ಬಡವರಿಗೆ ಪರ್ಫೆಕ್ಟ್ ಬೈಕ್‌ಯಿದು.. 1 ಲೀ. ಪೆಟ್ರೋಲ್‌ಗೆ 70 Km ಮೀರಿಸುವ ಮೈಲೇಜ್.. 69,000 ರೂಪಾಯಿಗೆ ಸಿಗುತ್ತೆ!
ಬಜಾಜ್ ಪ್ಲಾಟಿನಾ 110 (Bajaj Platina 110) ವಿಶ್ವಾಸಾರ್ಹ ಬೈಕ್ ಆಗಿದೆ. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಿಗೆ ಸುಲಭವಾಗಿ ಹೊಂದಿಕೊಳ್ಳುತ್ತದೆ. ಇದು ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಗರಿಷ್ಠ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ನೀವು ಹೊಸದೊಂದು ಮೋಟಾರ್‌ಸೈಕಲ್‌ನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ 'ಪ್ಲಾಟಿನಾ 110' ಅತ್ಯುತ್ತಮವಾದ ಆಯ್ಕೆಯಾಗಲಿದೆ. ಬನ್ನಿ, ಈ ಬೈಕ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ (Price):
ನೂತನ 'ಬಜಾಜ್ ಪ್ಲಾಟಿನಾ 110' ಅತ್ಯಂತ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.69,331 (ಎಕ್ಸ್-ಶೋರೂಂ - ಕರ್ನಾಟಕ) ದರವನ್ನು ಪಡೆದಿದೆ. ರೂ.84,430 ವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದ್ದು, ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ.

ವಿನ್ಯಾಸ & ಬಣ್ಣಗಳು (Design & Colours)
ಇದು ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದೆ. ಆದರೂ ನೋಡುಗರ ಕಣ್ಣು ಕುಕ್ಕುವಂತಿದೆ. '3ಡಿ ಪ್ಲಾಟಿನಾ' ಲೋಗೋ, ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಎಬೊನಿ ಬ್ಲ್ಯಾಕ್-ಬ್ಲ್ಯೂ, ಎಬೊನಿ ಬ್ಲ್ಯಾಕ್-ರೆಡ್, ಕಾಕ್‌ಟೈಲ್ ವೈನ್ ರೆಡ್-ಆರೆಂಜ್ ಹಾಗೂ ಯೆಲ್ಲೋ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಸುತ್ತಳತೆ (Dimension)
ಈ ಬೈಕ್ ಸಾಕಷ್ಟು ವಿಶಾಲವಾಗಿದೆ. 2,006 ಮಿ.ಮೀ ಉದ್ದ, 741 ಮಿ.ಮೀ ಅಗಲ ಮತ್ತು 1,100 ಮಿ.ಮೀ ಎತ್ತರವಿದೆ. 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,255 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 119 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ಹೊಸ 'ಬಜಾಜ್ ಪ್ಲಾಟಿನಾ 110' ಮೋಟಾರ್‌ಸೈಕಲ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 115.45-ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 7,000 ಆರ್‌ಪಿಎಂನಲ್ಲಿ 8.6 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5,000 ಆರ್‌ಪಿಎಂನಲ್ಲಿ 9.81 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಮೈಲೇಜ್ (Mileage):
ಇದು ಉತ್ತಮ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದೆ. 1 ಲೀಟರ್ ಪೆಟ್ರೋಲ್ ಹಾಕಿಸಿದರೆ 70 ಕಿಲೋಮೀಟರ್ ಮೀರಿಸುವಂತೆ ಮೈಲೇಜ್ ನೀಡುತ್ತದೆ. 11 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. ಒಮ್ಮೆ ಭರ್ತಿಯಾಗಿ ತುಂಬಿಸಿದರೆ, 770 ಕಿಲೋಮೀಟರ್‌ಗೂ ಅಧಿಕ ದೂರ ಕ್ರಮಿಸಬಲ್ಲದು.

ವೈಶಿಷ್ಟ್ಯಗಳು (Features):
ಈ ಬೈಕ್ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಒಳಗೊಂಡಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 15.49 ಸೆಕೆಂಡುಗಳಲ್ಲಿ 0 ರಿಂದ 80 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಸಸ್ಪೆನ್ಷನ್ ಸೆಟಪ್ & ಬೇಕಿಂಗ್ ಸಿಸ್ಟಮ್ (Suspension Setup & Braking System):
ನೂತನ 'ಬಜಾಜ್ ಪ್ಲಾಟಿನಾ 110' ಸವಾರರಿಗೂ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ನೀಡಬಲ್ಲದು. ಅದಕ್ಕಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಸಿಬಿಎಸ್ (ಕಂಬೈನ್ಡ್ ಬ್ರೇಕ್ ಸಿಸ್ಟಮ್) ಹಾಗೂ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಬಜಾಜ್ ಪ್ಲಾಟಿನಾ 100 (Bajaj Platina 100) ಕೂಡ ಖರೀದಿಗೆ ಲಭ್ಯ:
ಇದು ರೂ.65,850 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 102-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 75 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








