ಮೊನ್ನೆಯಷ್ಟೇ ಬಿಡುಗಡೆ.. ಕಡಿಮೆ ಬೆಲೆಯ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್ ಕುರಿತ ಪ್ರಮುಖಾಂಶಗಳಿವು!

ರಾಯಲ್ ಎನ್‌ಫೀಲ್ಡ್ ಹಂಟರ್ 350 (Royal Enfield Hunter 350) ಯುವ ಗ್ರಾಹಕರ ನೆಚ್ಚಿನ ಬೈಕ್ ಎಂದೇ ಹೆಸರುವಾಸಿಯಾಗಿದೆ. ಈಚೆಗೆ, ಈ ಮೋಟಾರ್‌ಸೈಕಲ್‌ನ 2025ರ ಮಾಡೆಲ್‌ನ್ನು ಮಾರಾಟಕ್ಕೆ ತರಲಾಗಿದೆ. ಇದು ಹಲವು ನವೀಕರಣಗಳಿಗೂ ಸಾಕ್ಷಿಯಾಗಿದೆ. ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದಿದ್ದು, ಬಜೆಟ್ ಬೆಲೆಯಲ್ಲಿಯೂ ಸಿಗುತ್ತದೆ. ಬನ್ನಿ, ಈ ಬೈಕ್‌ನ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಪ್ರಮುಖಾಂಶಗಳನ್ನು ತಿಳಿಯೋಣ.

ಬೆಲೆ (Price): ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಮೋಟಾರ್‌ಸೈಕಲ್‌ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಸಿಗಲಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಲು ಸಾಧ್ಯವಾಗಲಿದೆ. ಇದು ಕನಿಷ್ಠ ರೂ.1,49,900 ಹಾಗೂ ಗರಿಷ್ಠ ರೂ.1,81,750 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

2025 New Royal Enfield Hunter 350 Bike Top Things Details

ವಿನ್ಯಾಸ & ಬಣ್ಣಗಳು (Design & Colors): ಈ ಬೈಕ್ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್ ಮತ್ತು ಎಲ್ಇಡಿ ಟರ್ನ್ ಸಿಗ್ನಲ್‌ಗಳನ್ನು ಪಡೆದಿದೆ. ಜೊತೆಗೆ ಆಕರ್ಷಕ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ. ಬಹುಮುಖ್ಯವಾಗಿ ಫ್ಯಾಕ್ಟರಿ ಬ್ಲ್ಯಾಕ್, ರಿಯೋ ವೈಟ್, ಡ್ಯಾಪರ್ ಗ್ರೇ, ಟೋಕಿಯೋ ಬ್ಲಾಕ್, ಲಂಡನ್ ರೆಡ್ ಹಾಗೂ ರೆಬೆಲ್ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಸುತ್ತಳತೆ (Dimension): ನೂತನ ರಾಯಲ್ ಎನ್‌ಫೀಲ್ಡ್ ಹಂಟರ್ 350 ಮೋಟಾರ್‌ಸೈಕಲ್‌ 2,055 ಎಂಎಂ ಉದ್ದ, 810 ಎಂಎಂ ಅಗಲ ಮತ್ತು 1,070 ಎಂಎಂ ಎತ್ತರವಿದೆ. ಇದರೊಟ್ಟಿಗೆ 160 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,370 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

2025 New Royal Enfield Hunter 350 Bike Top Things Details

ಕಾರ್ಯಕ್ಷಮತೆ (Performance): ಈ ಬೈಕ್ 349 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 20.2 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 27 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದೆ. 36 ಕೆಎಂಪಿಎಲ್‌ವರೆಗೆ ಕೊಡುತ್ತದೆ ಎಂದು ಅಂದಾಜಿಸಲಾಗಿದೆ.

ವೈಶಿಷ್ಟ್ಯಗಳು (Features): ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಮೋಟಾರ್‌ಸೈಕಲ್‌ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಡಿಜಿಟಲ್ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಟೈಪ್ - ಸಿ ಯುಎಸ್‌ಬಿ ಫಾಸ್ಟ್ ಚಾರ್ಜರ್‌ನ್ನು ಒಳಗೊಂಡಿದೆ. ಈ ಬೈಕ್ ಸರಿ ಸುಮಾರು 181 ಕೆಜಿ ತೂಕವಿದ್ದು, ಹೆಚ್ಚಿನ ದೂರ ಕ್ರಮಿಸಲು ಸಾಧ್ಯವಾಗುವಂತೆ 13-ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System): ಈ ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) 6-ಸ್ಟೆಪ್ ಅಡ್ಜಸ್ಟಬಲ್ ಪ್ರಿಲೋಡ್ ಟ್ವಿನ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್-ಚಾನೆಲ್ ಎಬಿಎಸ್ (ಆಂಟಿಲಾಕ್ - ಬ್ರೇಕಿಂಗ್ ಸಿಸ್ಟಮ್) ಮತ್ತು ಮುಂದೆ/ ಹಿಂದೆ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, April 28, 2025, 8:30 [IST]
English summary
2025 new royal enfield hunter 350 bike top things details
Read more on royal enfield india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+