ಹಳ್ಳಿಗೂ ಜೈ.. ಸಿಟಿಗೂ ಸೈ.. 59+ ಮೈಲೇಜ್, 80,000 ಆರಂಭಿಕ ಬೆಲೆ.. ಡೈಲಿ ಯೂಸ್‌ಗೆ ಈ ಸ್ಕೂಟರ್‌ಗಳು ಬೆಸ್ಟ್!
ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ವಾಸಿಸುತ್ತಾರೆ. ಹಳ್ಳಿಯಿಂದ ಹಿಡಿದು ನಗರ ಪ್ರದೇಶದ ಜನರಿಗೆ ದ್ವಿಚಕ್ರ ವಾಹನಗಳು ತೀರಾ ಅನಿವಾರ್ಯವಾಗಿವೆ. ಅದರಲ್ಲೂ ಬೈಕ್‌ಗಳಿಗೆ ಹೋಲಿಕೆ ಮಾಡಿದರೆ, ಸ್ಕೂಟರ್‌ಗಳು ಮಹಿಳೆ ಹಾಗೂ ಪುರುಷರಿಬ್ಬರಿಗೂ ಹೆಚ್ಚು ಸೂಕ್ತವಾಗಿವೆ. ನೀವು ಹೊಸ ಸ್ಕೂಟರ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಹೀರೋ ಡೆಸ್ಟಿನಿ, ಹೋಂಡಾ ಆಕ್ಟಿವಾ, ಸುಜುಕಿ ಆಕ್ಸೆಸ್, ಯಮಹಾ ಫ್ಯಾಸಿನೋ ಹಾಗೂ ಟಿವಿಎಸ್ ಎನ್‌ಟಾರ್ಕ್ ಮಾಡೆಲ್‌ಗಳು ಅತ್ಯುತ್ತಮ ಆಯ್ಕೆಯಾಗಲಿವೆ.
ಮೊದಲಿಗೆ ಹೀರೋ ಡೆಸ್ಟಿನಿ 125 (Hero Destini 125) ಸ್ಕೂಟರ್ ಕುರಿತಂತೆ ಮಾತನಾಡುವುದಾದರೆ, ಇದು ರೂ.82,586 ರಿಂದ ರೂ.92,436 ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 124.6 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 9.12 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.4 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 59 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಹೀರೋ ಡೆಸ್ಟಿನಿ ಸ್ಕೂಟರ್ ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಸ್ಕೂಟರ್ 115 ಕೆಜಿ ತೂಕವಿದ್ದು, 5.3 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಹಾಗೂ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೋಂಡಾ ಆಕ್ಟಿವಾ 125 (Honda Activa 125) ಬಗ್ಗೆ ಹೇಳುವುದಾದರೆ, ಈ ಸ್ಕೂಟರ್ ರೂ.98,969 ರಿಂದ ರೂ.1.03 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 123.92 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 47 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 4.2-ಇಂಚಿನ ಟಿಎಫ್‌ಟಿ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಸುಜುಕಿ ಆಕ್ಸೆಸ್ 125 (Suzuki Access 125) ಕೂಡ ಜನಪ್ರಿಯ ಸ್ಕೂಟರ್ ಆಗಿದೆ. ರೂ.81,700 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 124 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 45 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಯಮಹಾ ಫ್ಯಾಸಿನೋ 125 (Yamaha Fascino 125) ಕುರಿತಂತೆ ಮಾತನಾಡುವುದಾದರೆ, ಇದು ರೂ.76,133 ಆರಂಭಿಕ (ಎಕ್ಸ್ ಶೋರೂಂ) ದರವನ್ನು ಒಳಗೊಂಡಿದೆ. 125 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದೆ. 8.04 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.3 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. ಜೊತೆಗೆ 49 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಕಡೆಯದಾಗಿ ಟಿವಿಎಸ್ ಎನ್‌ಟಾರ್ಕ್ 125 (TVS NTORQ 125) ಬಗ್ಗೆ ಹೇಳುವುದಾದರೆ, ಈ ಸ್ಕೂಟರ್ ರೂ.93,126 ರಿಂದ ರೂ.1.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 124.8 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 47 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಿಎಫ್‌ಟಿ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications