ನಿನ್ನೆ ಬಿಡುಗಡೆ.. ಅಗ್ಗದ ದರ.. ಸ್ಪ್ಲೆಂಡರ್ ಎದುರಾಳಿ 'ಹೋಂಡಾ ಶೈನ್ 100' ಬೈಕ್ ಕುರಿತ ಪ್ರಮುಖಾಂಶಗಳಿವು!
ಹೋಂಡಾ ಶೈನ್ 100 (Honda Shine 100) ಜನಪ್ರಿಯ ಬೈಕ್ ಆಗಿದ್ದು, ಶ್ರೀಸಾಮಾನ್ಯರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನಿನ್ನೆಯಷ್ಟೇ ಹೋಂಡಾ ಕಂಪನಿಯು ಈ ಮೋಟಾರ್‌ಸೈಕಲ್‌ನ 2025ರ ನೂತನ ಮಾಡೆಲ್‌ನ್ನು ಆದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಇದು ವಿನ್ಯಾಸ ಹಾಗೂ ಕಾರ್ಯಕ್ಷಮತೆಯಲ್ಲಿ ಒಂದಷ್ಟು ಬದಲಾವಣೆಗಳನ್ನು ಪಡೆದುಕೊಂಡು ಮಾರಾಟಕ್ಕೂ ಬಂದಿದೆ. ನಾವು ಈ ಬೈಕ್‌ನ ಪ್ರಮುಖಾಂಶಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ (Price): ಹೊಚ್ಚ ಹೊಸ ಹೋಂಡಾ ಶೈನ್ 100 ಮೋಟಾರ್‌ಸೈಕಲ್, ಅತಿ ಕಡಿಮೆ ಬೆಲೆಗೆ ಬಿಡುಗಡೆಗೊಂಡಿದೆ. ಇದು ರೂ.68,767 ಎಕ್ಸ್-ಶೋರೂಂ ದರವನ್ನು ಪಡೆದಿದೆ. ಇದರಿಂದ ಶ್ರೀಸಾಮಾನ್ಯರು ಕೂಡ ಸುಲಭವಾಗಿ ಕೊಂಡುಕೊಳ್ಳುಲು ಸಾಧ್ಯವಾಗಲಿದ್ದು, ತಮ್ಮ ಕಚೇರಿಗೆ ಹೋಗಲು ಸೇರಿದಂತೆ ಇತರೆ ಕಾರ್ಯಗಳಿಗೆ ಬಳಕೆ ಮಾಡಬಹುದು.

ವಿನ್ಯಾಸ & ಬಣ್ಣಗಳು (Design & Colors): ಈ ಬೈಕ್ ಹಳೆಯ ಮಾಡೆಲ್ ರೀತಿಯ ವಿನ್ಯಾಸವನ್ನು ಪಡೆದಿದ್ದು, ಹೆಚ್ಚು ಆಕರ್ಷಕವಾದ ಕಾಣಲು ನವೀನವಾದ ಗ್ರಾಫಿಕ್ಸ್ ಅನ್ನು ಒಳಗೊಂಡಿದೆ. ಬ್ಲ್ಯಾಕ್ ವಿತ್ ರೆಡ್, ಬ್ಲ್ಯಾಕ್ ವಿತ್ ಬ್ಲೂ, ಬ್ಲ್ಯಾಕ್ ವಿತ್ ಆರೆಂಜ್, ಬ್ಲ್ಯಾಕ್ ವಿತ್ ಗ್ರೇ & ಬ್ಲ್ಯಾಕ್ ವಿತ್ ಗ್ರೀನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಕಾರ್ಯಕ್ಷಮತೆ (Performance): ನೂತನ ಹೋಂಡಾ ಶೈನ್ 100 ಮೋಟಾರ್‌ಸೈಕಲ್, 98.98 ಸಿಸಿ ಒಬಿಡಿ-2ಬಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 7.28 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.04 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 65 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ.

ವೈಶಿಷ್ಟ್ಯಗಳು (Features): ಹೊಸ ಶೈನ್ 100 ಮೋಟಾರ್‌ಸೈಕಲ್ ಯುವ ಗ್ರಾಹಕರನ್ನು ಸೆಳೆಯುವ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಹ್ಯಾಲೊಜೆನ್ ಹೆಡ್‌ಲ್ಯಾಂಪ್, ಬಲ್ಬ್-ಟರ್ನ್ ಇಂಡಿಕೇಟರ್‌ಗಳು, ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್-ಸ್ಟ್ಯಾಂಡ್ ಸೆನ್ಸರ್, ಸಿಂಗಲ್-ಪೀಸ್ ಸೀಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಬೈಕ್ 99 ಕೆಜಿ ತೂಕವಿದ್ದು, 9 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System): ಈ ಮೋಟಾರ್‌ಸೈಕಲ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂಭಾಗ (ರೇರ್) ಡುಯಲ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಅನ್ನು ಒಳಗೊಂಡಿದೆ. ಜೊತೆಗೆ ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. ಜೊತೆಗೆ ಸಿಬಿಎಸ್ (ಕಂಬೈನ್ಡ್ - ಬ್ರೇಕಿಂಗ್ ಸಿಸ್ಟಮ್) ಆಯ್ಕೆಯನ್ನು ಹೊಂದಿದೆ.
ಇನ್ನು, 2025ರ ನೂತನ 'ಹೋಂಡಾ ಶೈನ್ 100' ಬೈಕ್ ಬಿಡುಗಡೆಯಾಗಿರುವುದು ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಬೆಲೆಗೆ ತಕ್ಕಂತೆ ಸಾಕಷ್ಟು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಖರೀದಿದಾರರ ಆಯ್ಕೆಯ ದ್ವಿಚಕ್ರ ವಾಹನವಾಗುವುದರಲ್ಲಿ ಎರಡು ಮಾತಿಲ್ಲ. ಮುಂಬರುವ ದಿನಗಳಲ್ಲಿ ಈ ಮೋಟಾರ್‌ಸೈಕಲ್‌ಗೆ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications