Bajaj: 1.08 ಲಕ್ಷ ರೂಪಾಯಿ.. ಹೊಸ ಬಜಾಜ್ ಪಲ್ಸರ್‌ಗೆ 3 ಪರ್ಯಾಯ ಬೈಕ್‌ಗಳಿವು, ಬೆಲೆ ಎಷ್ಟು, ವಿಶೇಷತೆಗಳೇನು?
ಇತ್ತೀಚೆಗೆ 2026ರ ಬಜಾಜ್ ಪಲ್ಸರ್ 150 (Bajaj Pulsar 150) ಮೋಟಾರ್‌ಸೈಕಲ್‌ನ್ನು ಮಾರಾಟಕ್ಕೆ ತರಲಾಯಿತು. ಇದು ರೂ.1.08 ಲಕ್ಷದಿಂದ ರೂ.1.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಸ್ಪಾರ್ಕ್ಲಿ ಬ್ಲ್ಯಾಕ್ ರೆಡ್, ಸ್ಪಾರ್ಕ್ಲಿ ಬ್ಲ್ಯಾಕ್ ಬ್ಲೂ ಮತ್ತು ಸ್ಪಾರ್ಕ್ಲಿ ಬ್ಲ್ಯಾಕ್ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 165 ಮೀ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,345 ಮಿಮೀ ವೀಲ್‌ಬೇಸ್‌ನ್ನು ಪಡೆದಿದೆ.
ಈ ಬೈಕ್ 149.5 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದ್ದು, 46 ರಿಂದ 50 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡಬಹುದು ಎಂದು ಹೇಳಲಾಗಿದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ನೀವು ಇದೇ 'ಬಜಾಜ್ ಪಲ್ಸರ್ 150'ಗೆ ಬದಲಾಗಿ ಈ 3 ಮೋಟಾರ್‌ಸೈಕಲ್‌ಗಳಾದ ಹೋಂಡಾ ಯುನಿಕಾರ್ನ್, ಟಿವಿಎಸ್ ಅಪಾಚೆ ಆರ್‌ಟಿಆರ್ 160 ಮತ್ತು ಯಮಹಾ ಎಕ್ಸ್ಎಸ್ಆರ್ 155ಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಹೋಂಡಾ ಯುನಿಕಾರ್ನ್ (Honda Unicorn):
ಇದು ಜನಪ್ರಿಯ ಬೈಕ್ ಆಗಿದ್ದು, 'ಬಜಾಜ್ ಪಲ್ಸರ್ 150'ಗೆ ಬದಲಾಗಿ ಕೊಂಡುಕೊಳ್ಳಬಹುದು. ರೂ.1.11 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಮತ್ತು ರೇಡಿಯಂಟ್ ರೆಡ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 187 ಮೀ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,335 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಯುನಿಕಾರ್ನ್' ಮೋಟಾರ್‌ಸೈಕಲ್, 162.71 ಸಿಸಿ ಪೆಟ್ರೋಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಮತ್ತು ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೆನ್ಸರ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಟಿವಿಎಸ್ ಅಪಾಚೆ ಆರ್‌ಟಿಆರ್ 160 (TVS Apache RTR 160):
ಈ ಬೈಕ್‌ನ್ನು 'ಬಜಾಜ್ ಪಲ್ಸರ್ 150'ಗೆ ಪರ್ಯಾಯವಾಗಿ ಮನೆಗೆ ತರಬಹುದು. ರೂ.1.01 ಲಕ್ಷ ಮತ್ತು ರೂ.1.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ರೇಸಿಂಗ್ ರೆಡ್, ಟಿ ಗ್ರೇ, ಗ್ಲಾಸ್ ಬ್ಲ್ಯಾಕ್, ಪರ್ಲ್ ವೈಟ್ ಹಾಗೂ ಮ್ಯಾಟ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 165 ಮೀ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,300 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ 'ಅಪಾಚೆ ಆರ್‌ಟಿಆರ್ 160' ಮೋಟಾರ್‌ಸೈಕಲ್, 159.7 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 46.99 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಕ್ರ್ಯಾಶ್ ಅಲರ್ಟ್ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಯಮಹಾ ಎಕ್ಸ್ಎಸ್ಆರ್ 155 (Yamaha XSR 155):
ಇದೊಂದು ಪ್ರಖ್ಯಾತ ಬೈಕ್ ಆಗಿದ್ದು, 'ಬಜಾಜ್ ಪಲ್ಸರ್ 150'ಗೆ ಬದಲಾಗಿಯೂ ಕೊಂಡುಕೊಳ್ಳಬಹುದು. ರೂ.1.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಉತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಮೆಟಾಲಿಕ್ ಗ್ರೇ, ವಿವಿಡ್ ರೆಡ್, ಗ್ರೇಯಿಶ್ ಗ್ರೀನ್ ಮೆಟಾಲಿಕ್ ಹಾಗೂ ಮೆಟಾಲಿಕ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 120 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,325 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ನೂತನ 'ಎಕ್ಸ್ಎಸ್ಆರ್ 155' ಮೋಟಾರ್‌ಸೈಕಲ್, 155 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 48.58 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಸ್ಮಾರ್ಟ್‌ಫೋನ್ ಬ್ಲ್ಯೂಟೂತ್ ಕನೆಕ್ಟಿವಿಟಿ ಮತ್ತು ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications








