Bajaj: ಈಚೆಗೆ ಬಿಡುಗಡೆ.. ಹೊಸ ಬಜಾಜ್ ಪಲ್ಸರ್ ಬೈಕ್ ಆನ್-ರೋಡ್ ಬೆಲೆ ಎಷ್ಟು, EMI ಏನು?
ಇತ್ತೀಚೆಗೆ ಹೊಚ್ಚ ಹೊಸ ಬಜಾಜ್ ಪಲ್ಸರ್ 150 (Bajaj Pulsar 150) ಬೈಕ್‌ನ್ನು ಬಿಡುಗಡೆಗೊಳಿಸಲಾಯಿತು. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ರೂ.1.08 ಲಕ್ಷದಿಂದ ರೂ.1.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ನೀವು ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ 'ಪಲ್ಸರ್ 150' ಅತ್ಯುತ್ತಮವಾದ ಆಯ್ಕೆಯಾಗಲಿದೆ. ಬನ್ನಿ.. ಈ ಬೈಕ್‌ನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ನೂತನ 'ಬಜಾಜ್ ಪಲ್ಸರ್ 150' ಮೋಟಾರ್‌ಸೈಕಲ್, 3 ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ 'ಸಿಂಗಲ್ ಡಿಸ್ಕ್' ರೂಪಾಂತರ, ರೂ.1.36 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.20,000 ಡೌನ್-ಪೇಮೆಂಟ್ ಪಾವತಿಸಿ ಖರೀದಿಸಿದರೆ, ರೂ.1.16 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 10% ಬಡ್ಡಿ ದರದಲ್ಲಿ 3 ವರ್ಷದ ಅವಧಿಗೆ ಮಾಸಿಕ ರೂ.4,200 ವರೆಗೆ ಇಎಂಐ ಕಟ್ಟಬೇಕು.

ಮತ್ತೊಂದು 'ಸಿಂಗಲ್ ಡಿಸ್ಕ್ ಅಪ್‌ಗ್ರೇಡ್' ರೂಪಾಂತರ, ರೂ.1.40 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.20,000 ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.1.20 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 10% ಬಡ್ಡಿ ಹಾಕಿ, 3 ವರ್ಷಕ್ಕೆ ತಿಂಗಳಿಗೆ ರೂ.4,300 ವರೆಗೆ ಇಎಂಐ ಪಾವತಿ ಮಾಡಬೇಕು.
ಇನ್ನೊಂದು 'ಟ್ವಿನ್ ಡಿಸ್ಕ್' ರೂಪಾಂತರ, ರೂ.1.45 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.20,000 ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.1.24 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 10% ಬಡ್ಡಿ ದರದಲ್ಲಿ 3 ವರ್ಷಗಳಿಗೆ ಮಾಸಿಕ ರೂ.4,500 ವರೆಗೆ ಇಎಂಐ ಕಟ್ಟಬೇಕು.
'ಬಜಾಜ್ ಪಲ್ಸರ್ 150' ವಿಶೇಷತೆಗಳೇನು:
ಈ ಬೈಕ್ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ಪ್ರತಿಯೊಬ್ಬರ ಕಣ್ಮನ ಸೆಳೆಯುವಂತಿದೆ. ಸ್ಪಾರ್ಕ್ಲಿ ಬ್ಲ್ಯಾಕ್ ರೆಡ್, ಸ್ಪಾರ್ಕ್ಲಿ ಬ್ಲ್ಯಾಕ್ ಬ್ಲೂ ಮತ್ತು ಸ್ಪಾರ್ಕ್ಲಿ ಬ್ಲ್ಯಾಕ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,345 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 150 ಕೆಜಿ ತೂಕವಿದೆ.
ಇದು 149.5-ಸಿಸಿ ಪೆಟ್ರೋಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 13.8 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 13.25 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡಬಹುದು ಎನ್ನಲಾಗಿದೆ. 115 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಸರಿ ಸುಮಾರು 5.6 ಸೆಕೆಂಡುಗಳಲ್ಲಿ 0 to 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ನೂತನ 'ಪಲ್ಸರ್ 150' ಮೋಟಾರ್‌ಸೈಕಲ್ ಫುಲ್ - ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ.
ಈ ಬೈಕ್ ಸವಾರರಿಗೆ ಹೆಚ್ಚಿನ ರಕ್ಷಣೆಯನ್ನು ಒದಗಿಸುತ್ತದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಪೋರ್ಕ್ ಹಾಗೂ ಹಿಂಭಾಗ (ರೇರ್) ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಸಿಂಗಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ನಿಮ್ಮ ಗಮನಕ್ಕೆ ಈ ಮೋಟಾರ್‌ಸೈಕಲ್‌ನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಗಳು ನಗರದಿಂದ ನಗರಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








