ಆಫೀಸ್‌ಗೆ ಹೋಗುವವರಿಗೆ ಈ ಬೈಕ್‌ಗಳು ಬೆಸ್ಟ್.. 70 ಕಿ.ಮೀ ಮೈಲೇಜ್, ಅತಿ ಕಡಿಮೆ ಬೆಲೆ!
ಬೆಂಗಳೂರು, ಮುಂಬೈ ಹಾಗೂ ನವದೆಹಲಿಯಂತಹ ಮಹಾನಗರಗಳಲ್ಲಿ ಕೆಲಸಕ್ಕೆ ಹೋಗಲು ಬೈಕ್‌ಗಳು ತೀರಾ ಅನಿವಾರ್ಯವಾಗಿವೆ. ಆದರೆ, ಬಹುತೇಕರಿಗೆ ಯಾವ ಮೋಟಾರ್‌ಸೈಕಲ್‌ನ್ನು ಖರೀದಿ ಮಾಡಿದರೆ ದೀರ್ಘಕಾಲ ಬಾಳಿಕೆ ಬರುತ್ತದೆ.. ಗರಿಷ್ಠ ಮೈಲೇಜ್ ನೀಡುತ್ತದೆ ಎಂಬ ಹಲವು ಗೊಂದಲವಿರುತ್ತದೆ.. ನೀವು ದಿನನಿತ್ಯದ ಉಪಯೋಗಕ್ಕಾಗಿ ಹೊಸ ಬೈಕ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಹೀರೋ ಸ್ಪ್ಲೆಂಡರ್ ಪ್ಲಸ್, ಬಜಾಜ್ ಪ್ಲಾಟಿನಾ, ಹೀರೋ ಹೆಚ್ಎಫ್ ಡಿಲಕ್ಸ್, ಹೋಂಡಾ ಶೈನ್ 100 ಮತ್ತು ಹೀರೋ ಪ್ಯಾಶನ್ ಪ್ಲಸ್ ಮಾಡೆಲ್‌ಗಳು ಉತ್ತಮವಾದ ಆಯ್ಕೆಯಾಗಲಿವೆ. ಬನ್ನಿ.. ಈ ಮೋಟಾರ್‌ಸೈಕಲ್‌ಗಳ ಬೆಲೆ ಹಾಗೂ ವಿಶೇಷತೆಗಳ ಬಗ್ಗೆ ಸಂಕ್ಷಿಪ್ತವಾದ ಮಾಹಿತಿಯನ್ನು ತಿಳಿಯೋಣ.
ಮೊದಲಿಗೆ ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ಬೈಕ್ ಕುರಿತಂತೆ ಮಾತನಾಡೋಣ. ಇದು ರೂ.77,176 ರಿಂದ ರೂ.79,926 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 97.2 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸವಾರರ ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಬಜಾಜ್ ಪ್ಲಾಟಿನಾ 100 (Bajaj Platina 100) ಪ್ರಖ್ಯಾತ ಮೋಟಾರ್‌ಸೈಕಲ್ ಆಗಿದ್ದು, ರೂ.68,685 ಎಕ್ಸ್-ಶೋರೂಂ ದರವನ್ನು ಹೊಂದಿದೆ. 102 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 7.9 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.3 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಈ ಬೈಕ್ ಹ್ಯಾಲೋಜಿನ್ ಹೆಡ್‌ಲೈಟ್ ಮತ್ತು ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್‌ಗಳು (ಡಿಆರ್‌ಎಲ್‌ಗಳು), ಸಿಂಗಲ್-ಪೀಸ್ ಸೀಟ್, ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಮತ್ತು ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳು ಮತ್ತು ಸಿಬಿಎಎಸ್ (ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್) ಆಯ್ಕೆಯನ್ನು ಪಡೆದಿದೆ.

ಹೀರೋ ಹೆಚ್ಎಫ್ ಡಿಲಕ್ಸ್ (Hero HF Deluxe) ಬೈಕ್ ಬಗ್ಗೆ ಹೇಳುವುದಾದರೆ, ಇದು ರೂ.59,998 ದಿಂದ ರೂ.69,518 ಎಕ್ಸ್-ಶೋರೂಂ ಬೆಲೆಯನ್ನು ಪಡೆದಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಪ್ರಯಾಣಿಕರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಹೋಂಡಾ ಶೈನ್ 100 (Honda Shine 100) ಕೂಡ ಜನಪ್ರಿಯ ಮೋಟಾರ್‌ಸೈಕಲ್ ಆಗಿದ್ದು, ರೂ.66,900 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 98.98 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 55 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಕಡೆಯದಾಗಿ ಹೆಚ್ಚು ಆಕರ್ಷಕವಾಗಿರುವ ಹೀರೋ ಪ್ಯಾಶನ್ ಪ್ಲಸ್ (Hero Passion Plus) ಮೋಟಾರ್‌ಸೈಕಲ್ ಕುರಿತಂತೆ ಹೇಳುವುದಾದರೆ, ಇದು ರೂ.79,901 ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. 97.2 ಸಿಸಿ ಪೆಟೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications