Yamaha: 2025ರ ಹೊಸ ಯಮಹಾ ಎಫ್‌ಜಡ್-ಎಕ್ಸ್ ಹೈಬ್ರಿಡ್ ಬೈಕ್ ಬಿಡುಗಡೆ.. ಬೆಲೆ ಎಷ್ಟು, ವಿಶೇಷತೆಗಳೇನು?

ಜಪಾನ್ ಮೂಲದ ಯಮಹಾ (Yamaha), ಪ್ರಮುಖ ದ್ವಿಚಕ್ರ ವಾಹನ ತಯಾರಕ (Two Whellar) ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಬೈಕ್ ಹಾಗೂ ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಅದರಲ್ಲೂ ಕಂಪನಿಯ ಜನಪ್ರಿಯ ಮೋಟಾರ್‌ಸೈಕಲ್‌ ಆಗಿ 'ಎಫ್‌ಜಡ್-ಎಕ್ಸ್ ಹೈಬ್ರಿಡ್' ಹೊರಹೊಮ್ಮಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಈ ಬೈಕ್‌ನ್ನು ಒಂದಷ್ಟು ನವೀಕರಣಕ್ಕೆ ಒಳಪಡಿಸಲಾಗಿದ್ದು, 2025ರ ಮಾಡೆಲ್‌ನ್ನು ಬಿಡುಗಡೆಗೊಳಿಸಲಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

2025ರ ಹೊಚ್ಚ ಹೊಸ ಯಮಹಾ ಎಫ್‌ಜಡ್-ಎಕ್ಸ್ ಹೈಬ್ರಿಡ್ (Yamaha FZ-X Hybrid) ಮೋಟಾರ್‌ಸೈಕಲ್‌, ನವೀನವಾಗಿರುವ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಆಯ್ಕೆಯೊಂದಿಗೆ ಕಲರ್ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌ನ್ನು ಪಡೆದಿದೆ. ರೂ.1,49,990 ಬೆಲೆಯನ್ನು ಪಡೆದಿದೆ. ಇದೇ ಬೈಕ್‌ನ ನಾನ್ ಹೈಬ್ರಿಡ್ ಮಾಡೆಲ್ ರೂ.1,29,990 (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

2025 New Yamaha FZ-X Hybrid Bike Launched In India Rs 1 50 Lakh Price Details

ನೂತನ ಯಮಹಾ ಎಫ್‌ಜಡ್-ಎಕ್ಸ್ ಹೈಬ್ರಿಡ್ ಮೋಟಾರ್‌ಸೈಕಲ್‌ ನಿಯೋ ರೆಟ್ರೊ ವಿನ್ಯಾಸವನ್ನು ಹೊಂದಿದ್ದು, ಅದು ನೋಡುಗರ ಕಣ್ಣು ಕುಕ್ಕುವಂತಿದೆ. ವಿಶಾಲವಾಗಿರುವ ಹ್ಯಾಂಡಲ್‌ಬಾರ್, ಸರ್ಕ್ಯುಲರ್ ಹೆಡ್‌ಲ್ಯಾಂಪ್, ಸಿಂಗಲ್ ಪೀಸ್ ಸ್ಟೆಪ್ಡ್ ಸೀಟ್ ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಇದರೊಂದಿಗೆ ಅತ್ಯಾಧುನಿಕ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಬೈಕ್ ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 149 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೂಲ್ಡ್, ಫ್ಯುಯೆಲ್-ಇಂಜೆಕ್ಟೆಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್ ಆಯ್ಕೆಯನ್ನು ಹೊಂದಿದೆ. 7,250 ಆರ್‌ಪಿಎಂನಲ್ಲಿ 12.2 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5,500 ಆರ್‌ಪಿಎಂನಲ್ಲಿ 13.3 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 48 ಕಿ.ಮೀವರೆಗೂ ಮೈಲೇಜ್ ಕೊಡಬಲ್ಲದು.

2025 New Yamaha FZ-X Hybrid Bike Launched In India Rs 1 50 Lakh Price Details

ಹೊಸ ಯಮಹಾ ಎಫ್‌ಜಡ್-ಎಕ್ಸ್ ಹೈಬ್ರಿಡ್ ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) 7-ಸ್ಟೆಪ್ ಅಡ್ಜಸ್ಟಬಲ್ ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಪಡೆದಿದೆ. ಜೊತೆಗೆ ಸಿಂಗಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್‌ ಹಾಗೂ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಯಮಹಾ ಮಾರಾಟಗೊಳಿಸುವ ಇತರೆ ಪ್ರಮುಖ ಮೋಟಾರ್‌ಸೈಕಲ್‌ಗಳಿವು:

ಯಮಹಾ ಎಂಟಿ-15 (Yamaha MT-15): ಈ ಬೈಕ್ ರೂ.1.62 ರಿಂದ ರೂ.1.65 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 155 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 52 ಕಿ.ಮೀವರೆಗೂ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ವೈ-ಕನೆಕ್ಟ್ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಯಮಹಾ ಆರ್15ಎಸ್ (Yamaha R15S): ಇದು ರೂ.2.13 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 155 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 40 ಕಿ.ಮೀವರೆಗೂ ಮೈಲೇಜ್ ಕೊಡುತ್ತದೆ. ಫುಲ್ ಡಿಜಿಟಲ್ ಎಲ್‌ಸಿಡಿ ಡಿಸ್‌ಪ್ಲೇ, ಸ್ಲಿಪ್ಪರ್ ಕ್ಲಚ್, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಮತ್ತು ಪಾಸ್ ಸ್ವಿಚ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಯಮಹಾ ಎಫ್‌ಜಡ್ ಎಕ್ಸ್ (Yamaha FZ X): ಈ ನೂತನ ಮೋಟಾರ್‌ಸೈಕಲ್‌, ರೂ.1.74 ಲಕ್ಷದಿಂದ ರೂ.1.78 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 149 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 55 ಕಿ.ಮೀವರೆಗೂ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸ್ವಿಚ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Monday, July 14, 2025, 15:44 [IST]
English summary
2025 new yamaha fz x hybrid bike launched in india rs 1 50 lakh price details
Read more on yamaha india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+