Honda Activa 110: ಲಕ್ಷುರಿ ಲುಕ್.. 2025ರ ಹೋಂಡಾ ಆಕ್ಟಿವಾ 110 ಸ್ಕೂಟರ್ ಬಿಡುಗಡೆ, 80,950 ಬೆಲೆ.. ಹೇಗಿದೆ?
ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India), ನಂ.1 ಸ್ಕೂಟರ್ ತಯಾರಕ ಕಂಪನಿಯಾಗಿದೆ. ಅದರಲ್ಲೂ 1999ರಲ್ಲಿ ಬಿಡುಗಡೆಯಾದ 'ಆಕ್ಟಿವಾ 110' ಕಳೆದ 2 ದಶಕಗಳಿಂದ ಕಂಪನಿಯ ಬೆಸ್ಟ್ ಸೇಲರ್ ಸ್ಕೂಟರ್ ಆಗಿದೆ. ಈ ಕಾರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಇದೇ ಆಕ್ಟಿವಾ 110 ಸ್ಕೂಟರ್ ಒಂದಷ್ಟು ನವೀಕರಣಗಳನ್ನು ಪಡೆದುಕೊಂಡು ಮಾರಾಟಕ್ಕೂ ಬಂದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ನೂತನ ಹೋಂಡಾ ಆಕ್ಟಿವಾ 110 (Honda Activa 110) ಸ್ಕೂಟರ್‌ನ್ನು ಅತ್ಯಂತ ಕಡಿಮೆ ಬೆಲೆಯಲ್ಲಿ ಪರಿಚಯಿಸಲಾಗಿದೆ. ಇದು ರೂ.80,950 ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ನ್ನು ಪಡೆದಿದೆ. ಜೊತೆಗೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ.

ಈ ಹೋಂಡಾ ಆಕ್ಟಿವಾ 110 ಸ್ಕೂಟರ್ ಪವರ್‌ಟ್ರೇನ್‌ನ್ನು ಒಬಿಡಿ-2ಬಿ (OBD-2B) ಮಾನದಂಡಗಳ ಅನ್ವಯ ಮೇಲ್ದರ್ಜೆರಿಸಲಾಗಿದೆ. ಇದು 109.51 ಸಿಸಿ ಏರ್-ಕೋಲ್ಡ್ ಸಿಂಗಲ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 7.9 ಪಿಎಸ್ (ಅಶ್ವ ಶಕ್ತಿ) ಮತ್ತು 9.05 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 59.5 ಕೆಎಂಪಿಎಲ್‌ವರೆಗೂ ನೀಡಬಹುದು ಎಂದು ಅಂದಾಜಿಸಲಾಗಿದೆ.
ಹೊಸ ಆಕ್ಟಿವಾ 110 ಸ್ಕೂಟರ್ ವಿಶೇಷವಾಗಿ 4.2-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌ನ್ನು ಪಡೆದುಕೊಂಡಿದ್ದು, ಫ್ಯುಯೆಲ್ ಲೆವೆಲ್, ಓಡೋಮೀಟರ್ ಸಂಬಂಧ ಮಾಹಿತಿಯನ್ನು ಒದಗಿಸುತ್ತದೆ. ಇದನ್ನು ಬ್ಲೂಟೂತ್ ಸಹಾಯದಿಂದ ಸ್ಮಾರ್ಟ್‌ಫೋನ್‌ಗೂ ಸಂಪರ್ಕಿಸಬಹುದು. ಹಾಗೆಯೇ ಹೋಂಡಾ ರೋಡ್‌ಸಿಂಕ್ ಫೋನ್ ಅಪ್ಲಿಕೇಶನ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ & ಕಾಲ್/ ಎಸ್ಎಂಎಸ್ ಅಲರ್ಟ್‌ನ್ನು ಬೆಂಬಲಿಸುತ್ತದೆ.

ನೂತನ ಹೋಂಡಾ ಆಕ್ಟಿವಾ ಸ್ಕೂಟರ್, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಸಿಂಗಲ್-ಸೈಡೆಡ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ. ಮುಂದೆ 12-ಇಂಚು ಮತ್ತು ಹಿಂದೆ 10-ಇಂಚಿನ ಅಲಾಯ್ ವೀಲ್ ಸೆಟಪ್‌ನ್ನು ತನ್ನದಾಗಿಸಿಕೊಂಡಿದೆ.
ಹೋಂಡಾ ಆಕ್ಟಿವಾ 125 (Honda Activa 125): ಈ ಸ್ಕೂಟರ್ ಕೂಡ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.94,442 ರಿಂದ ರೂ.97,146 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 123.92 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 47 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ. ಟಿಎಫ್‌ಟಿ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೋಂಡಾ ಆಕ್ಟಿವಾ ಇ (Honda Activa e): ಇದೊಂದು ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ರೂ.1.17 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ 2 ಬ್ಯಾಟರಿ ಪ್ಯಾಕ್‌ಗಳನ್ನು ಒಳಗೊಂಡಿದ್ದು, ಪೂರ್ತಿ ಚಾರ್ಜ್‌ನಲ್ಲಿ 102 ಕಿಲೋಮಿಟರ್ ರೇಂಜ್ (ಮೈಲೇಜ್) ನೀಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ತನ್ನದಾಗಿಸಿಕೊಂಡಿದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications