Hero: ಹೊಸ ನವೀಕರಣದೊಂದಿಗೆ ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಬೈಕ್ ಬಿಡುಗಡೆ.. ಬೆಲೆ ಇಷ್ಟೇನಾ?
ನವದೆಹಲಿ ಮೂಲದ ಹೀರೋ ಮೋಟೋಕಾರ್ಪ್ (Hero MotoCorp) ನಂ.1 ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು 'ಸ್ಪ್ಲೆಂಡರ್' ಬೈಕ್‌ನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಈ ಹಿನ್ನೆಲೆ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಹೀರೋ ಕಂಪನಿಯು 2025ರ ಹೊಚ್ಚ ಹೊಸ 'ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್' ಮಾಡೆಲ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಇದು ಒಂದಷ್ಟು ನವೀಕರಣಗಳನ್ನು ಪಡೆದುಕೊಂಡಿದೆ. ಬನ್ನಿ.. ಈ ನೂತನ ಮೋಟಾರ್‌ಸೈಕಲ್‌ನ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
2025ರ ಹೊಸ ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC) ಬೈಕ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಮಾರಾಟಕ್ಕೆ ಬಂದಿದೆ. ಇದು ರೂ.88,128 ರಿಂದ ರೂ.92,028 (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದೆ. ಡ್ರಮ್ ಬ್ರೇಕ್ (Drum Brake) ಹಾಗೂ ಡಿಸ್ಕ್ ಬ್ರೇಕ್ (Disc Brake) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಮೋಟಾರ್‌ಸೈಕಲ್ ಎಂಜಿನ್‌ನ್ನು ಅತ್ಯಾಧುನಿಕವಾಗಿರುವ ಒಬಿಡಿ-2ಬಿ (OBD-2B) ಮಾನದಂಡಗಳ ಅನ್ವಯ ಮೇಲ್ದರ್ಜೆರಿಸಲಾಗಿದೆ. ಇಂಗಾಲದ ಹೊರಸೂಸುವಿಕೆಯ ಸಂದರ್ಭದಲ್ಲಿ ತಾಂತ್ರಿಕ ದೋಷಗಳು ಕಂಡುಬಂದರೆ, ಸವಾರನನ್ನು ಎಚ್ಚರಿಸಲು ನೆರೆವಾಗುತ್ತದೆ. ಇದು ಬಿಟ್ಟರೆ, ನೂತನ ಬೈಕ್ ಕಾರ್ಯಕ್ಷಮತೆಯಲ್ಲಿ ಯಾವುದೇ ಪ್ರಮುಖ ಬದಲಾವಣೆಗಳನ್ನು ಕಂಪನಿಯು ಮಾಡಿಲ್ಲ.
ನೂತನ ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಮೋಟಾರ್‌ಸೈಕಲ್, 124.7 ಸಿಸಿ ಸಾಮರ್ಥ್ಯದ ಏರ್-ಕೋಲ್ಡ್, ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 7,500 ಆರ್‌ಪಿಎಂನಲ್ಲಿ 10.72 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 6,000 ಆರ್‌ಪಿಎಂನಲ್ಲಿ 10.6 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 69 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಒಬಿಡಿ-2ಬಿ ಮಾನದಂಡಗಳ ಪ್ರಕಾರ, ನವೀಕರಣ ಮಾಡಿರುವ ಹೊರತಾಗಿ ಈ ಬೈಕ್‌ನ ವಿನ್ಯಾಸದಲ್ಲಿ ಯಾವುದೇ ಮಾರ್ಪಾಡುಗಳು ಆಗಿಲ್ಲ. ಇದು ಮ್ಯಾಟ್ ನೆಕ್ಸಸ್ ಬ್ಲೂ, ಮ್ಯಾಟ್ ಗ್ರೇ, ಬ್ಲಾಕ್ ಹಾಗೂ ಕ್ಯಾಂಡಿ ಬ್ಲೇಜಿಂಗ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಎಲ್ಇಡಿ ಲೈಟಿಂಗ್, ಡಿಜಿಟಲ್ ಕ್ಲಸ್ಟರ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಹೊಸ ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಮೋಟಾರ್‌ಸೈಕಲ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಡುಯಲ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ಈ ಬೈಕ್ 122 ಕೆಜಿ ತೂಕವಿದ್ದು, 12 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.

2025ರ ಹೀರೋ ಗ್ಲಾಮರ್ ಮೋಟಾರ್‌ಸೈಕಲ್ ಕೂಡ ಮಾರಾಟಕ್ಕೆ: ಇದು ರೂ.84,698 ರಿಂದ ರೂ.90,698 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 124.7 ಸಿಸಿ ಒಬಿಡಿ-2ಬಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 63 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಕನ್ಸೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








