ಅಗ್ಗದ ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಬೈಕ್ ಕುರಿತ ಪ್ರಮುಖಾಂಶಗಳಿವು.. ನಿಮಗೆ ಯಾರು ಹೇಳಲ್ಲ!

ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC) ಜನಪ್ರಿಯ ಬೈಕ್ ಆಗಿದೆ. ಈಚೆಗೆ ಈ ಮೋಟಾರ್‌ಸೈಕಲ್‌ನ 2025ರ ಮಾಡೆಲ್‌ನ್ನು ಬಿಡುಗಡೆಗೊಳಿಸಲಾಗಿತ್ತು. ನೂತನ ಬೈಕ್ ವಿನ್ಯಾಸದಲ್ಲಿ ಅಷ್ಟಾಗಿ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ. ಅದರ ಹೊರತಾಗಿ ಇದರ ಪವರ್‌ಟ್ರೇನ್‌ನ್ನು ಒಬಿಡಿ-2ಬಿ (OBD-2B) ಮಾನದಂಡಗಳ ಅನ್ವಯ ನವೀಕರಣಗೊಳಿಸಲಾಗಿದೆ. ಇದು ಇಂಗಾಲದ ಹೊರಸೂಸುವಿಕೆಯ ಸಂದರ್ಭದಲ್ಲಿ ಸಮಸ್ಯೆಗಳು ಕಂಡುಬಂದರೆ, ಅದನ್ನು ಪತ್ತೆ ಹಚ್ಚುತ್ತದೆ. ನೀವು ಹೊಚ್ಚ ಹೊಸ ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಮೋಟಾರ್‌ಸೈಕಲ್‌ನ್ನು ತೆಗೆದುಕೊಳ್ಳಲು ಆಲೋಚಿಸಿದ್ದೀರಾ.. ನಾವಿಲ್ಲಿ ಈ ಬೈಕ್‌ಗೆ ಸಂಬಂಧಿಸಿದ ಪ್ರಮುಖಾಂಶಗಳ ಬಗ್ಗೆ ತಿಳಿಸಿಕೊಟ್ಟಿದ್ದೇವೆ.

ಬೆಲೆ & ರೂಪಾಂತರಗಳು (Price & Variants): ನೂತನ ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಮೋಟಾರ್‌ಸೈಕಲ್‌, ಅತಿ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ಕನಿಷ್ಠ ರೂ.88,128 ಹಾಗೂ ಗರಿಷ್ಠ ರೂ.92,028 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಡ್ರಮ್ ಬ್ರೇಕ್ ಮತ್ತು ಡಿಸ್ಕ್ ಬ್ರೇಕ್ ಎಂಬ ರೂಪಾಂತರಗಳೊಂದಿಗೂ (ವೇರಿಯೆಂಟ್) ದೊರೆಯುತ್ತದೆ.

2025 New Hero Super Splendor XTEC Bike Top Things

ವಿನ್ಯಾಸ & ಬಣ್ಣಗಳು (Design & Colors): ಈ ಬೈಕ್ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಇದು ದಾರಿ ಹೋಕರನ್ನು ತನ್ನತ್ತ ಸೆಳೆದು ಬಿಡುತ್ತದೆ. ವಿಶೇಷವಾಗಿ ಎಲ್ಇಡಿ ಲೈಟಿಂಗ್ ಸೆಟಪ್ ಹೊಂದಿದೆ. ಮ್ಯಾಟ್ ನೆಕ್ಸಸ್ ಬ್ಲೂ, ಮ್ಯಾಟ್ ಗ್ರೇ, ಬ್ಲಾಕ್ ಮತ್ತು ಕ್ಯಾಂಡಿ ಬ್ಲೇಜಿಂಗ್ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ವೈಶಿಷ್ಟ್ಯಗಳು (Features): ಹೊಸ ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಮೋಟಾರ್‌ಸೈಕಲ್‌ ಹತ್ತಾರು ಉತ್ತಮವಾದ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿಯನ್ನು ಹೊಂದಿದೆ. ಈ ಬೈಕ್ 122 ಕೆಜಿ ತೂಕವಿದ್ದು, 12 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

2025 New Hero Super Splendor XTEC Bike Top Things

ಕಾರ್ಯಕ್ಷಮತೆ (Performance): ನೂತನ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಬೈಕ್, 124.7 ಸಿಸಿ ಸಾಮರ್ಥ್ಯದ ಏರ್-ಕೋಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 10.72 ಬಿ‌ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.6 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಜೊತೆಗೆ 69 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System): ಈ ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಡುಯಲ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಸುರಕ್ಷತೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

2025 New Hero Super Splendor XTEC Bike Top Things

ಒಟ್ಟಾರೆಯಾಗಿ ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಮೋಟಾರ್‌ಸೈಕಲ್‌ ಬಿಡುಗಡೆಯಾಗಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಮುಂಬರುವ ದಿನಗಲ್ಲಿ ಈ ಬೈಕ್‌ಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, April 17, 2025, 10:00 [IST]
English summary
2025 new hero super splendor xtec bike top things
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+