50+ Km ಮೈಲೇಜ್.. ಅಗ್ಗದ 'Hero Super Splendor XTEC'ಗೆ ಬದಲಿ ಆಯ್ಕೆಯಾಗಬಲ್ಲ 3 ಬೈಕ್‌ಗಳಿವು, ಬೆಲೆಯೂ ಕಡಿಮೆ!

ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC) ಪ್ರಮುಖ ಬೈಕ್ ಆಗಿದೆ. ಇದು ರೂ.88,000 ರಿಂದ ರೂ.92,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124.7 ಸಿಸಿ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ನೀವು 'ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್'ಗೆ ಬದಲಾಗಿ ಈ 3 ಜನಪ್ರಿಯ ಮೋಟಾರ್‌ಸೈಕಲ್‌ಗಳನ್ನು ಕೂಡ ಖರೀದಿ ಮಾಡಬಹುದು. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.

ಹೋಂಡಾ ಶೈನ್ 125 (Honda Shine 125): ಇದು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಈ ಬೈಕ್ ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.83,000 ರಿಂದ ರೂ.89,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

Best 3 Alternative Bikes For Hero Super Splendor XTEC Honda Shine Bajaj Pulsar Honda SP 125

ಈ ಬೈಕ್ ಬೆಲೆಗೆ ತಕ್ಕಂತೆ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. 123.94 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 55 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಜೆನಿ ಗ್ರೇ ಮೆಟಾಲಿಕ್ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳನ್ನು ಒಳಗೊಂಡಿದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ.

ಬಜಾಜ್ ಪಲ್ಸರ್ 125 (Bajaj Pulsar 125): ಈ ಮೋಟಾರ್‌ಸೈಕಲ್‌ 'ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್' ಬೈಕ್‌ಗೆ ಅತ್ಯುತ್ತಮ ಪ್ರರ್ಯಾಯ ಆಯ್ಕೆಯಾಗಲಿದೆ ಎಂದು ಹೇಳಬಹುದು. ಇದು ಬಜೆಟ್ ಬೆಲೆಯಲ್ಲಿಯೂ ಸಿಗುತ್ತದೆ. ರೂ.85,000 ರಿಂದ ರೂ.93,000 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ.

Best 3 Alternative Bikes For Hero Super Splendor XTEC Honda Shine Bajaj Pulsar Honda SP 125

ನೂತನ ಬಜಾಜ್ ಪಲ್ಸರ್ 125 ಬೈಕ್ ಹೆಚ್ಚು ಬಲಶಾಲಿಯಾದ 124.4 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 51 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್ ಡಿಜಿಟಲ್ ಕನ್ಸೋಲ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಮತ್ತು ಹಿಂಭಾಗ (ರೇರ್) ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

Best 3 Alternative Bikes For Hero Super Splendor XTEC Honda Shine Bajaj Pulsar Honda SP 125

ಹೋಂಡಾ ಎಸ್‌ಪಿ 125 (Honda SP 125): ಇದೊಂದು ಜನಪ್ರಿಯ ಬೈಕ್ ಆಗಿದ್ದು, ಅತ್ಯಂತ ಬಜೆಟ್ ಬೆಲೆಯಲ್ಲಿಯೂ ಸಿಗುತ್ತದೆ. ಈ ಬೈಕ್ ರೂ.89,000 ರಿಂದ ರೂ.1 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 123.94 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Best 3 Alternative Bikes For Hero Super Splendor XTEC Honda Shine Bajaj Pulsar Honda SP 125

ಹೊಸ ಹೋಂಡಾ ಎಸ್‌ಪಿ 125 ಮೋಟಾರ್‌ಸೈಕಲ್‌ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಇದು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಇಂಪೀರಿಯಲ್ ರೆಡ್ ಮೆಟಾಲಿಕ್ ಬ್ಲ್ಯಾಕ್ ಮತ್ತು ಪರ್ಲ್ ಸೈರನ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಸೈಲೆಂಟ್ ಸ್ಟಾರ್ಟರ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ.

Take a Poll

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, May 10, 2025, 19:56 [IST]
English summary
Best 3 alternative bikes for hero super splendor xtec honda shine bajaj pulsar honda sp 125
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+