70 ಕಿ.ಮೀ ಮೈಲೇಜ್, 55,992 ಬೆಲೆ.. 'ಹೀರೋ ಹೆಚ್ಎಫ್ ಡಿಲಕ್ಸ್'ಗೆ 3 ಬದಲಿ ಬೈಕ್‌ಗಳು, ಬೆಲೆ ಎಷ್ಟು.. ವಿಶೇಷತೆಗಳೇನು?
ಹೀರೋ ಹೆಚ್ಎಫ್ ಡಿಲಕ್ಸ್ (Hero HF Deluxe) ಜನಪ್ರಿಯ ಬೈಕ್ ಎಂದೇ ಹೆಸರುವಾಸಿಯಾಗಿದೆ. ಇದು ಕನಿಷ್ಠ ರೂ.55,992 ಹಾಗೂ ಗರಿಷ್ಠ ರೂ.68,485 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಬ್ಲ್ಯಾಕ್ ವಿತ್ ಪರ್ಪಲ್, ಬ್ಲ್ಯಾಕ್ ವಿತ್ ರೆಡ್, ಟೆಕ್ನೋ ಬ್ಲ್ಯೂ, ಹೆವಿ ಗ್ರೇ ವಿತ್ ಗ್ರೀನ್ ಹಾಗೂ ಹೆವಿ ಗ್ರೇ ವಿತ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 1,965 ಮಿ.ಮೀ ಉದ್ದ, 720 ಮಿ.ಮೀ ಅಗಲ ಹಾಗೂ 1,045 ಮಿ.ಮೀ ಎತ್ತರವಿದೆ. 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,235 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.
ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 97.2-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 70 ಕಿ.ಮೀ ಮೈಲೇಜ್ ನೀಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂಭಾಗ (ರೇರ್) ಟ್ವಿನ್ ಪ್ರಿಲೋಡ್ ಅಡ್ಜಸ್ಟಬಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ತನ್ನದಾಗಿಸಿಕೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ನೀವು 'ಹೀರೋ ಹೆಚ್ಎಫ್ ಡಿಲಕ್ಸ್'ಗೆ ಪರ್ಯಾಯವಾಗಿ ಈ 3 ಜನಪ್ರಿಯ ಮೋಟಾರ್‌ಸೈಕಲ್‌ಗಳಾದ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್, ಬಜಾಜ್ ಸಿಟಿ 110 ಹಾಗೂ ಟಿವಿಎಸ್ ರೇಡಿಯನ್‌ಗಳನ್ನು ಖರೀದಿ ಮಾಡಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ (TVS Star City Plus):
ಈ ಬೈಕ್‌ನ್ನು 'ಹೀರೋ ಹೆಚ್ಎಫ್ ಡಿಲಕ್ಸ್'ಗೆ ಬದಲಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ಅಗ್ಗದ ದರದಲ್ಲೂ ಲಭ್ಯವಿದೆ. ರೂ.72,500 ರಿಂದ ರೂ.75,200 ಬೆಲೆಯನ್ನು ಒಳಗೊಂಡಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಬ್ಲ್ಯಾಕ್ ರೆಡ್, ಬ್ಲ್ಯಾಕ್ ಬ್ಲ್ಯೂ, ಬ್ಲ್ಯೂ ಸಿಲ್ವರ್, ಗ್ರೇ ಬ್ಲ್ಯಾಕ್ ಮತ್ತು ಬ್ಲ್ಯಾಕ್ ಗ್ರೀನ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 172 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,260 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಸ್ಟಾರ್ ಸಿಟಿ ಪ್ಲಸ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 109.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 83 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡಿಸ್ಕ್ & ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಬಜಾಜ್ ಸಿಟಿ 110ಎಕ್ಸ್ (Bajaj CT 110X):
ಇದು ಪ್ರಮುಖ ಮೋಟಾರ್‌ಸೈಕಲ್ ಆಗಿದೆ. 'ಹೀರೋ ಹೆಚ್ಎಫ್ ಡಿಲಕ್ಸ್'ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ರೂ.67,284 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಮ್ಯಾಟ್ ವೈಲ್ಡ್ ಗ್ರೀನ್, ಎಬೊನಿ ಬ್ಲ್ಯಾಕ್-ರೆಡ್ ಹಾಗೂ ಎಬೊನಿ ಬ್ಲ್ಯಾಕ್-ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,285 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ 'ಸಿಟಿ 110ಎಕ್ಸ್' ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 115.45-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 70 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್‌ನ್ನು ತನ್ನದಾಗಿಸಿಕೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಟಿವಿಎಸ್ ರೇಡಿಯನ್ (Tvs Radeon):
ಈ ಬೈಕ್‌ನ್ನು 'ಹೀರೋ ಹೆಚ್ಎಫ್ ಡಿಲಕ್ಸ್'ಗೆ ಬದಲಾಗಿ ಮನೆಗೆ ತರಬಹುದು. ರೂ.68,100 ರಿಂದ ರೂ.80,300 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಪಡೆದಿದೆ. ಮೆಟಲ್ ಬ್ಲ್ಯಾಕ್, ಆಲ್ ಬ್ಲ್ಯಾಕ್, ಟೈಟಾನಿಯಂ ಗ್ರೇ, ರಾಯಲ್ ಪರ್ಪಲ್ ಮತ್ತು ಸ್ಟಾರ್‌ಲೈಟ್ ಬ್ಲ್ಯೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1265 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ರೇಡಿಯನ್' 109.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 70 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಎಲೆಕ್ಟ್ರಿಕ್ ಸೆಲ್ಫ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








