Ather: 161 ಕಿ.ಮೀ ರೇಂಜ್.. ಬೆಂಗಳೂರಿನ ಎಥರ್‌ನಿಂದ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ, ಬೆಲೆ ಎಷ್ಟು, ವಿಶೇಷತೆಗಳೇನು?
ಬೆಂಗಳೂರಿನ ಎಥರ್ ಎನರ್ಜಿ (Ather Energy), ನಂಬಿಕಾರ್ಹ ಎಲೆಕ್ಟ್ರಿಕ್ ದ್ವಿಚಕ್ರ ವಾಹನ (Two Wheeler) ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯವಾಗಿ '450' ಸೀರೀಸ್‌ನ ವಿವಿಧ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಸದ್ಯ, ಜನಪ್ರಿಯ '450ಎಸ್' ಸ್ಕೂಟರ್‌ನ ಹೊಸ ರೂಪಾಂತರವನ್ನು (ವೇರಿಯೆಂಟ್) ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಎಥರ್ 450ಎಸ್ (Ather 450S) ಎಲೆಕ್ಟ್ರಿಕ್ ಸ್ಕೂಟರ್‌ನ 3.7 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರುವ ರೂಪಾಂತರವನ್ನು ಮಾರಾಟಕ್ಕೆ ತರಲಾಗಿದೆ. ಇದು ರೂ.1.45 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 161 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

ನೂತನ ಸ್ಕೂಟರ್‌ನ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಅದು ಇತರೆ '450' ಸೀರೀಸ್ ಸ್ಕೂಟರ್‌ಗಳಿಗೆ ಹೋಲಿಕೆಯಾಗಲಿದ್ದು, ಅತ್ಯುತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ನ್ನು ಪಡೆದಿದೆ. ಸ್ಮಾರ್ಟ್ ಇಕೋ, ಇಕೋ, ರೈಡ್ ಹಾಗೂ ಸ್ಪೋರ್ಟ್ ಎಂಬ 4 ರೈಡಿಂಗ್ ಮೋಡ್‌ಗಳನ್ನು ಹೊಂದಿದೆ. ಇದರಲ್ಲಿ ಬಳಕೆ ಮಾಡಿರುವ 5.4 ಕೆಡಬ್ಲ್ಯೂ ಎಲೆಕ್ಟ್ರಿಕ್ ಮೋಟಾರ್, 22 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ಈ ಎಥರ್ 450ಎಸ್ 3.7 ಕೆಡಬ್ಲ್ಯೂಹೆಚ್ ರೂಪಾಂತರ, ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ 7-ಇಂಚಿರುವ ಡಿಸ್‌ಪ್ಲೇ, ಬ್ಲೂಟೂತ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಆಟೋಮೆಟಿಕ್ ಬ್ರೈಟ್‌ನೆಸ್, ಎಥರ್‌ಸ್ಟ್ಯಾಕ್ ಪ್ರೊ ಸಾಫ್ಟ್‌ವೇರ್, ಆಟೋಹೋಲ್ಡ್, ಫಾಲ್ ಸೇಫ್, ಎಮರ್ಜೆನ್ಸಿ ಸ್ಟಾಪ್ ಸಿಗ್ನಲ್ ಹಾಗೂ ಅಲೆಕ್ಸಾ ಇಂಟಿಗ್ರೇಷನ್‌ನ್ನು ಪಡೆದಿದೆ.
ಹೊಸ ರೂಪಾಂತರದಲ್ಲಿ ಬಳಕೆ ಮಾಡಿರುವ ಬ್ಯಾಟರಿ ಪ್ಯಾಕ್, ಕೇವಲ 4.5 ಗಂಟೆಗಳಲ್ಲಿ ಶೇಕಡ 0 ರಿಂದ 80% ಚಾರ್ಜ್ ಆಗಿ ಬಿಡುತ್ತದೆ. ಈಗಾಗಲೇ ಬುಕ್ಕಿಂಗ್ ಆರಂಭವಾಗಿದ್ದು, ಆಸಕ್ತ ಗ್ರಾಹಕರು ಕಂಪನಿಯ ಅಧಿಕೃತ ವೆಬ್‌ಸೈಟ್ ಅಥವಾ ಸಮೀಪದ ಶೋರೂಂಗೆ ಭೇಟಿ ನೀಡಿ, ಆರ್ಡರ್ ಮಾಡಬಹುದು. ಅತಿ ಶೀಘ್ರದಲ್ಲೇ ವಿತರಣೆಗಳು ಶುರುವಾಗಲಿದೆ.
ಎಥರ್ 450ಎಸ್ 2.9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ರೂಪಾಂತರ ಕೂಡ ಖರೀದಿಗೆ ಲಭ್ಯ:
ಇದು ರೂ.1.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರಿಗೂ ಕೈಗೆಟುಕುವಂತಿದೆ. ಭರ್ತಿ ಚಾರ್ಜ್‌ನಲ್ಲಿ 122 ಕಿಲೋಮೀಟರ್ ಓಡುತ್ತದೆ. ಕಲರ್ ಎಲ್‌ಸಿಡಿ ಸ್ಕ್ರೀನ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಈ ಸ್ಕೂಟರ್ 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.
ಎಥರ್ 450ಎಕ್ಸ್ ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ರೂಪಾಂತರವು ಸಿಗುತ್ತದೆ:
ಈ ಸ್ಕೂಟರ್ ರೂ.1.46 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 126 ಕಿಲೋಮೀಟರ್ ಕ್ರಮಿಸುತ್ತದೆ. ಟ್ರೂ ರೆಡ್ ಹಾಯೂ ಹೈಪರ್ ಸ್ಯಾಂಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 7-ಇಂಚಿರುವ ಟಚ್‌ಸ್ಕ್ರೀನ್ ಡಿಸ್‌ಪ್ಲೇ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಎಥರ್ 450 ಅಪೆಕ್ಸ್ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಮನೆಗೆ ತರಬಹುದು:
ಇದೊಂದು ಶಕ್ತಿಯುತವಾದ ಸ್ಕೂಟರ್ ಆಗಿದೆ. ರೂ.1.91 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 3.7 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 157 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 100 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 7-ಇಂಚಿರುವ ಟಚ್‌ಸ್ಕ್ರೀನ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








