ರೂ.86,000.. 51 ಕಿ.ಮೀ ಮೈಲೇಜ್, Bajaj Pulsar 125 ಬದಲಿಗೆ ಈ 3 ಜನಪ್ರಿಯ ಬೈಕ್‌ಗಳನ್ನು ಮನೆಗೆ ತರಬಹುದು!

ಬಜಾಜ್ ಪಲ್ಸರ್ 125 (Bajaj Pulsar 125) ಪ್ರಖ್ಯಾತ ಮೋಟಾರ್‌ಸೈಕಲ್ ಆಗಿ ಹೊರಹೊಮ್ಮಿದೆ. ಇದು ರೂ.86,000 ರಿಂದ 95,000 ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. 124.4 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹಾಗೂ 5-ಸ್ವೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್ ಡಿಜಿಟಲ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ನೀವು ಹೊಸ 'ಬಜಾಜ್ ಪಲ್ಸರ್ 125'ಗೆ ಬದಲಾಗಿ ಈ 3 ಜನಪ್ರಿಯ ಬೈಕ್‌ಗಳನ್ನು ಸಹ ಖರೀದಿ ಮಾಡಬಹುದು. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಹೋಂಡಾ ಶೈನ್ 125 (Honda Shine 125)..

ಇದು ವಿಶ್ವಾಸಾರ್ಹ ಮೋಟಾರ್‌ಸೈಕಲ್ ಆಗಿದ್ದು, 'ಬಜಾಜ್ ಪಲ್ಸರ್ 125'ಗೆ ಅತುತ್ತಮವಾದ ಪರ್ಯಾಯ ಆಯ್ಕೆಯಾಗಲಿದೆ. ರೂ.86,000 ರಿಂದ 91,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 123.94 ಸಿಸಿ ಪೆಟ್ರೋಲ್ ಎಂಜಿನ್‌ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಜೊತೆಗೆ 55 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Best 3 Alternative Bikes for Bajaj Pulsar 125 Shine 125 Super Splendor SP 125

ಈ ಬೈಕ್ ಉತ್ತಮವಾಗಿರುವ ವಿನ್ಯಾಸವನ್ನು ಹೊಂದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಜೆನಿ ಗ್ರೇ ಮೆಟಾಲಿಕ್ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಸೇರಿದಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC)..

ಇದನ್ನು ಕೂಡ 'ಬಜಾಜ್ ಪಲ್ಸರ್ 125'ಗೆ ಬದಲಾಗಿ ಖರೀದಿ ಮಾಡಬಹುದು. ಈ ಮೋಟಾರ್‌ಸೈಕಲ್ ರೂ.84,000 ರಿಂದ ರೂ.90,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 124.7 ಸಿಸಿ ಪೆಟ್ರೋಲ್ ಎಂಜಿನ್‌ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 69 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Best 3 Alternative Bikes for Bajaj Pulsar 125 Shine 125 Super Splendor SP 125

ನೂತನ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಬೈಕ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಇದರೊಂದಿಗೆ ಕಣ್ಮನ ಸೆಳೆಯುವ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಎಸ್‌ಪಿ 125 (Honda SP 125)..

ಇದು ಪ್ರಮುಖ ಬೈಕ್ ಆಗಿದ್ದು, 'ಬಜಾಜ್ ಪಲ್ಸರ್ 125'ಗೆ ಉತ್ತಮವಾದ ಪರ್ಯಾಯ ಆಯ್ಕೆಯಾಗಲಿದೆ. ಅದಕ್ಕೆ ತಕ್ಕಂತೆ ರೂ.94,000 ರಿಂದ 1 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 123.94 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 60 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Best 3 Alternative Bikes for Bajaj Pulsar 125 Shine 125 Super Splendor SP 125

ಈ ಮೋಟಾರ್‌ಸೈಕಲ್ ಪರ್ಲ್ ಸೈರನ್ ಬ್ಲೂ & ಇಂಪೀರಿಯಲ್ ರೆಡ್ ಮೆಟಾಲಿಕ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. ಫುಲ್ ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಫಂಕ್ಷನ್ ಮತ್ತು ಸೈಲೆಂಟ್ ಸ್ಟಾರ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್ & ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

Best 3 Alternative Bikes for Bajaj Pulsar 125 Shine 125 Super Splendor SP 125

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, June 10, 2025, 10:52 [IST]
English summary
Best 3 alternative bikes for bajaj pulsar 125 shine 125 super splendor sp 125
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+