ಇಲ್ನೋಡಿ ಬಾಸ್.. ಹೋಂಡಾ ಆಕ್ಟಿವಾ 125ಗಿಂತ ಅಪ್‌ಗ್ರೇಡ್ ಆಗಿರುವ 5 ಶಕ್ತಿಶಾಲಿ ಸ್ಕೂಟರ್‌ಗಳು, ಬೆಲೆ ಎಷ್ಟು, ಹೇಗಿವೆ?
ಹೋಂಡಾ ಆಕ್ಟಿವಾ 125 (Honda Activa 125) ಜನಪ್ರಿಯ ಸ್ಕೂಟರ್ ಆಗಿದೆ. ಇದು ರೂ.94,442 ರಿಂದ ರೂ.97,146 (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 123.92 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 47 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಿಎಫ್‌ಟಿ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. ವಿಶೇಷವಾಗಿ ಈ ಹೋಂಡಾ ಆಕ್ಟಿವಾ 125ಗಿಂತ ಅಪ್‌ಗ್ರೇಡ್ ಆಗಿರುವ 5 ಶಕ್ತಿಶಾಲಿ ಸ್ಕೂಟರ್‌ಗಳನ್ನು ಗ್ರಾಹಕರ ಕೂಡ ಖರೀದಿ ಮಾಡಬಹುದು. ಬನ್ನಿ.. ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರವನ್ನು ತಿಳಿಯೋಣ.
ಟಿವಿಎಸ್ ಎಕ್ಸ್ (TVS X): ಇದೊಂದು ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ರೂ.2.50 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 4.44 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 140 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ.

ಇದರಲ್ಲಿ ಉಪಯೋಗಿಸಲಾದ ಎಲೆಕ್ಟ್ರಿಕ್ ಮೋಟಾರ್, 11 ಕೆಡಬ್ಲ್ಯೂ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 40 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 105 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 3 ಕೆಡಬ್ಲ್ಯೂ ಚಾರ್ಜರ್ ಬಳಕೆಯಲ್ಲಿ ಈ ಸ್ಕೂಟರ್‌ನ ಬ್ಯಾಟರಿ ಪ್ಯಾಕ್, 0 ರಿಂದ 50% ಚಾರ್ಜ್ ಆಗುವುದಕ್ಕೆ ಕೇವಲ 1 ಗಂಟೆ ಮಾತ್ರ ಸಾಕಾಗುತ್ತದೆ.
ಈ ಟಿವಿಎಸ್ ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್, 10.25-ಇಂಚಿನ ಟಿಎಫ್‌ಟಿ ಕನ್ಸೋಲ್, ಕ್ರೂಸ್ ಕಂಟ್ರೋಲ್, ನವ್‌ಪ್ರೊ ನ್ಯಾವಿಗೇಷನ್ & ಜಿಯೋಫೆನ್ಸಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಸಿಂಗಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಯಮಹಾ ಏರೋಕ್ಸ್ 155 (Yamaha Aerox 155): ಈ ಸ್ಕೂಟರ್ ರೂ.1.49 ಲಕ್ಷದಿಂದ ರೂ.1.53 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದು ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಮೆಟಾಲಿಕ್ ಬ್ಲ್ಯಾಕ್, ರೇಸಿಂಗ್ ಬ್ಲೂ, ಸಿಲ್ವರ್ ಹಾಗೂ ಗ್ರೇ ವರ್ಮಿಲಿಯನ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ನೂತನ ಏರೋಕ್ಸ್ 155 ಸ್ಕೂಟರ್ ಹೆಚ್ಚು ಶಕ್ತಿಯುತವಾದ 155 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 15 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 13.9 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 48.62 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಸ್ಕೂಟರ್ ಬ್ಲೂಟೂತ್ ಕನೆಕ್ಟಿವಿಟಿ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಸೈಲೆಂಟ್ ಸ್ಟಾರ್ಟರ್, ಫ್ರಂಟ್ ಪವರ್ ಸಾಕೆಟ್ ಮತ್ತು ಸೈಡ್-ಸ್ಟ್ಯಾಂಡ್ ಕಟ್-ಆಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಹೊಸ ಏರೋಕ್ಸ್ ಸ್ಕೂಟರ್ 126 ಕೆಜಿ ತೂಕವಿದ್ದು, 5.5 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ (Ultraviolette Tesseract): ಇದು ಕೂಡ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ರೂ.1.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 3.5 ಡಬ್ಲ್ಯೂಹೆಚ್, 5 ಕೆಡಬ್ಲ್ಯೂಹೆಚ್ ಹಾಗೂ 6 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ ಪೂರ್ತಿ ಚಾರ್ಜ್‌ನಲ್ಲಿ ಕ್ರಮವಾಗಿ 162, 220 ಮತ್ತು 261 ಕಿಲೋಮೀಟರ್ ಓಡುತ್ತದೆ.

ಹೊಸ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಎಲೆಕ್ಟ್ರಿಕ್ ಸ್ಕೂಟರ್ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು & ಫ್ಲೋಟಿಂಗ್ ಡಿಆರ್‌ಎಲ್‌ಗಳನ್ನು ಹೊಂದಿದೆ. ಟಿಎಫ್‌ಟಿ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಕೀಲೆಸ್ ಆಕ್ಸೆಸ್, ಪಾರ್ಕ್ ಅಸಿಸ್ಟ್, ಹಿಲ್-ಹೋಲ್ಡ್ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. ಡೆಸರ್ಟ್ ಬ್ಲ್ಯಾಕ್, ಸೋನಿಕ್ ಪಿಂಕ್ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಎಂಬ ಮೂರು ಬಣ್ಣಗಳನ್ನು ಪಡೆದಿದೆ.
ಈ ಸ್ಕೂಟರ್ 34 ಲೀಟರ್‌ನಷ್ಟು ಅಂಡರ್ ಸೀಟ್ ಸ್ಟೋರೇಜ್ ಸಹ ಒಳಗೊಂಡಿದೆ. ಇದರಲ್ಲಿ ಸುರಕ್ಷತೆಗೆ ಸಾಕಷ್ಟು ಆದ್ಯತೆಯನ್ನು ನೀಡಲಾಗಿದೆ. ಬಹುಮುಖ್ಯವಾಗಿ ಎಆರ್‌ಎಎಸ್ (ಅಡ್ವಾನ್ಸ್ಡ್ ರೈಡರ್ ಅಸಿಸ್ಟೆನ್ಸ್ ಸಿಸ್ಟಮ್), ಡಿಸ್ಕ್ ಬ್ರೇಕ್‌ಗಳು, ಡುಯಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್, ಫ್ರಂಟ್-ರೇರ್ ಡ್ಯಾಶ್‌ಕ್ಯಾಮ್‌ಗಳು ಮತ್ತು ಡೈನಾಮಿಕ್ ಸ್ಟೆಬಿಲಿಟಿ ಕಂಟ್ರೋಲ್‌ನ್ನು ಹೊಂದಿದೆ.

ಹೀರೋ ಜೂಮ್ 160 (Hero Xoom 160): ಇದೊಂದು ಮ್ಯಾಕ್ಸಿ ಸ್ಕೂಟರ್ ಆಗಿದ್ದು, ರೂ.1.48 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಈ ಸ್ಕೂಟರ್ ಉತ್ತಮವಾಗಿರುವ ವಿನ್ಯಾಸವನ್ನು ಪಡೆದಿದೆ. ಕ್ಯಾಸ್ಟ್ ಪರ್ಲ್ ಸಮ್ಮಿಟ್ ವೈಟ್, ಕ್ಯಾಸ್ಟ್ ಕ್ಯಾನ್ಯನ್ ರೆಡ್ ಮತ್ತು ಕ್ಯಾಸ್ಟ್ ವೊಲ್ಕಾನಿಕ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.
ಈ ಸ್ಕೂಟರ್ 156 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 14 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) & 13.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 40 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಜೊತೆಗೆ 142 ಕೆಜಿ ತೂಕವಿದ್ದು, 7 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.
ನೂತನ ಹೀರೋ ಜೂಮ್ 160 ಸ್ಕೂಟರ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಇದು ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಐ3ಎಸ್ ಸಿಸ್ಟಮ್, ಸೈಲೆಂಟ್ ಸ್ಟಾರ್ಟರ್ ಮತ್ತು ಕೀ-ಲೆಸ್ ಇಗ್ನಿಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಬಲ್-ಡಿಸ್ಕ್ ಬೈಕ್‌ಗಳನ್ನು ಪಡೆದಿದೆ.
ರಿವರ್ ಇಂಡೀ (River Indie): ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1.43 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 161 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.
ಹೊಸ ರಿವರ್ ಇಂಡೀ ಎಲೆಕ್ಟ್ರಿಕ್ ಸ್ಕೂಟರ್, ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಇದರೊಂದಿಗೆ 43-ಲೀಟರ್ ಅಂಡರ್ ಸೀಟ್ ಸ್ಟೋರೇಜ್ & 12-ಲೀಟರ್ ಸಾಮರ್ಥ್ಯದ ಗ್ಲೋವ್ ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಸಿಬಿಎಸ್ (ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬೈಕ್‌ಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications