Kawasaki: ಹೊಸ ಕವಾಸಕಿ ನಿಂಜಾ 650 ಕೆಆರ್‌ಟಿ ಎಡಿಷನ್ ಬೈಕ್ ಬಿಡುಗಡೆ, ಬೆಲೆ ಎಷ್ಟಿದೆ ಗೊತ್ತಾ?

ಕವಾಸಕಿ ಇಂಡಿಯಾ (Kawasaki India) ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಜಡ್900, ನಿಂಜಾ ಜಡ್-10ಆರ್, ನಿಂಜಾ 300, ನಿಂಜಾ 500 ಮತ್ತು ಡಬ್ಲ್ಯೂ175 ಸೇರಿದಂತೆ ವಿವಿಧ ಬೈಕ್‌ಗಳನ್ನು ಮಾರಾಟಗೊಳಿಸುತ್ತಿದೆ. ಸದ್ಯ ಕಂಪನಿಯು 2025ರ ನವೀಕರಿಸಿದ 'ನಿಂಜಾ 650 ಕೆಆರ್‌ಟಿ ಎಡಿಷನ್'ನ್ನು ಬಿಡುಗಡೆಗೊಳಿಸಿದೆ. ಇದು ಒಂದಷ್ಟು ಕಾಸ್ಮೆಟಿಕ್ ಬದಲಾವಣೆಗಳನ್ನು ಹೊಂದಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಹೊಚ್ಚ ಹೊಸ ಕವಾಸಕಿ ನಿಂಜಾ 650 ಕೆಆರ್‌ಟಿ ಎಡಿಷನ್ (Kawasaki Ninja 650 KRT Edition), ಸ್ಪೋರ್ಟ್ಸ್ ಬೈಕ್ ಆಗಿದೆ. ಈ ಹಿನ್ನೆಲೆ, ಕೊಂಚ ದುಬಾರಿ ಬೆಲೆಯನ್ನು ಹೊಂದಿದೆ. ಸರಿ ಸುಮಾರು ರೂ.7.27 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ.

2025 Kawasaki Ninja 650 KRT Edition Bike Launched In India Rs 7 27 Lakh Price Details

ನೂತನ ಕವಾಸಕಿ ನಿಂಜಾ 650 ಕೆಆರ್‌ಟಿ ಎಡಿಷನ್ ಮೋಟಾರ್‌ಸೈಕಲ್ ವಿನ್ಯಾಸದಲ್ಲೂ ಅಷ್ಟಾಗಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಕೆಲವು ಕಾಸ್ಮೆಟಿಕ್ ಮಾರ್ಪಾಡುಗಳನ್ನು ಮಾತ್ರ ಹೊಂದಿದೆ. ಇದು ಟ್ವಿನ್ ಎಲ್ಇಡಿ ಹೆಡ್‌ಲೈಟ್‌ಗಳು ಮತ್ತು ಅಂಡರ್‌ಬೆಲ್ಲಿ ಎಕ್ಸಾಸ್ಟ್'ನ್ನು ಒಳಗೊಂಡಿದೆ. ಜೊತೆಗೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಬೈಕ್ ಯಾವ ಕಾರಿಗೂ ಕಮ್ಮಿಯಿಲ್ಲದ ರೀತಿಯಲ್ಲಿ ಸವಾರನ ಸ್ನೇಹಿಯಾಗಿರುವ ಹತ್ತಾರು ಉತ್ತಮವಾದ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 4.3-ಇಂಚಿನ ಟಿಎಫ್‌ಟಿ ಕಲರ್ ಡಿಸ್‌ಪ್ಲೇ, ಬ್ಲೂಟೂತ್ ಕನೆಕ್ಟಿವಿಟಿ, ಟ್ರಾಕ್ಷನ್ ಕಂಟ್ರೋಲ್ ಮತ್ತು ಎಬಿಎಸ್ (ಆಂಟಿ - ಲಾಕ್
ಬ್ರೇಕಿಂಗ್ ಸಿಸ್ಟಮ್) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

2025 Kawasaki Ninja 650 KRT Edition Bike Launched In India Rs 7 27 Lakh Price Details

ಹೊಸ ಕವಾಸಕಿ ನಿಂಜಾ 650 ಕೆಆರ್‌ಟಿ ಎಡಿಷನ್ ಮೋಟಾರ್‌ಸೈಕಲ್‌ನ ಪವರ್‌ಟ್ರೇನ್ ಆಯ್ಕೆಯಲ್ಲಿಯೂ ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ. ಇದು 649 ಸಿಸಿ ಲಿಕ್ವಿಡ್-ಕೂಲ್ಡ್ ಪ್ಯಾರಲಲ್-ಟ್ವಿನ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8,000 ಆರ್‌ಪಿಎಂನಲ್ಲಿ 67 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 6,700 ಆರ್‌ಪಿಎಂನಲ್ಲಿ 64 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 21 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ನಿಂಜಾ 650 ಕೆಆರ್‌ಟಿ ಎಡಿಷನ್ ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಅಡ್ಜಸ್ಟಬಲ್ ಮೊನೊ-ಶಾಕ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಹೊಂದಿದೆ. ಸುರಕ್ಷತೆಗಾಗಿ ಮುಂದೆ 300 ಎಂಎಂ ಮತ್ತು ಹಿಂದೆ 220 ಎಂಎಂ ಡಿಸ್ಕ್ ಬ್ರೇಕ್‌ನ್ನು ಒಳಗೊಂಡಿದೆ. ಜೊತೆಗೆ 17-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.

2025 Kawasaki Ninja 650 KRT Edition Bike Launched In India Rs 7 27 Lakh Price Details

2025ರ ಕವಾಸಕಿ ನಿಂಜಾ 500 ಮೋಟಾರ್‌ಸೈಕಲ್ ಕೂಡ ಬಿಡುಗಡೆ: ಇದು ರೂ.5.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಈ ಬೈಕ್ 451 ಸಿಸಿ ಒಬಿಡಿ-2ಬಿ ಪ್ಯಾರಲಲ್ ಟ್ವಿನ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 44.77 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 42.6 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದ್ದು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, April 21, 2025, 15:45 [IST]
English summary
2025 kawasaki ninja 650 krt edition bike launched in india rs 7 27 lakh price details
Read more on kawasaki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+