ನಮ್ಮೂರಿಗೂ ಸೈ, ನಿಮ್ಮೂರಿಗೂ ಜೈ.. ಟಿವಿಎಸ್ ಜುಪಿಟರ್ 125ನಂತೆಯೇ ಉತ್ತಮವಾಗಿರುವ 5 ಸ್ಕೂಟರ್‌ಗಳಿವು, ದರವು ಅಗ್ಗ!
ಟಿವಿಎಸ್ ಜುಪಿಟರ್ 125 (TVS Jupiter 125) ಜನಪ್ರಿಯ ಸ್ಕೂಟರ್ ಆಗಿದೆ. ಇದು ಕನಿಷ್ಠ ರೂ.89,396 ಹಾಗೂ ಗರಿಷ್ಠ ರೂ.99,805 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 124.8 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 57.27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ಈ ' ಜುಪಿಟರ್ 125ಗೆ ಪರ್ಯಾಯವಾಗಿ ಗ್ರಾಹಕರು ಈ 5 ಸ್ಕೂಟರ್‌ಗಳನ್ನು ಕೊಂಡುಕೊಳ್ಳಬಹುದು ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಯನ್ನು ತಿಳಿಯೋಣ.
ಟಿವಿಎಸ್ ಎನ್‌ಟಾರ್ಕ್ 125 (TVS Ntorq 125): ಈ ಸ್ಕೂಟರ್ ರೂ.93,126 ರಿಂದ ರೂ.1.09 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಟರ್ಕೋಯಿಸ್, ಹಾರ್ಲೆಕ್ವಿನ್ ಬ್ಲೂ & ನಾರ್ಡೊ ಗ್ರೇ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಇದು 111 ಕೆಜಿ ತೂಕವಿದ್ದು, 5.8 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

ಈ ಟಿವಿಎಸ್ ಎನ್‌ಟಾರ್ಕ್ ಸ್ಕೂಟರ್ 124.8 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 7,000 ಆರ್‌ಪಿಎಂನಲ್ಲಿ 10.2 ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5,500 ಆರ್‌ಪಿಎಂನಲ್ಲಿ 10.9 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಿತ್ತದೆ. 47 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ನೂತನ ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ ಮಾನೋಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿದ್ದು, ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ.

ಹೋಂಡಾ ಡಿಯೋ 125 (Honda Dio 125): ಇದು ಕೂಡ ಜನಪ್ರಿಯ ಸ್ಕೂಟರ್ ಆಗಿದೆ. ರೂ.88,051 ರಿಂದ ರೂ.94,950 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸ್ಪೋರ್ಟ್ಸ್ ರೆಡ್, ಪರ್ಲ್ ನೈಟ್‌ಸ್ಟಾರ್ ಬ್ಲ್ಯಾಕ್, ಪರ್ಲ್ ಸೈರನ್ ಬ್ಲೂ, ಪರ್ಲ್ ಡೀಪ್ ಗ್ರೌಂಡ್ ಗ್ರೇ, ಮ್ಯಾಟ್ ಮಾರ್ವೆಲ್ ಬ್ಲೂ ಮೆಟಾಲಿಕ್, ಮ್ಯಾಟ್ ಸಾಂಗ್ರಿಯಾ ರೆಡ್ ಮೆಟಾಲಿಕ್ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.
ಹೊಸ ಹೋಂಡಾ ಡಿಯೋ 125 ಸ್ಕೂಟರ್ 123. 92 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದೆ. 6250 ಆರ್‌ಪಿಎಂನಲ್ಲಿ 8.28 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5000 ಆರ್‌ಪಿಎಂನಲ್ಲಿ 10.4 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 48 ಕೆಎಂಪಿಎಲ್‌ವರೆಗೆ ಕೊಡುತ್ತದೆ.

ಈ ಡಿಯೋ 125 ಸ್ಕೂಟರ್ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಸ್ಮಾರ್ಟ್ ಕೀ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ನೂತನ ಸ್ಕೂಟರ್, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮಾನೋಶಾಕ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಸುಜುಕಿ ಆಕ್ಸೆಸ್ 125 (Suzuki Access 125): ಈ ಸ್ಕೂಟರ್ ರೂ.85,283 ರಿಂದ ರೂ.96,881 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್ ಹಾಗೂ ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್ ಒಳಗೊಂಡನಂತೆ ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಇದು ನೋಡುಗರನ್ನು ಸೆಳೆಯುತ್ತದೆ.
ನೂತನ ಸುಜುಕಿ ಆಕ್ಸೆಸ್ ಸ್ಕೂಟರ್, 124 ಸಿಸಿ ಸಾಮರ್ಥ್ಯದ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 8.3 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.2 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. ಜೊತೆಗೆ 45 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಸುಜುಕಿ ಆಕ್ಸೆಸ್ 125 ಸ್ಕೂಟರ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ರೇರ್ (ರೇರ್) ಸಿಂಗಲ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. ನೂತನ ಸ್ಕೂಟರ್ 106 ಕೆಜಿ ತೂಕವಿದ್ದು, 5.6 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.
ಹೋಂಡಾ ಆಕ್ಟಿವಾ 125 (Honda Activa 125): ಇದೊಂದು ಜನಪ್ರಿಯ ಸ್ಕೂಟರ್ ಎಂದೇ ಹೆಸರುವಾಸಿಯಾಗಿದ್ದು, ರೂ.94,442 ರಿಂದ ರೂ.97,146 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಸೈರನ್ ಬ್ಲೂ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಒಳಗೊಂಡಂತೆ ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಹೊಸ ಹೋಂಡಾ ಆಕ್ಟಿವಾ ಸ್ಕೂಟರ್, 123.92 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8.4 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 47 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಸ್ಕೂಟರ್ 107 ಕೆಜಿ ತೂಕವಿದ್ದು, 5.3 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.
ಈ ಸ್ಕೂಟರ್ ಟಿಎಫ್‌ಟಿ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಸಿಂಗಲ್-ಸೈಡೆಡ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೀರೋ ಜೂಮ್ 125 (Hero Xoom 125): ಈ ಸ್ಕೂಟರ್ ರೂ.86,900 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 124.6 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 52.8 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಮೆಟಾಲಿಕ್ ಟರ್ಬೊ ಬ್ಲೂ ಮತ್ತು ಮ್ಯಾಟ್ ಸ್ಟಾರ್ಮ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳನ್ನು ಪಡೆದಿದೆ.
ನೂತನ ಸ್ಕೂಟರ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ. ಈ ಸ್ಕೂಟರ್ 120 ಕೆಜಿ ತೂಕವಿದ್ದು, 5 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications