2025ರ ಹೀರೋ ಸ್ಪ್ಲೆಂಡರ್ ಪ್ಲಸ್.. ಅದೇ ಬೆಲೆಗೆ ಸಿಗುವ ಇತರೆ ಟೂ ವೀಲರ್‌ಗಳಿವು, ಒಂದಕ್ಕಿಂತ ಒಂದು ಸೂಪರ್!

ಭಾರತದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಈಚೆಗೆ 2025ರ ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ಬೈಕ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ಇದು ಒಂದಷ್ಟು ನವೀಕರಣಗಳಿಗೂ ಸಾಕ್ಷಿಯಾಗಿತ್ತು. ಈ ನೂತನ ಮೋಟಾರ್‌ಸೈಕಲ್ ಕನಿಷ್ಠ ರೂ.79,096 ಹಾಗೂ ಗರಿಷ್ಠ ರೂ.85,001 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 97.2 ಸಿಸಿ ಒಬಿಡಿ 2ಬಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ದೇಶೀಯ ಗ್ರಾಹಕರು ಇದೇ 'ಸ್ಪ್ಲೆಂಡರ್ ಪ್ಲಸ್' ಬೆಲೆಗೆ ಸಿಗುವ ಇತರೆ ಟೂ ವೀಲರ್‌ಗಳನ್ನು ಕೂಡ ತಮ್ಮ ದಿನನಿತ್ಯದ ಬಳಕೆಗಾಗಿ ಕೊಂಡುಕೊಳ್ಳಬಹುದು.

ರಿವೋಲ್ಟ್ ಆರ್‌ವಿ1 (Revolt RV1): ಇದೊಂದು ಎಲೆಕ್ಟ್ರಿಕ್ ಬೈಕ್ ಆಗಿದೆ. ರೂ. 89,999 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 100 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 70 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.

2025 New Hero Splendor Plus Same Price Other Good Two Wheelers Details

ಈ ರಿವೋಲ್ಟ್ ಆರ್‌ವಿ1 ಇ-ಮೋಟಾರ್‌ಸೈಕಲ್‌ನಲ್ಲಿ 2.8 ಕೆಡಬ್ಲ್ಯೂ ಮೋಟಾರ್ ಬಳಕೆ ಮಾಡಲಾಗಿದೆ. ಇದು ಬ್ಲ್ಯಾಕ್-ರೆಡ್, ಟೈಟಾನ್ ರೆಡ್ ಸಿಲ್ವರ್ ಮತ್ತು ಬ್ಲ್ಯಾಕ್ ನಿಯಾನ್ ಗ್ರೀನ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ. 6-ಇಂಚಿನ ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಬಜಾಜ್ ಫ್ರೀಡಂ 125 (Bajaj Freedom 125): ಈ ಬೈಕ್ ರೂ.90,272 ರಿಂದ ರೂ.1.10 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. 125 ಸಿಸಿ ಪೆಟ್ರೋಲ್/ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದ್ದು, 330 ಕಿಲೋಮೀಟರ್ ಮೈಲೇಜ್ ನೀಡುತ್ತದೆ. ಎಲ್ಇಡಿ ಹೆಡ್‌ಲೈಟ್‌, ಬ್ಲೂಟೂತ್ ಕನೆಕ್ಟಿವಿಟಿ ಹಾಗೂ ಎಲ್‌ಸಿಡಿ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

2025 New Hero Splendor Plus Same Price Other Good Two Wheelers Details

ಹೋಂಡಾ ಆಕ್ಟಿವಾ 110 (Honda Activa 110): ಇದು ರೂ.81,000ವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 109.51 ಸಿಸಿ ಒಬಿಡಿ-2ಬಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ಬರೋಬ್ಬರಿ 42 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಸೆಂಟ್ ಬ್ಲ್ಯೂ ಮೆಟಾಲಿಕ್, ಪರ್ಲ್ ಸೈರನ್ ಬ್ಲ್ಯೂ, ರೆಬೆಲ್ ರೆಡ್ ಮೆಟಾಲಿಕ್ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಹೋಂಡಾ ಆಕ್ಟಿವಾ 110 ಸ್ಕೂಟರ್ ಹತ್ತಾರು ಉತ್ತಮವಾಗಿರುವ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಅನ್ನು ಒಳಗೊಂಡಿದೆ. ಸವಾರರಿಗೂ ಹೆಚ್ಚಿನ ರಕ್ಷಣೆಯನ್ನು ಒದಗಿಸಲಿದ್ದು, ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

2025 New Hero Splendor Plus Same Price Other Good Two Wheelers Details

ಸುಜುಕಿ ಆಕ್ಸೆಸ್ 125 (Suzuki Access 125): ಈ ಸ್ಕೂಟರ್ ರೂ. 86,481 ರಿಂದ ರೂ.98,083 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 125 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 47 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಟಿವಿಎಸ್ ರೈಡರ್ 125 (TVS Raider 125): ಇದು ರೂ.90,990 ರಿಂದ ರೂ.1.02 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಲಭ್ಯವಿದೆ. 124.8 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 56 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್ಇಡಿ ಲೈಟಿಂಗ್ ಸೆಟಪ್ ಮತ್ತು ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

2025 New Hero Splendor Plus Same Price Other Good Two Wheelers Details

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, April 22, 2025, 10:33 [IST]
English summary
2025 new hero splendor plus same price other good two wheelers details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+