ದಿನಬಳಕೆಗೆ ಈ ಶಕ್ತಿಯುತ ಸ್ಕೂಟರ್‌ಗಳು ಬೆಸ್ಟ್.. ಅತಿ ಕಡಿಮೆ ಬೆಲೆ.. ಭರ್ಜರಿ ಮೈಲೇಜ್!

ಪ್ರತಿಯೊಬ್ಬರಿಗೂ ದಿನಬಳಕೆಗಾಗಿ ದ್ವಿಚಕ್ರ ವಾಹನಗಳು ಬೇಕೇ ಬೇಕು. ಬೈಕ್‌ಗಳಿಗೆ ಹೋಲಿಸಿದರೆ, ಸ್ಕೂಟರ್‌ಗಳು 'ಗೇರ್‌ಲೆಸ್' ಆಗಿರುವುದರಿಂದ ಪುರುಷರು ಮಾತ್ರವಲ್ಲದೆ, ಮಹಿಳೆಯರು ಕೂಡ ಸುಲಭವಾಗಿ ಬಳಕೆ ಮಾಡಬಹುದು. ನೀವು ಶಕ್ತಿಯುತವಾದ ಹೊಸ ಸ್ಕೂಟರ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಹೋಂಡಾ ಆಕ್ಟಿವಾ 125, ಹೀರೋ ಜೂಮ್ 125 ಮತ್ತು ಸುಜುಕಿ ಆಕ್ಸೆಸ್ 125 ಮಾಡೆಲ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ.. ಈ ನೂತನ ಸ್ಕೂಟರ್‌ಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ಮಾಹಿತಿಯನ್ನು ತಿಳಿಯೋಣ.

ಹೋಂಡಾ ಆಕ್ಟಿವಾ 125 (Honda Activa 125): ಇದು ಜನಪ್ರಿಯ ಸ್ಕೂಟರ್ ಆಗಿದ್ದು, ರೂ.94,442 ರಿಂದ ರೂ.97,146 ಎಕ್ಸ್-ಶೋರೂಂ ದರವನ್ನು ಹೊಂದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಮತ್ತು ಪರ್ಲ್ ಸೈರನ್ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. 123.92 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 47 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುವ ಸಾಧ್ಯತೆಯಿದೆ.

Best 125 CC Scooters For Daily Use Honda Activa Hero Xoom And Suzuki Access

ಈ ಸ್ಕೂಟರ್ ಟಿಎಫ್‌ಟಿ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ಹೊಂದಿದೆ. 110 ಕೆಜಿ ತೂಕವಿದ್ದು, 5.3 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

ಹೀರೋ ಜೂಮ್ 125 (Hero Xoom 125): ಈ ಸ್ಕೂಟರ್ ರೂ.86,900 ಎಕ್ಸ್-ಶೋರೂಂ ದರವನ್ನು ಒಳಗೊಂಡಿದೆ. 124.6 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, ಸರಿ ಸುಮಾರು 45 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ. ಮೆಟಾಲಿಕ್ ಟರ್ಬೊ ಬ್ಲೂ ಮತ್ತು ಮ್ಯಾಟ್ ಸ್ಟಾರ್ಮ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ.

Best 125 CC Scooters For Daily Use Honda Activa Hero Xoom And Suzuki Access

ನೂತನ ಹೀರೋ ಜೂಮ್ ಸ್ಕೂಟರ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಬ್ಲೂಟೂತ್ ಕನೆಕ್ಟಿವಿಟಿ, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಮತ್ತು ಅಂಡರ್ ಸೀಟ್ ಸ್ಟೋರೇಜ್ ಲೈಟ್ ಒಳಗೊಂಡಂತೆ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಮತ್ತು ಡ್ರಮ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ.

ಸುಜುಕಿ ಆಕ್ಸೆಸ್ 125 (Suzuki Access 125): ಇದು ರೂ.81,700 ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. 125 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 45 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ ಎಂದು ಹೇಳಲಾಗಿದೆ. ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್, ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಸಾಲಿಡ್ ಐಸ್ ಗ್ರೀನ್ ಮತ್ತು ಪರ್ಲ್ ಶೈನಿ ಬೀಜ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Best 125 CC Scooters For Daily Use Honda Activa Hero Xoom And Suzuki Access

ಹೊಸ ಸುಜುಕಿ ಆಕ್ಸೆಸ್ 125 ಸ್ಕೂಟರ್ ಡಿಜಿಟಲ್-ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂದೆ (ಫ್ರಂಟ್) ಡಿಸ್ಕ್ ಮತ್ತು ಹಿಂದೆ (ರೇರ್ ಡ್ರಮ್ ಬ್ರೇಕ್‌ನ್ನು ಪಡೆದಿದೆ. ಜೊತೆಗೆ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, January 31, 2025, 18:12 [IST]
English summary
Best 125 cc scooters for daily use honda activa hero xoom and suzuki access
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+