Hero: ಕೋಟ್ಯಂತರ ಜನರ ನಂಬಿಕೆ.. 79,000ಕ್ಕೆ ಹೊಸ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಬಿಡುಗಡೆ, ಏನಿದೆ ಹೊಸತು?
ಹೀರೋ ಸ್ಪ್ಲೆಂಡರ್ (Hero Splendor) ವಿಶ್ವದ ನಂಬರ್ 1 ಬೈಕ್ ಎಂದೇ ಹೆಸರುವಾಸಿಯಾಗಿದೆ. 4 ಕೋಟಿಗೂ ಅಧಿಕ ಮೋಟಾರ್‌ಸೈಕಲ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಲಾಗಿದೆ. ಇಂದು ಕೆಲವೊಂದು ನವೀಕರಣಗಳೊಂದಿಗೆ 2025ರ 'ಸ್ಪ್ಲೆಂಡರ್ ಪ್ಲಸ್' ಬೈಕ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿದೆ. ನೂತನ ಮೋಟಾರ್‌ಸೈಕಲ್ ಅತ್ಯಂತ ಕೈಗಟುಕುವ ಬೆಲೆಯನ್ನು ಹೊಂದಿದೆ. ಇದರೊಂದಿಗೆ ಸ್ಪ್ಲೆಂಡರ್ ಪ್ಲಸ್ (Splendor Plus), ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ (Splendor Plus XTEC) ಹಾಗೂ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ 2.0 (Splendor Plus XTEC 2.0) ಎಂಬ ಮೂರು ವಿಧದಲ್ಲೂ ಸಿಗುತ್ತದೆ.
ಹೊಚ್ಚ ಹೊಸ ಹೀರೋ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ಸೈಕಲ್‌ನ 'ಡ್ರಮ್' ಮಾಡೆಲ್ ರೂ.79,096 (ಎಕ್ಸ್-ಶೋರೂಂ - ನವದೆಹಲಿ) ಬೆಲೆಯನ್ನು ಹೊಂದಿದೆ. ಅದೇ ರೀತಿಯಲ್ಲಿ 'ಐ3ಎಸ್' ಮಾಡೆಲ್ ಸ್ವಲ್ಪ ಹೆಚ್ಚಿನ ದರವನ್ನು ಪಡೆದಿದ್ದು, ರೂ.80,066 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ.

ನೂತನ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಬೈಕ್‌ನ 'ಡ್ರಮ್' ಮಾಡೆಲ್ ರೂ.82,751 ಮತ್ತು 'ಡಿಸ್ಕ್' ಮಾಡೆಲ್ ರೂ.86,051 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಹಾಗೆಯೇ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ 2.0 ಮೋಟಾರ್‌ಸೈಕಲ್ ರೂ.85,001 ಬೆಲೆಯನ್ನು ಒಳಗೊಂಡಿದೆ. ವಿಶೇಷವಾಗಿ ಈ ಹೀರೋ ಸ್ಪ್ಲೆಂಡರ್ ಪ್ಲಸ್ ವಿನ್ಯಾಸದಲ್ಲೂ ಅಷ್ಟಾಗಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಹೆಚ್ಚುವರಿಯಾಗಿ ಬಾಡಿ ಪ್ಯಾನೆಲ್‌ಗಳಲ್ಲಿ ಹೊಸದಾದ ಗ್ರಾಫಿಕ್ಸ್ ಅನ್ನು ಸೇರಿಸಲಾಗಿದೆ.
ನೂತನ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ಸೈಕಲ್‌ನ ಎಂಜಿನ್‌ನ್ನು 'ಒಬಿಡಿ 2ಬಿ' ಮಾನದಂಡಗಳ ಅನ್ವಯ ನವೀಕರಿಸಲಾಗಿದೆ. ಇದು ಇಂಗಾಲ ಹೊರಸೂಸುವಿಕೆಯಲ್ಲಿ ತಾಂತ್ರಿಕ ದೋಷಗಳು ಕಂಡುಬಂದರೆ, ಸವಾರನನ್ನು ಎಚ್ಚರಿಸುತ್ತದೆ. ಎಂಜಿನ್‌ನ್ನು ಮೇಲ್ದರ್ಜೆರಿಸಿದ್ದರೂ ಕಾರ್ಯಕ್ಷಮತೆಯಲ್ಲಿ ಯಾವುದೇ ಪ್ರಮುಖವಾದ ಮಾರ್ಪಾಡನ್ನು ಪಡೆದಿಲ್ಲ.

ಈ ಸ್ಪ್ಲೆಂಡರ್ ಪ್ಲಸ್ ಬೈಕ್ 97.2 ಸಿಸಿ, ಏರ್-ಕೂಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 7.91 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 8.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 70 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡಬಲ್ಲದು.
ಹೊಸ ಹೀರೋ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ಸೈಕಲ್ ವಿವಿಧ ಮಾಡೆಲ್‌ಗಳಿಗೆ ಅನುಗುಣವಾಗಿ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ ಮುಂಭಾಗ (ಫ್ರಂಟ್) ಡಿಸ್ಕ್ ಬ್ರೇಕ್, ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಬ್ಲೂಟೂತ್ ಕನೆಕ್ಟಿವಿಟಿ, ಸ್ಮಾರ್ಟ್‌ಫೋನ್ ಅಪ್ಲಿಕೇಶನ್ ಸಪೋರ್ಟ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೀರೋ ಪ್ಯಾಶನ್ ಪ್ಲಸ್ ಬೈಕ್ ಕೂಡ ಮಾರಾಟಕ್ಕೆ: ಇದು ರೂ.82,016 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಬ್ಲೂಯಿಶ್ ಟೀಲ್ ಹಾಗೂ ಸ್ಪೋರ್ಟ್ಸ್ ರೆಡ್ ಬ್ಲ್ಯಾಕ್ ಎಂಬ ಎರಡು ಹೊಸ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಈ ಮೋಟಾರ್‌ಸೈಕಲ್ 115 ಕೆಜಿ ತೂಕವಿದ್ದು, 11 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.
ನೂತನ ಪ್ಯಾಶನ್ ಪ್ಲಸ್ ಬೈಕ್, 97.2 ಸಿಸಿ ಒಬಿಡಿ 2ಬಿ ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 60 ರಿಂದ 70 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡಬಲ್ಲದು. ಡಿಜಿಟಲ್-ಅನಲಾಗ್ ಕ್ಲಸ್ಟರ್, ಇಂಟಿಗ್ರೇಟೆಡ್ ಬ್ರೇಕಿಂಗ್ ಸಿಸ್ಟಮ್ ಮತ್ತು ಮೊಬೈಲ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








