Hero: ಬಡವರು ಖರೀದಿಸಬಹುದು.. ಅತಿ ಕಡಿಮೆ ಬೆಲೆಗೆ 2025ರ ಹೀರೋ ಗ್ಲಾಮರ್ ಬೈಕ್ ಬಿಡುಗಡೆ!
ಹೀರೋ ಮೋಟೋಕಾರ್ಪ್ (Hero MotoCorp) ನಂಬರ್ 1 ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ 'ಸ್ಪ್ಲೆಂಡರ್' ಸೇರಿದಂತೆ ವಿವಿಧ ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಸದ್ಯ ಹೀರೋ ಕಂಪನಿಯು ಕೆಲವೊಂದು ನವೀಕರಣಗಳೊಂದಿಗೆ 2025ರ ಗ್ಲಾಮರ್ ಮೋಟಾರ್‌ಸೈಕಲ್‌ನ್ನು ಬಿಡುಗಡೆಗೊಳಿಸಿದೆ. ಇದು ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಬನ್ನಿ, ಈ ಬೈಕ್‌ನ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
ಹೊಚ್ಚ ಹೊಸ 2025ರ ಹೀರೋ ಗ್ಲಾಮರ್ (Hero Glamour) ಮೋಟಾರ್‌ಸೈಕಲ್, ರೂ.84,698 ರಿಂದ ರೂ.90,698 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಡ್ರಮ್ ಬ್ರೇಕ್, ಡಿಸ್ಕ್ ಬ್ರೇಕ್, ಡ್ರಮ್ ಬ್ರೇಕ್ ಒಬಿಡಿ-2ಬಿ ಮತ್ತು ಡಿಸ್ಕ್ ಬ್ರೇಕ್ ಒಬಿಡಿ-2ಬಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

ನೂತನ ಹೀರೋ ಗ್ಲಾಮರ್ ಬೈಕ್ ವಿನ್ಯಾಸದಲ್ಲಿ ಯಾವುದೇ ಪ್ರಮುಖವಾದ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದು ಎಲ್ಇಡಿ ಹೆಡ್‌ಲೈಟ್ ಮತ್ತು ಸಿಂಗಲ್-ಪೀಸ್ ಸೀಟ್ ಆಯ್ಕೆಯನ್ನು ಒಳಗೊಂಡಿದೆ. ಕ್ಯಾಂಡಿ ಬ್ಲೇಜಿಂಗ್ ರೆಡ್, ಬ್ಲ್ಯಾಕ್ ಮೆಟಾಲಿಕ್ ಸಿಲ್ವರ್ ಹಾಗೂ ಟೆಕ್ನೋ ಬ್ಲೂ ಮ್ಯಾಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಈ ಮೋಟಾರ್‌ಸೈಕಲ್‌ನ್ನು ಒಬಿಡಿ-2ಬಿ (OBD-2B) ಮಾನದಂಡಗಳ ಅನ್ವಯ ನವೀಕರಣಕ್ಕೆ ಒಳಪಡಿಸಲಾಗಿದ್ದು, ಇಂಗಾಲ ಹೊರಸೂಸುವಿಕೆಯಲ್ಲಿ ಯಾವುದೇ ರೀತಿಯಲ್ಲಿ ತಾಂತ್ರಿಕ ದೋಷಗಳನ್ನು ಕಂಡು ಬಂದಾಗ ಸವಾರನನ್ನು ಎಚ್ಚರಿಸುತ್ತದೆ. ಇದು ಬಿಟ್ಟರೆ, ಹೀರೋ ಗ್ಲಾಮರ್ ಕಾರ್ಯಕ್ಷಮತೆಯಲ್ಲಿಯೂ ಯಾವುದೇ ಮಾರ್ಪಾಡುಗಳು ಆಗಿಲ್ಲ.

ಹೊಸ 2025ರ ಹೀರೋ ಗ್ಲಾಮರ್ ಬೈಕ್ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. ಇದು 124.7 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 10 ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.4 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 63 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ನೂತನ ಹೀರೋ ಗ್ಲಾಮರ್ ಮೋಟಾರ್‌ಸೈಕಲ್ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಡಿಜಿಟಲ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಈ ಬೈಕ್ 121 ಕೆಜಿ ತೂಕವಿದ್ದು, 13.6 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್ ಆಯ್ಕೆಯನ್ನು ಪಡೆದಿದೆ.

ಈ ಬೈಕ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) 5 - ಸ್ಟೆಪ್ ಪ್ರಿಲೋಡ್ ಅಡ್ಜಸ್ಟಬಲ್ ಡುಯಲ್ ಶಾಕ್ ಅಬ್ಸಾರ್ಬರ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಜೊತೆಗೆ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಇನ್ನು, 2025ರ ಹೀರೋ ಗ್ಲಾಮರ್ ಮೋಟಾರ್‌ಸೈಕಲ್ ಬಿಡುಗಡೆಯಾಗಿರುವ ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಮುಂಬರುವ ದಿನಗಳಲ್ಲಿ ಈ ಬೈಕ್‌ಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








