70 Km ಮೈಲೇಜ್.. ರೂ.68,000, ಹೊಸ Bajaj Platina 100ಗೆ 3 ಬದಲಿ ಬೈಕ್‌ಗಳಿವು.. ಬೆಲೆಯೂ ಅಗ್ಗ, ಹೇಗಿವೆ?
ಬಜಾಜ್ ಪ್ಲಾಟಿನಾ 100 (Bajaj Platina 100) ವಿಶ್ವಾಸಾರ್ಹ ಪ್ರಯಾಣಿಕ ಮೋಟಾರ್‌ಸೈಕಲ್ ಆಗಿದೆ. ಇದು ರೂ.68,742 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 102 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 70 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಬ್ಲ್ಯಾಕ್ ವಿತ್ ರೆಡ್ & ಬ್ಲ್ಯಾಕ್ ವಿತ್ ಗೋಲ್ಡ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. ನೀವು 'ಪ್ಲಾಟಿನಾ 100'ಗೆ ಪರ್ಯಾಯವಾಗಿ ಈ ಮೂರು ಬೈಕ್‌ಗಳನ್ನು ಖರೀದಿ ಮಾಡಬಹುದು. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಹೀರೋ ಎಚ್ಎಫ್ 100 (Hero HF 100):
ಇದೊಂದು ಜನಪ್ರಿಯ ಮೋಟಾರ್‌ಸೈಕಲ್ ಎಂದೇ ಹೆಸರುವಾಸಿಯಾಗಿದ್ದು, ಬಜಾಜ್ ಪ್ಲಾಟಿನಾ 100ಗೆ ಬದಲಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.60,118 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ರೆಡ್ - ಬ್ಲ್ಯಾಕ್ ಮತ್ತು ಬ್ಲ್ಯೂ - ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಈ ಬೈಕ್ 97.2 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 70 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ & ಎಲೆಕ್ಟ್ರಿಕ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸರಿ ಸುಮಾರು 110 ಕೆಜಿ ತೂಕವಿದ್ದು, 9.1-ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ (TVS Star City Plus):
ಇದು ಕೂಡ ಪ್ರಖ್ಯಾತ ಮೋಟಾರ್‌ಸೈಕಲ್ ಆಗಿದ್ದು, ಬಜಾಜ್ ಪ್ಲಾಟಿನಾ 100ಗೆ ಪರ್ಯಾಯವಾಗಿ ಮನೆಗೆ ತರಬಹುದು. ಈ ಬೈಕ್ ರೂ.94,231 ರಿಂದ ರೂ.98,839 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 109 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 70 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

ಈ ಬೈಕ್ ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಜೊತೆಗೆ 116 ಕೆಜಿ ತೂಕವಿದ್ದು, 10-ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೋಂಡಾ ಎಸ್‌ಪಿ 125 (Honda SP 125):
ಇದರ ಬದಲಾಗಿಯೂ ಬಜಾಜ್ ಪ್ಲಾಟಿನಾ 100 ಮೋಟಾರ್‌ಸೈಕಲ್‌ನ್ನು ಖರೀದಿ ಮಾಡಬಹುದು. ಈ ಬೈಕ್ ರೂ.1.13 ಲಕ್ಷದಿಂದ ರೂ.1.22 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 123.94 ಸಿಸಿ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 63 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ನೂತನ ಎಸ್‌ಪಿ 125 ಬೈಕ್ ಫುಲ್ - ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಫಂಕ್ಷನ್ ಮತ್ತು ಸೈಲೆಂಟ್ ಸ್ಟಾರ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬರೋಬ್ಬರಿ 116 ಕೆಜಿ ತೂಕವಿದ್ದು, 11 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಒಟ್ಟಾರೆಯಾಗಿ ಈ ಮೋಟಾರ್‌ಸೈಕಲ್‌ಗಳನ್ನು ಬಜಾಜ್ ಪ್ಲಾಟಿನಾ 100ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ಇವುಗಳು ಬೆಲೆಗೆ ತಕ್ಕಂತೆ ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ಜೊತೆಗೆ ಅಷ್ಟೇನು ಹೆಚ್ಚಿನ ದರವನ್ನು ಹೊಂದಿಲ್ಲ. ನೀವು ಇವುಗಳಲ್ಲಿ ಯಾವ ಬೈಕ್‌ನ್ನು ಕೊಂಡುಕೊಳ್ಳುವಿರಿ ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿರಿ.


Click it and Unblock the Notifications