70 ಕಿ.ಮೀ ಮೈಲೇಜ್.. 60,000 ಬೆಲೆ, Hero HF 100ಗೆ ಪರ್ಯಾಯ ಆಯ್ಕೆಯಾಗಬಲ್ಲ 3 ಪ್ರಖ್ಯಾತ ಬೈಕ್‌ಗಳಿವು!

ಹೀರೋ ಎಚ್ಎಫ್ 100 (Hero HF 100) ಜನಪ್ರಿಯ ಮೋಟಾರ್‌ಸೈಕಲ್‌ ಆಗಿದೆ. ಇದು ರೂ.60,000 ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. 97.2 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್, ಕಿಕ್-ಸ್ಟಾರ್ಟರ್ ಹಾಗೂ ಎಲೆಕ್ಟ್ರಿಕ್ ಸ್ಟಾರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಜೊತೆಗೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. ನೀವು ಇದೇ 'ಹೀರೋ ಎಚ್ಎಫ್ 100'ಗೆ ಬದಲಾಗಿ ಈ 3 ಬೈಕ್‌ಗಳನ್ನು ಖರೀದಿ ಮಾಡಬಹುದು. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಬಜಾಜ್ ಪ್ಲಾಟಿನಾ 100 (Bajaj Platina 100)

ಇದು 'ಹೀರೋ ಎಚ್ಎಫ್ 100'ಗೆ ಅತ್ಯುತ್ತಮ ಪರ್ಯಾಯ ಆಯ್ಕೆಯಾಗಲಿದ್ದು, ಅದಕ್ಕೆ ತಕ್ಕಂತೆ ಅತಿ ಕಡಿಮೆ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. ರೂ.69,000 ಎಕ್ಸ್-ಶೋರೂಂ ದರವನ್ನು ಪಡೆದಿದೆ. 102 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 70 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

Best 3 Alternative Bikes For Hero HF 100 Platina Shine Sport

ಈ ಮೋಟಾರ್‌ಸೈಕಲ್‌ ತುಂಬಾ ಸರಳವಾದ ವಿನ್ಯಾಸವನ್ನು ಪಡೆದಿದೆ. ಬ್ಲ್ಯಾಕ್ & ಬ್ಲೂ, ಬ್ಲ್ಯಾಕ್ & ಗೋಲ್ಡ್, ಬ್ಲ್ಯಾಕ್ & ಸಿಲ್ವರ್, ಬ್ಲ್ಯಾಕ್ & ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಆಂಟಿ-ಸ್ಕಿಡ್ ಬ್ರೇಕಿಂಗ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೋಂಡಾ ಶೈನ್ 100 (Honda Shine 100)

ಇದನ್ನು ಕೂಡ 'ಹೀರೋ ಎಚ್ಎಫ್ 100'ಗೆ ಉತ್ತಮವಾದ ಬದಲಿ ಬೈಕ್ ಎಂದು ಪರಿಗಣಿಸಬಹದು. ಈ ಮೋಟಾರ್‌ಸೈಕಲ್‌ ರೂ.69,000 ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದ್ದು, ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಇದರೊಂದಿಗೆ ನೋಡುಗರನ್ನು ಸೆಳೆಯುವಂತಹ ವಿನ್ಯಾಸವನ್ನು ಹೊಂದಿದ್ದು, ಬ್ಲ್ಯಾಕ್ ವಿತ್ ರೆಡ್, ಬ್ಲ್ಯಾಕ್ ವಿತ್ ಬ್ಲೂ, ಬ್ಲ್ಯಾಕ್ ವಿತ್ ಆರೆಂಜ್ ಮತ್ತು ಬ್ಲ್ಯಾಕ್ ವಿತ್ ಗ್ರೇ ಸೇರಿದಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

Best 3 Alternative Bikes For Hero HF 100 Platina Shine Sport

ಈ ಬೈಕ್ ಬೆಲೆಗೆ ತಕ್ಕಂತೆ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 98.98 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 7.28 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.04 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 65 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಶೈನ್ ಮೋಟಾರ್‌ಸೈಕಲ್‌ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಟ್ವಿನ್ ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್ ಸ್ಟ್ಯಾಂಡ್ ಸೆನ್ಸರ್ ಮತ್ತು ಸಿಂಗಲ್ ಪೀಸ್ ಸೀಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಈ ಬೈಕ್ 99 ಕೆಜಿ ತೂಕವಿದ್ದು, 9 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

Best 3 Alternative Bikes For Hero HF 100 Platina Shine Sport

ಟಿವಿಎಸ್ ಸ್ಪೋರ್ಟ್ (TVS Sport)

ಇದು ಪ್ರಖ್ಯಾತ ಬೈಕ್ ಆಗಿದ್ದು, 'ಹೀರೋ ಎಚ್ಎಫ್ 100'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ಕೈಗೆಟುಕುವ ಬೆಲೆಯಲ್ಲಿಯೂ ದೊರೆಯಲಿದ್ದು, ರೂ.69,000 ರಿಂದ 72,000 ಎಕ್ಸ್-ಶೋರೂಂ ದರವನ್ನು ಪಡೆದಿದೆ. ಹೀಗಾಗಿ, ಈ ಮೋಟಾರ್‌ಸೈಕಲ್‌ನ್ನು ಶ್ರೀಸಾಮಾನ್ಯರು ಸಹ ಸುಲಭವಾಗಿ ಮನೆಗೆ ತರಬಹುದು.

ಹೊಸ ಸ್ಪೋರ್ಟ್ ಬೈಕ್ 109.7 ಸಿಸಿ ಏರ್-ಕೋಲ್ಡ್, ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಸ್ಪೀಡೋಮೀಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

Article Published On: Thursday, June 12, 2025, 16:35 [IST]
English summary
Best 3 alternative bikes for hero hf 100 platina shine sport
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+