ಬೆಲೆಯೂ ಅಗ್ಗ.. ಹೊಸ ರಾಯಲ್ ಎನ್‌ಫೀಲ್ಡ್ ಮಿಟಿಯೋರ್ 350ಗೆ ಪರ್ಯಾಯವಾಗಬಲ್ಲ 3 ಜನಪ್ರಿಯ ಬೈಕ್‌ಗಳಿವು!

ನೂತನ ರಾಯಲ್ ಎನ್‌ಫೀಲ್ಡ್ ಮಿಟಿಯೋರ್ 350 (Royal Enfield Meteor 350) ಬೈಕ್, ಸೋಮವಾರವಷ್ಟೇ ಮಾರಾಟಕ್ಕೆ ಬಂದಿದೆ. ಇದು ರೂ.1.95 ಲಕ್ಷದಿಂದ ರೂ.2.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಫೈರ್‌ಬಾಲ್ ಆರೆಂಜ್, ಫೈರ್‌ಬಾಲ್ ಗ್ರೇ, ಸ್ಟೆಲ್ಲಾರ್ ಮ್ಯಾಟ್ ಗ್ರೇ, ಸ್ಟೆಲ್ಲಾರ್ ಮೆರೈನ್ ಬ್ಲೂ, ಅರೋರಾ ರೆಟ್ರೊ ಗ್ರೀನ್ ಹಾಗೂ ಅರೋರಾ ರೆಡ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 349 ಸಿಸಿ ಏರ್-ಕೋಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ ಹಾಗೂ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 35 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಈ ಮೋಟಾರ್‌ಸೈಕಲ್‌ 120 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ ಹಾಗೂ ಯುಎಸ್‌‍ಬಿ ಟೈಪ್-ಸಿ ಫಾಸ್ಟ್-ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡುಯಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ನೀವು 'ಮಿಟಿಯೋರ್ 350'ಗೆ ಬದಲಾಗಿ ಈ 3 ಬೈಕ್‌ಗಳನ್ನು ಖರೀದಿ ಮಾಡಬಹುದು.

Best 3 Alternative Bikes For Royal Enfield Meteor 350 Honda CB350 Jawa 350 And Triumph Thruxton 400

ಹೋಂಡಾ ಸಿಬಿ350 (Honda CB350):

ಇದನ್ನು 'ರಾಯಲ್ ಎನ್‌ಫೀಲ್ಡ್ ಮಿಟಿಯೋರ್ 350'ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ಕನಿಷ್ಠ ರೂ.2.16 ಲಕ್ಷ ಹಾಗೂ ಗರಿಷ್ಠ ರೂ.2.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ರೆಬೆಲ್ ರೆಡ್ ಮೆಟಾಲಿಕ್, ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಡೀಪ್ ಗ್ರೌಂಡ್ ಗ್ರೇ, ಮ್ಯಾಟ್ ಡ್ಯೂನ್ ಬ್ರೌನ್ ಹಾಗೂ ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಹೋಂಡಾ ಸಿಬಿ350 ಮೋಟಾರ್‌ಸೈಕಲ್‌, 348.36 ಸಿಸಿ ಏರ್-ಕೋಲ್ಡ್ 4-ಸ್ಟ್ರೋಕ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 42 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

Best 3 Alternative Bikes For Royal Enfield Meteor 350 Honda CB350 Jawa 350 And Triumph Thruxton 400

ಜಾವಾ 350 (Jawa 350):

ಈ ಬೈಕ್‌ನ್ನು 'ರಾಯಲ್ ಎನ್‌ಫೀಲ್ಡ್ ಮಿಟಿಯೋರ್ 350'ಗೆ ಬದಲಾಗಿ ಕೊಂಡುಕೊಳ್ಳಬಹುದು. ರೂ1.83 ಲಕ್ಷದಿಂದ ರೂ.2.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಅಬ್ಸಿಡಿಯನ್ ಬ್ಲ್ಯಾಕ್, ಬ್ಲ್ಯಾಕ್, ವೈಟ್, ಡೀಪ್ ಫಾರೆಸ್ಟ್ ಹಾಗೂ ಮಿಸ್ಟಿಕ್ ಆರೆಂಜ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಹೊಸ ಜಾವಾ 350 ಮೋಟಾರ್‌ಸೈಕಲ್‌ 334 ಸಿಸಿ ಸಿಂಗಲ್-ಸಿಲಿಂಡರ್ 4-ಸ್ಟ್ರೋಕ್ ಲಿಕ್ವಿಡ್ ಕೋಲ್ಡ್ ಪೆಟ್ರೋಲ್ ಹಾಗೂ 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 30 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

Best 3 Alternative Bikes For Royal Enfield Meteor 350 Honda CB350 Jawa 350 And Triumph Thruxton 400

ಟ್ರಯಂಫ್ ಥ್ರಕ್ಸ್‌ಟನ್ 400 (Triumph Thruxton 400):

ಇದು ಸಹ 'ರಾಯಲ್ ಎನ್‌ಫೀಲ್ಡ್ ಮಿಟಿಯೋರ್ 350'ಗೆ ಪರ್ಯಾಯ ಆಯ್ಕೆಯಾಗಲಿದೆ. ರೂ.2.74 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಲಾವಾ ರೆಡ್ ಗ್ಲಾಸ್/ ಅಲ್ಯೂಮಿನಿಯಂ ಸಿಲ್ವರ್, ಫ್ಯಾಂಟಮ್ ಬ್ಲಾಕ್/ ಅಲ್ಯೂಮಿನಿಯಂ ಸಿಲ್ವರ್, ಮೆಟಾಲಿಕ್ ರೇಸಿಂಗ್ ಯೆಲ್ಲೋ/ ಅಲ್ಯೂಮಿನಿಯಂ ಸಿಲ್ವರ್ ಹಾಗೂ ಪರ್ಲ್ ಮೆಟಾಲಿಕ್ ವೈಟ್/ ಸ್ಟಾರ್ಮ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Best 3 Alternative Bikes For Royal Enfield Meteor 350 Honda CB350 Jawa 350 And Triumph Thruxton 400

ಈ ಬೈಕ್ 398 ಸಿಸಿ ಲಿಕ್ವಿಡ್ ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ ಹಾಗೂ 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 27 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಟ್ರಾಕ್ಷನ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

Article Published On: Wednesday, September 17, 2025, 16:50 [IST]
English summary
Best 3 alternative bikes for royal enfield meteor 350 honda cb350 jawa 350 and triumph thruxton 400
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+