330 Km ಮೈಲೇಜ್.. 90,000 ಬೆಲೆ, Bajaj Freedom CNGಗೆ ಬದಲಿ ಆಯ್ಕೆಯಾಗಬಲ್ಲ 3 ಜನಪ್ರಿಯ ಬೈಕ್‌ಗಳಿವು!
ಬಜಾಜ್ ಫ್ರೀಡಂ 125 (Bajaj Freedom 125) ವಿಶ್ವದ ಮೊದಲ ಸಿಎನ್‌ಜಿ ಮೋಟಾರ್‌ಸೈಕಲ್ ಎಂದೇ ಹೆಸರುವಾಸಿಯಾಗಿದೆ. ಇದು ರೂ.90,000 ರಿಂದ ರೂ.1.11 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 125 ಸಿಸಿ ಏರ್-ಕೂಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, ತಲಾ 2-ಲೀಟರ್/ಕೆಜಿಯ ಪೆಟ್ರೋಲ್ ಮತ್ತು ಸಿಎನ್‌ಜಿ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. 30 ಕಿಲೋಮೀಟರ್ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಡಿಸ್‌ಪ್ಲೇ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ನ್ನು ಪಡೆದಿದೆ. ನೀವು ಈ 'ಬಜಾಜ್ ಫ್ರೀಡಂ'ಗೆ ಬದಲಾಗಿ ಅತಿ ಕಡಿಮೆ ಬೆಲೆಗೆ ಇತರೆ 3 ಜನಪ್ರಿಯ ಬೈಕ್‌ಗಳನ್ನು ಕೂಡ ಖರೀದಿ ಮಾಡಬಹುದು. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus)..
ಇದು ಪ್ರಖ್ಯಾತ ಮೋಟಾರ್‌ಸೈಕಲ್ ಆಗಿದ್ದು, 'ಬಜಾಜ್ ಫ್ರೀಡಂ 125'ಗೆ ಅತ್ಯುತ್ತಮವಾದ ಪರ್ಯಾಯ ಆಯ್ಕೆಯಾಗಲಿದೆ. ಅದಕ್ಕೆ ತಕ್ಕಂತೆ ರೂ.77,000 ರಿಂದ ರೂ.79,000 ವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 97.2 ಸಿಸಿ ಏರ್-ಕೂಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 70 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ಈ ಬೈಕ್ ಸರಿ ಸುಮಾರು 113 ಕೆಜಿ ತೂಕವಿದ್ದು, 11 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಐಡಲ್ ಸ್ಟಾಪ್-ಸ್ಟಾರ್ಟ್ ಸಿಸ್ಟಮ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೋಂಡಾ ಲಿವೋ (Honda Livo)..
ಇದನ್ನು ಸಹ 'ಬಜಾಜ್ ಫ್ರೀಡಂ 125'ಗೆ ಬದಲಾಗಿ ಕೊಂಡುಕೊಳ್ಳಬಹುದು. ಈ ಬೈಕ್ ರೂ.85,000 ರಿಂದ ರೂ.88,000 ವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 109.51 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 70 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

ಈ ಮೋಟಾರ್‌ಸೈಕಲ್ 114 ಕೆಜಿ ತೂಕವಿದ್ದು, 8.5 ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪರ್ಲ್ ಸೈರನ್ ಬ್ಲೂ, ಪರ್ಲ್ ಇಗ್ನಿಯಸ್ ಬ್ಲ್ಯಾಕ್ ವಿತ್ ಬ್ಲೂ ಸ್ಟ್ರಿಪ್ ಮತ್ತು ಪರ್ಲ್ ಇಗ್ನಿಯಸ್ ಬ್ಲ್ಯಾಕ್ ವಿತ್ ಆರೆಂಜ್ ಸ್ಟ್ರಿಪ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಟಿವಿಎಸ್ ರೇಡಿಯನ್ (TVS Radeon)..
ಇದು ಪ್ರಮುಖ ಬೈಕ್ ಆಗಿದ್ದು, 'ಬಜಾಜ್ ಫ್ರೀಡಂ 125'ಗೆ ಪರ್ಯಾಯವಾಗಿ ಮನೆಗೆ ತರಬಹುದು. ಅದಕ್ಕೆ ಅಣುಗುಣವಾಗಿ ರೂ.72,000 ರಿಂದ ರೂ.86,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 109.7 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 73 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ಈ ಮೋಟಾರ್‌ಸೈಕಲ್ ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಮೆಟಲ್ ಬ್ಲ್ಯಾಕ್, ಟೈಟಾನಿಯಂ ಗ್ರೇ, ರಾಯಲ್ ಪರ್ಪಲ್ ಮತ್ತು ಸ್ಟಾರ್‌ಲೈಟ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಬರೋಬ್ಬರಿ 113 ಕೆಜಿ ತೂಕವಿದ್ದು, 10 ಲೀಟರ್‌ನ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಡ್ಯುಯಲ್-ಪಾಡ್ ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಜೊತೆಗೆ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications