160 ಕಿ.ಮೀ ರೇಂಜ್.. ಬೆಂಗಳೂರಿನ ಈ ಅಗ್ಗದ ಎಥರ್ ಇ-ಸ್ಕೂಟರ್‌ಗೆ ಮುಗಿಬಿದ್ದ ಗ್ರಾಹಕರು, 1 ಲಕ್ಷ ಯುನಿಟ್ ಸೇಲ್ಸ್!
ಎಥರ್ ಎನರ್ಜಿ (Ather Energy) ವಿಶ್ವಾಸಾರ್ಹ ಎಲೆಕ್ಟ್ರಿಕ್ ದ್ವಿಚಕ್ರ ವಾಹನ (Two Wheeler) ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ಬೆಂಗಳೂರಿನಲ್ಲಿ ಮುಖ್ಯ ಕಚೇರಿಯನ್ನು ಹೊಂದಿದೆ. ದೇಶೀಯವಾಗಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ವಿವಿಧ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಇವುಗಳನ್ನು ಗ್ರಾಹಕರನ್ನು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಅದರಲ್ಲೂ ವರ್ಷದ ಹಿಂದೆ ಬಿಡುಗಡೆಯಾಗಿದ್ದ ರಿಜ್ಟಾ (Rizta) ಇ-ಸ್ಕೂಟರ್ 'ಗೇಮ್ ಚೇಂಜರ್' ಆಗಿ ಹೊರಹೊಮ್ಮಿದೆ. ಸದ್ಯ, ಇದೇ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ದೊಡ್ಡ ದಾಖಲೆಯೊಂದನ್ನು ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ನೂತನ ಎಥರ್ ರಿಜ್ಟಾ (Ather Rizta) ಎಲೆಕ್ಟ್ರಿಕ್ ಸ್ಕೂಟರ್‌ನ್ನು 2024ರ ಏಪ್ರಿಲ್‌ನಲ್ಲಿ ಬಿಡುಗಡೆಗೊಳಿಸಲಾಗಿತು. ಅಂದಿನಿಂದಲೇ ಖರೀದಿದಾರರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈವರೆಗೆ 1 ಲಕ್ಷ ಯುನಿಟ್ 'ರಿಜ್ಟಾ' ಇ-ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಲಾಗಿದೆ. ಇದರೊಂದಿಗೆ ಹೊಸದೊಂದು ಇತಿಹಾಸ ಬರೆಯಲಾಗಿದೆ.

ಈ ಬಗ್ಗೆ ಎಥರ್ ಎನರ್ಜಿಯ ಚೀಫ್ ಬಿಸಿನೆಸ್ ಆಫೀಸರ್ ರವನೀತ್ ಫೋಕೇಲಾ ಪ್ರತಿಕ್ರಿಯೆ ನೀಡಿದ್ದು, ಸಂತಸವನ್ನು ಹಂಚಿಕೊಂಡಿದ್ದಾರೆ. 'ರಿಜ್ಟಾ ಮಾರಾಟದಲ್ಲಿ ಬಹುಮುಖ್ಯವಾದ ಮೈಲಿಗಲ್ಲನ್ನು ತಲುಪಲಾಗಿದೆ. ಇದು ನಮಗೆ ಮರೆಯಲಾಗದ ಕ್ಷಣವಾಗಿದೆ. ದೇಶೀಯ ಕುಟುಂಬಗಳ ಅಗತ್ಯತೆಯನ್ನು ಪೂರೈಸಲು ಈ ಸ್ಕೂಟರ್‌ನ್ನು ಸಿದ್ದಪಡಿಸಲಾಗಿದೆ' ಎಂದು ಹೇಳಿದ್ದಾರೆ.
ಎಥರ್ ರಿಜ್ಟಾ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
ಇದೊಂದು ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಸಾಮಾನ್ಯ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಈ ಸ್ಕೂಟರ್ ಕನಿಷ್ಠ ರೂ.1.11 ಲಕ್ಷ ಮತ್ತು ಗರಿಷ್ಠ ರೂ.1.47 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಹೊಂದಿದೆ. ಡೆಕ್ಕನ್ ಗ್ರೇ, ಸಿಯಾಚಿನ್ ವೈಟ್, ಪ್ಯಾಂಗೊಂಗ್ ಬ್ಲೂ, ಕಾರ್ಡಮೊಮ್ ಗ್ರೀನ್ ಮತ್ತು ಪ್ಯಾಂಗೊಂಗ್ ಬ್ಲೂ ಸೇರಿದಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಇ-ಸ್ಕೂಟರ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 2.9 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 3.7 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ ಬರೋಬ್ಬರಿ 123 ರಿಂದ 160 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ.
ಈ ಎಲೆಕ್ಟ್ರಿಕ್ ಸ್ಕೂಟರ್ 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 7-ಇಂಚಿನ ಎಲ್‌ಸಿಡಿ ಸ್ಕ್ರೀನ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸ್ಮಾರ್ಟ್, ಇಕೋ ಮತ್ತು ಜಿಪ್ ಎಂಬ ರೈಡಿಂಗ್ ಮೋಡ್‌ಗಳನ್ನು ಹೊಂದಿದೆ. ಇದು ಸರಿ ಸುಮಾರು 125 ಕೆಜಿ ತೂಕವಿದೆ.
ಹೊಸ ಇ-ಸ್ಕೂಟರ್ ಸವಾರರಿಗೂ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ. ಜೊತೆಗೆ ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು 12-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ.
ಒಟ್ಟಾರೆಯಾಗಿ ಎಥರ್ ರಿಜ್ಟಾ ಎಲೆಕ್ಟ್ರಿಕ್ ಸ್ಕೂಟರ್ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಇದು ಹೆಚ್ಚು ಅತ್ಯಾಧುನಿಕವಾಗಿದೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿ ಸಿಗುವುದರಿಂದ ಗ್ರಾಹಕರು ಸಹ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಈ ಫ್ಯಾಮಿಲಿ ಸ್ಕೂಟರ್‌ಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








