Bajaj: ಬೆಲೆಯೂ ಅಗ್ಗ.. ಗಟ್ಟಿಮುಟ್ಟಾದ ಬಜಾಜ್ ಚೇತಕ್ ಇ-ಸ್ಕೂಟರ್‌ಗೆ ಫುಲ್ ಡಿಮ್ಯಾಂಡ್.. ಜನ ಮುಗಿಬಿದ್ದು ಖರೀದಿ!

ಬಜಾಜ್ ಚೇತಕ್ (Bajaj Chetak) ಪ್ರಮುಖ ಸ್ಕೂಟರ್ ಆಗಿದೆ. ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳು 'ಚೇತಕ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 34,900 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 30,644 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 13.89% ಪ್ರಗತಿಯಾಗಿದೆ.

ಇದೇ ಅಕ್ಟೋಬರ್‌ನಲ್ಲಿ 'ಬಜಾಜ್ ಚೇತಕ್' ಮಾರಾಟ ಸಂಖ್ಯೆ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬೇರೆ ಕಂಪನಿಯ ದ್ವಿಚಕ್ರ ವಾಹನಗಳಿಗೆ (Two Wheelers) ಹೋಲಿಕೆ ಮಾಡಿದರೆ ಈ ಎಲೆಕ್ಟ್ರಿಕ್ ಸ್ಕೂಟರ್, ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ಜೊತೆಗೆ ನಿರ್ಮಾಣ ಗುಣಮಟ್ಟದಲ್ಲೂ ಹೆಸರುವಾಗಿದೆ. ಅಂದರೆ 'ಚೇತಕ್' ಬಾಡಿಯನ್ನು ಸ್ಟೀಲ್‌ನಿಂದ ಮಾಡಲಾಗಿದೆ. ಹೀಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೊಂಡುಕೊಂಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.

Bajaj Chetak October 2025 Sales Report

ದೇಶೀಯ ಮಾರುಕಟ್ಟೆಯಲ್ಲಿ 'ಬಜಾಜ್ ಚೇತಕ್' ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಅವುಗಳೆಂದರೆ, ಚೇತಕ್ 3001, ಚೇತಕ್ 3501, ಚೇತಕ್ 3502 ಹಾಗೂ ಚೇತಕ್ 3503 ಎಂದು. ಇವುಗಳು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ.

ಬಜಾಜ್ ಚೇತಕ್ 3001:

ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1.02 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೋಡಲು ಸಹ ಚೆನ್ನಾಗಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್ ಮತ್ತು ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ. ಬ್ರೂಕ್ಲಿನ್ ಬ್ಲ್ಯಾಕ್, ಆಜೂರ್ ಬ್ಲ್ಯೂ, ಸೈಬರ್ ವೈಟ್, ಲೈಮ್ ಯೆಲ್ಲೋ ಹಾಗೂ ರೇಸಿಂಗ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಹಾಗೆಯೇ 1,355 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Bajaj Chetak October 2025 Sales Report

ನೂತನ 'ಚೇತಕ್ 3001' ಸ್ಕೂಟರ್, 3 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 127 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿರುವ ಬ್ಯಾಟರಿ ಪ್ಯಾಕ್, 3 ಗಂಟೆ 50 ನಿಮಿಷಗಳಲ್ಲಿ ಶೇಕಡ 0 ರಿಂದ 80% ಚಾರ್ಜ್ ಆಗಿ ಬಿಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಬಜಾಜ್ ಚೇತಕ್ 3501:

ಇದು ರೂ.1.22 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 3.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 153 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಟಿಎಫ್‌ಟಿ ಡಿಜಿಟಲ್ ಡಿಸ್​ಪ್ಲೇ ಒಳಗೊಂಡಂತೆ ನಾನಾ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

Bajaj Chetak October 2025 Sales Report

ಬಜಾಜ್ ಚೇತಕ್ 3502:

ಈ ಎಲೆಕ್ಟ್ರಿಕ್ ಸ್ಕೂಟರ್ 1.22 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 3.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 153 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಕಲರ್ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಬಜಾಜ್ ಚೇತಕ್ 3503:

ಇದು ರೂ.1.02 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 3.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 150 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕಂಟ್ರೋಲ್ ಮತ್ತು ಮ್ಯೂಸಿಕ್ ಕಂಟ್ರೋಲ್‌ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಡಿಸ್ಕ್ & ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Friday, November 28, 2025, 13:19 [IST]
English summary
Bajaj chetak october 2025 sales report
Read more on bajaj auto india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+