83 Km ಮೈಲೇಜ್.. 69,300 ರೂಪಾಯಿ, ಹೊಸ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್‌ಗೆ 3 ಬದಲಿ ಬೈಕ್‌ಗಳಿವು.. ಬೆಲೆಯೂ ಕಮ್ಮಿ!
ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ (TVS Star City Plus) ಪ್ರಖ್ಯಾತ ಮೋಟಾರ್‌ಸೈಕಲ್ ಆಗಿದೆ. ಇದು ರೂ.69,300 ರಿಂದ ರೂ.72,900 (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಬ್ಲ್ಯಾಕ್-ರೆಡ್, ಗ್ರೇ-ಬ್ಲ್ಯಾಕ್, ಬ್ಲ್ಯಾಕ್- ಬ್ಲೂ, ಬ್ಲೂ-ಸಿಲ್ವರ್ ಹಾಗೂ ಬ್ಲ್ಯಾಕ್-ಗ್ರೀನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 109 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 83 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಸಿಕೊಂಡಿದೆ.
ನೀವು ಇದೇ 'ಟಿವಿಎಸ್ ಸ್ಟಾರ್ ಸಿಟಿ ಪ್ಲಸ್' ಬದಲಾಗಿ ಈ 3 ಜನಪ್ರಿಯ ಬೈಕ್‌ಗಳಾದ ಬಜಾಜ್ ಫ್ರೀಡಂ 125, ಹೀರೋ ಎಚ್ಎಫ್ 100 ಹಾಗೂ ಹೋಂಡಾ ಶೈನ್ 100ಗಳನ್ನು ಕೂಡ ಸುಲಭವಾಗಿ ಕೊಂಡುಕೊಳ್ಳಬಹುದು. ಬನ್ನಿ, ಈ ನೂತನ ಮೋಟಾರ್‌ಸೈಕಲ್‌ಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಬಜಾಜ್ ಫ್ರೀಡಂ 125 (Bajaj Freedom 125):
ಇದು ಸಿಎನ್‌ಜಿ ಚಾಲಿತ ಬೈಕ್ ಆಗಿದ್ದರೂ 'ಟಿವಿಎಸ್ ಸ್ಟಾರ್ ಸಿಟಿ ಪ್ಲಸ್'ಗೆ ಪರ್ಯಾಯ ಆಯ್ಕೆಯಾಗಬಲ್ಲದು. ಅದಕ್ಕೆ ತಕ್ಕಂತೆ ರೂ.90,976 ರಿಂದ ರೂ.1.07 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ರೇಸಿಂಗ್ ರೆಡ್, ಸೈಬರ್ ವೈಟ್, ಎಬೊನಿ ಬ್ಲ್ಯಾಕ್, ಪ್ಯೂಟರ್ ಗ್ರೇ ಹಾಗೂ ಕೆರಿಬಿಯನ್ ಬ್ಲೂ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ 'ಫ್ರೀಡಂ' ಮೋಟಾರ್‌ಸೈಕಲ್ 124.58 ಸಿಸಿ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ಫುಲ್ ಟ್ಯಾಂಕ್ ಮಾಡಿಸಿದರೆ, 330 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಡಿಸ್‌ಪ್ಲೇ, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಮೊಬೈಲ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೀರೋ ಎಚ್ಎಫ್ 100 (Hero HF 100):
ಈ ಬೈಕ್‌ನ್ನು 'ಟಿವಿಎಸ್ ಸ್ಟಾರ್ ಸಿಟಿ ಪ್ಲಸ್'ಗೆ ಬದಲಾಗಿ ಕೊಂಡುಕೊಳ್ಳಬಹುದು. ಇದು ರೂ.48,857 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ರೆಡ್-ಬ್ಲ್ಯಾಕ್ ಮತ್ತು ಬ್ಲ್ಯೂ-ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,235 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.
ಹೊಸ 'ಎಚ್ಎಫ್ 100' ಮೋಟಾರ್‌ಸೈಕಲ್ 97.2 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 70 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್, ಕಿಕ್ ಸ್ಟಾರ್ಟರ್ & ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೋಂಡಾ ಶೈನ್ 100 (Honda Shine 100):
ಇದನ್ನು ಸಹ 'ಟಿವಿಎಸ್ ಸ್ಟಾರ್ ಸಿಟಿ ಪ್ಲಸ್'ಗೆ ಪರ್ಯಾಯವಾಗಿ ಖರೀದಿ ಮಾಡಬಹುದಾಗಿದ್ದು, ರೂ.63,191 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಬ್ಲ್ಯಾಕ್ ವಿತ್ ರೆಡ್, ಬ್ಲ್ಯಾಕ್ ವಿತ್ ಬ್ಲೂ, ಬ್ಲ್ಯಾಕ್ ವಿತ್ ಆರೆಂಜ್, ಬ್ಲ್ಯಾಕ್ ವಿತ್ ಗ್ರೇ & ಬ್ಲ್ಯಾಕ್ ವಿತ್ ಗ್ರೀನ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ನೂತನ 'ಶೈನ್' 98.98 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 65 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್-ಸ್ಟ್ಯಾಂಡ್ ಸೆನ್ಸರ್ ಹಾಗೂ ಸಿಂಗಲ್-ಪೀಸ್ ಸೀಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.


Click it and Unblock the Notifications








