. 349 ಸಿಸಿ ಸಿಂಗಲ್-ಸಿಲಿಂಡರ್, 4-ಸ್ಟ್ರೋಕ್, ಏರ್-ಆಯಿಲ್ ಕೂಲ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 6,100 ಆರ್‌ಪಿಎಂನಲ್ಲಿ 20.2 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 4,000 ಆರ್‌ಪಿಎಂನಲ್ಲಿ 27 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5 - ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.

ಈ ಬೈಕ್ ಹತ್ತಾರು ಆಕರ್ಷಕವಾದ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಡಿಜಿಟಲ್ - ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಟೈಪ್-ಸಿ ಯುಎಸ್‌ಬಿ ಫಾಸ್ಟ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದು 181 ಕೆಜಿ ತೂಕವಿದ್ದು, 13-ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

2005 New Royal Enfield Hunter 350 Bike Launched In India Rs 1 50 Starting Price Details

ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಮೋಟಾರ್‌ಸೈಕಲ್ ಮುಂಭಾಗ (ಫ್ರಂಟ್), ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) 6 - ಸ್ಟೆಪ್ ಅಡ್ಜಸ್ಟಬಲ್ ಪ್ರಿಲೋಡ್ ಟ್ವಿನ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ - ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, April 26, 2025, 20:52 [IST]
English summary
2005 new royal enfield hunter 350 bike launched in india rs 1 50 starting price details
Read more on royal enfield india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+