ಬಡವರ ಐರಾವತಗಳು: ಅತ್ಯುತ್ತಮ 10 ಪ್ರಯಾಣಿಕ ಬೈಕ್‌ಗಳಿವು.. ಬೆಲೆಯೂ ಫುಲ್ ಅಗ್ಗ, ಜಾಸ್ತಿ ಮೈಲೇಜ್!

ಪ್ರತಿಯೊಬ್ಬರಿಗೂ ಜೀವನದಲ್ಲಿ ಹೊಸ ಬೈಕ್ ಖರೀದಿಸಬೇಕು ಎಂಬ ಬಹುದೊಡ್ಡ ಆಸೆಯಿರುತ್ತದೆ. ಆದರೆ, ಯಾವ ಮೋಟಾರ್‌ಸೈಕಲ್‌ನ್ನು ಕೊಂಡುಕೊಂಡರೆ ಹೆಚ್ಚು ಸೂಕ್ತವಾಗಲಿದೆ. ಅದು ದೀರ್ಘಕಾಲ ಬಾಳಿಕೆ ಬರುತ್ತದೆಯೇ ಎಂಬ ಹಲವು ಗೊಂದಲವಿರುತ್ತದೆ. ನೀವು ನೂತನ ಬೈಕ್‌ವೊಂದನ್ನು ತೆಗೆದುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಬಜಾಜ್ ಪಲ್ಸರ್ ಎನ್ಎಸ್160, ಹೀರೋ ಎಕ್ಸ್‌ಟ್ರೀಮ್ 125ಆರ್, ಟಿವಿಎಸ್ ರೈಡರ್ 125, ಹೋಂಡಾ ಶೈನ್ 125, ಹೋಂಡಾ ಯೂನಿಕಾರ್ನ್, ಹೀರೋ ಸೂಪರ್ ಸ್ಪ್ಲೆಂಡರ್, ಹೋಂಡಾ ಶೈನ್ 100, ಬಜಾಜ್ ಪ್ಲಾಟಿನಾ 100, ಕೀವೇ ಎಸ್ಆರ್125 ಹಾಗೂ ಹೋಂಡಾ ಲಿವೋ ಮಾಡೆಲ್‌ಗಳು ಅತ್ಯುತ್ತಮ ಆಯ್ಕೆಯಾಗಲಿವೆ.

ಬಜಾಜ್ ಪಲ್ಸರ್ ಎನ್ಎಸ್160 (Bajaj Pulsar NS160): ಈ ಬೈಕ್ ರೂ.1.40 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 160.3 ಸಿಸಿ ಏರ್/ಆಯಿಲ್ - ಕೋಲ್ಡ್ ಸಿಂಗಲ್ - ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 17. 2 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 14.6 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 40.36 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Best 10 Commuter Bikes Pulsar Xtreme 125R Raider Shine Splendor Platina To Livo

ಈ ಪಲ್ಸರ್ ಎನ್ಎಸ್160 ಮೋಟಾರ್‌ಸೈಕಲ್‌, ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್‌, ಫುಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ನೂತನ ಬೈಕ್ 152 ಕೆಜಿ ತೂಕವಿದ್ದು, 12 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.

ಹೀರೋ ಎಕ್ಸ್‌ಟ್ರೀಮ್ 125ಆರ್ (Hero Xtreme 125R): ಇದು ರೂ.99,759 ರಿಂದ ರೂ.1.06 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಖರೀದಿಗೆ ದೊರೆಯುತ್ತದೆ. 124.7 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 66 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್ ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ.

Best 10 Commuter Bikes Pulsar Xtreme 125R Raider Shine Splendor Platina To Livo

ಟಿವಿಎಸ್ ರೈಡರ್ 125 (TVS Raider 125): ಈ ಬೈಕ್ ರೂ.90,990 ರಿಂದ ರೂ.1.02 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 124.8 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 67 ಕೆಎಂಪಿಎಲ್‌ವರೆಗೆ ಕೆಎಂಪಿಎಲ್‌ವರೆಗೆ ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಐಡಲ್ ಸ್ಟಾಪ್/ ಸ್ಟಾರ್ಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಹೋಂಡಾ ಶೈನ್ 125 (Honda Shine 125): ಈ ಮೋಟಾರ್‌ಸೈಕಲ್‌, ರೂ.84,551 ರಿಂದ ರೂ.91,072 (ಎಕ್ಸ್-ಶೋರೂಂ) ದರದಲ್ಲಿ ಸಿಗುತ್ತದೆ. 123.94 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 55 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್ ಡಿಜಿಟಲ್-ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್ಆಫ್, ಐಡಲ್ ಸ್ಟಾರ್ಟ್-ಸ್ಟಾಪ್ ಸಿಸ್ಟಮ್ ಮತ್ತು ಯುಎಸ್‌‍ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best 10 Commuter Bikes Pulsar Xtreme 125R Raider Shine Splendor Platina To Livo

ಹೋಂಡಾ ಯೂನಿಕಾರ್ನ್ (Honda Unicorn): ಇದೊಂದು ಜನಪ್ರಿಯ ಮೋಟಾರ್‌ಸೈಕಲ್‌ ಎಂದೇ ಹೆಸರುವಾಸಿಯಾಗಿದೆ. ರೂ.1.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 162.71 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಪರ್ಲ್ ಇಗ್ನಿಯಸ್ ಬ್ಲಾಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಮತ್ತು ರೇಡಿಯಂಟ್ ರೆಡ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Best 10 Commuter Bikes Pulsar Xtreme 125R Raider Shine Splendor Platina To Livo

ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC): ಈ ಬೈಕ್ ರೂ.88,128 ರಿಂದ ರೂ.92,028 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 124.7 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. ಬರೋಬ್ಬರಿ 69 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡ್ರಮ್ ಬ್ರೇಕ್ & ಡಿಸ್ಕ್ ಬ್ರೇಕ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

ನೂತನ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಮೋಟಾರ್‌ಸೈಕಲ್‌ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮ್ಯಾಟ್ ನೆಕ್ಸಸ್ ಬ್ಲೂ, ಮ್ಯಾಟ್ ಗ್ರೇ, ಬ್ಲಾಕ್ ಮತ್ತು ಕ್ಯಾಂಡಿ ಬ್ಲೇಜಿಂಗ್ ರೆಡ್ ಎಂಬ ಬಣ್ಣಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

Best 10 Commuter Bikes Pulsar Xtreme 125R Raider Shine Splendor Platina To Livo

ಹೋಂಡಾ ಶೈನ್ 100 (Honda Shine 100): ಇದು ರೂ.68,600 ರಿಂದ ರೂ.70,521 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 98.98 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 55 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್ ಆಯ್ಕೆಯನ್ನು ಹೊಂದಿದೆ. ಈ ಬೈಕ್ ಬರೋಬ್ಬರಿ 99 ಕೆಜಿ ತೂಕವಿದೆ.

ಬಜಾಜ್ ಪ್ಲಾಟಿನಾ 100 (Bajaj Platina 100): ಈ ಮೋಟಾರ್‌ಸೈಕಲ್‌ ರೂ.69,369 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 102 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 4-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬ್ಲ್ಯಾಕ್ & ರೆಡ್, ಬ್ಲ್ಯಾಕ್ & ಸಿಲ್ವರ್, ಬ್ಲ್ಯಾಕ್ & ಗೋಲ್ಡ್ ಮತ್ತು ಬ್ಲ್ಯಾಕ್ & ಬ್ಲೂ ಎಂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Best 10 Commuter Bikes Pulsar Xtreme 125R Raider Shine Splendor Platina To Livo

ಕೀವೇ ಎಸ್ಆರ್125 (Keeway SR 125): ಇದು ಪ್ರಖ್ಯಾತ ಬೈಕ್ ಆಗಿದ್ದು, ರೂ.1.20 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 125 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 9.8 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 8.2 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Best 10 Commuter Bikes Pulsar Xtreme 125R Raider Shine Splendor Platina To Livo

ನೂತನ ಕೀವೇ ಎಸ್ಆರ್125 ಮೋಟಾರ್‌ಸೈಕಲ್‌ ಎಲ್‌ಇಡಿ ಹೆಡ್‌ಲೈಟ್, ಎಲ್‌ಇಡಿ ಡಿಆರ್‌ಎಲ್‌ಗಳು, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೈಡ್-ಸ್ಟ್ಯಾಂಡ್ ಎಂಜಿನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. 120 ಕೆಜಿ ತೂಕವಿದ್ದು, 14.5-ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್ (ಸಿಬಿಎಸ್) ಮತ್ತು ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಲಿವೋ (Honda Livo): ಈ ಬೈಕ್ ರೂ.81,651 ರಿಂದ ರೂ.86,951 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 109.51 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 60 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಸ್ಟಾರ್ಟ್/ಸ್ಟಾಪ್ ಸ್ವಿಚ್ ಹಾಗೂ ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

Best 10 Commuter Bikes Pulsar Xtreme 125R Raider Shine Splendor Platina To Livo

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, April 20, 2025, 18:38 [IST]
English summary
Best 10 commuter bikes pulsar xtreme 125r raider shine splendor platina to livo
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+