93,800 ಬೆಲೆ.. ಹೊಸ ಟಿವಿಎಸ್ ರೈಡರ್ ಡುಯಲ್ ಡಿಸ್ಕ್ ವೇರಿಯೆಂಟ್‌ಗೆ ಬದಲಿಯಾಗಬಲ್ಲ 3 ಬೈಕ್‌ಗಳಿವು!
ಇತ್ತೀಚೆಗೆ ಟಿವಿಎಸ್ ರೈಡರ್ (TVS Raider) ಮೋಟಾರ್‌ಸೈಕಲ್‌ನ ನೂತನ ರೂಪಾಂತರವಾದ 'ಡುಯಲ್ ಡಿಸ್ಕ್ ಬ್ರೇಕ್'ನ್ನು ಮಾರಾಟದಕ್ಕೆ ತರಲಾಗಿತ್ತು. ಇದು ರೂ.93,800 ದಿಂದ ರೂ.95,600 (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಸ್‌ಎಕ್ಸ್‌ಸಿ ಡಿಡಿ (ಡುಯಲ್ ಡಿಸ್ಕ್) & ಟಿಎಫ್‌ಟಿ ಡಿಡಿ (ಡುಯಲ್ ಡಿಸ್ಕ್) ಎಂಬ 2 ರೂಪದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 124.8-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 56.7 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್/ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ನೀವು ಇದೇ 'ರೈಡರ್ ಡುಯಲ್ ಡಿಸ್ಕ್' ವೇರಿಯೆಂಟ್‌ಗೆ ಪರ್ಯಾಯವಾಗಿ ಈ 3 ಬೈಕ್‌ಗಳನ್ನು ಖರೀದಿ ಮಾಡಬಹುದು. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಬಜಾಜ್ ಪಲ್ಸರ್ 125 (Bajaj Pulsar 125):
ಇದು ಕೂಡ 'ಟಿವಿಎಸ್ ರೈಡರ್ ಡುಯಲ್ ಡಿಸ್ಕ್' ವೇರಿಯೆಂಟ್‌ಗೆ ಬದಲಿ ಆಯ್ಕೆಯಾಗಲಿದೆ. ಕನಿಷ್ಠ ರೂ.79,048 ರಿಂದ ಗರಿಷ್ಠ ರೂ.87,527 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಉತ್ತಮವಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಹೊಂದಿದೆ. ಜೊತೆಗೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1320 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಈ ಬೈಕ್ ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 124.4-ಸಿಸಿ ಪೆಟ್ರೋಲ್ ಎಂಜಿನ್ & 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 55 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 105 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 7.5 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ನೂತನ 'ಪಲ್ಸರ್' ಫುಲ್ ಡಿಜಿಟಲ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 17 ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಸಿಬಿಎಸ್ (ಕಂಬೈನ್ಡ್ - ಬ್ರೇಕಿಂಗ್ ಸಿಸ್ಟಮ್) ಹಾಗೂ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC):
ಈ ಮೋಟಾರ್‌ಸೈಕಲ್‌ನ 'ಟಿವಿಎಸ್ ರೈಡರ್ ಡುಯಲ್ ಡಿಸ್ಕ್' ವೇರಿಯೆಂಟ್‌ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ರೂ.81,998 ರಿಂದ ರೂ.85,594 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್, ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್ ಹಾಗೂ 18 ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಜೊತೆಗೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. 180 ಮಿ.ಮೀ ಗ್ರೌಂಡ್ ಕಿಯರೆನ್ಸ್ & 1267 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಹೊಸ 'ಸೂಪರ್ ಸ್ಪ್ಲೆಂಡರ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 124.7-ಸಿಸಿ ಪೆಟ್ರೋಲ್ ಎಂಜಿನ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 69 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ, ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಹಾಗೂ ಸೈಡ್ ಸ್ಟಾಂಡ್ ಎಂಜಿನ್ ಕಟ್ ಆಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೋಂಡಾ ಶೈನ್ 125 (Honda Shine 125):
ಇದನ್ನು 'ಟಿವಿಎಸ್ ರೈಡರ್ ಡುಯಲ್ ಡಿಸ್ಕ್' ವೇರಿಯೆಂಟ್‌ಗೆ ಬದಲಾಗಿ ಖರೀದಿ ಮಾಡಬಹುದು. ಕನಿಷ್ಠ ರೂ.78,539 ರಿಂದ ಗರಿಷ್ಠ ರೂ.82,898 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್ ಹಾಗೂ ಎಲ್ಇಡಿ ಡಿಆರ್‌ಎಲ್ ಆಯ್ಕೆಯನ್ನು ಒಳಗೊಂಡಿದೆ. ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ಈ ಬೈಕ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 123.94-ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 55 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹತ್ತಾರು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








