ಹೋಂಡಾ ಆಕ್ಟಿವಾ 125ಗೆ ಮೂರು ಪರ್ಯಾಯ ಸ್ಕೂಟರ್‌ಗಳಿವು.. ಭಾರೀ ಮೈಲೇಜ್, ಕಡಿಮೆ ಬೆಲೆ!

ಹೋಂಡಾ ಆಕ್ಟಿವಾ 125 (Honda Activa 125) ಪ್ರಖ್ಯಾತ ಸ್ಕೂಟರ್ ಆಗಿದೆ. ಇದು ರೂ.94,000 ರಿಂದ ರೂ.97,000 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 123.92 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 48 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಿಎಫ್‌ಟಿ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್‌, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ. ಈ ಆಕ್ಟಿವಾ 125ಗೆ ಪರ್ಯಾಯವಾಗಿ ಗ್ರಾಹಕರು ಈ 3 ಸ್ಕೂಟರ್‌ಗಳನ್ನು ಖರೀದಿ ಮಾಡಬಹುದು. ಬನ್ನಿ.. ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರವನ್ನು ತಿಳಿಯೋಣ.

ಸುಜುಕಿ ಆಕ್ಸೆಸ್ 125 (Suzuki Access 125): ಈ ಸ್ಕೂಟರ್ ರೂ.85,000 ರಿಂದ ರೂ.96,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 125 ಸಿಸಿ ಸಾಮರ್ಥ್ಯದ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 47.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್ ಮತ್ತು ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

Best 3 Alternative For Honda Activa 125 Scooter Suzuki Access 125 Tvs Jupiter 125 Hero Destini 125

ನೂತನ ಸುಜುಕಿ ಆಕ್ಸೆಸ್ ಸ್ಕೂಟರ್ 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. ಈ ಸ್ಕೂಟರ್ 103 ಕೆಜಿ ತೂಕವಿದ್ದು, 5 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.

ಟಿವಿಎಸ್ ಜುಪಿಟರ್ 125 (TVS Jupiter 125): ಇದು ಕೂಡ ಜನಪ್ರಿಯ ಸ್ಕೂಟರ್ ಆಗಿದ್ದು, ರೂ.79,500 ರಿಂದ ರೂ.90,000 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 124.8 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 57.27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಪ್ರಿಸ್ಟೈನ್ ವೈಟ್, ಇಂಡಿಬ್ಲೂ, ಡಾನ್ ಆರೆಂಜ್ ಮತ್ತು ಟೈಟಾನಿಯಂ ಗ್ರೇ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

Best 3 Alternative For Honda Activa 125 Scooter Suzuki Access 125 Tvs Jupiter 125 Hero Destini 125

ಈ ಟಿವಿಎಸ್ ಜುಪಿಟರ್ 125 ಸ್ಕೂಟರ್ ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಸಾಕೆಟ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್ ಹಾಗೂ ವಾಯ್ಸ್ ಅಸಿಸ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ನೂತನ ಜುಪಿಟರ್ 125 ಸ್ಕೂಟರ್ 108 ಕೆಜಿ ತೂಕವಿದ್ದು, 5.1 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.

ಹೀರೋ ಡೆಸ್ಟಿನಿ 125 (Hero Destini 125): ಈ ಸ್ಕೂಟರ್, ರೂ.80,500 ರಿಂದ ರೂ.90,500 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 125 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 45 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಸ್ಕೂಟರ್ ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಹೊಸದಾಗಿರುವ ಎಲ್ಇಡಿ ಹೆಡ್‌ಲೈಟ್, ಟರ್ನ್-ಇಂಡಿಕೇಟರ್‌ಗಳು ಹಾಗೂ ಸ್ಲೀಕ್ ಟೈಲ್ ಲೈಟ್‌ನ್ನು ಒಳಗೊಂಡಿದೆ.

Best 3 Alternative For Honda Activa 125 Scooter Suzuki Access 125 Tvs Jupiter 125 Hero Destini 125

ನೂತನ ಹೀರೋ ಡೆಸ್ಟಿನಿ 125 ಸ್ಕೂಟರ್ ಫುಲ್-ಡಿಜಿಟಲ್ ಡಿಸ್‌ಪ್ಲೇ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಬೂಟ್ ಲ್ಯಾಂಪ್ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಕಾಸ್ಮಿಕ್ ಬ್ಲೂ ಮತ್ತು ಮಿಸ್ಟಿಕ್ ಮೆಜೆಂಟಾ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

Best 3 Alternative For Honda Activa 125 Scooter Suzuki Access 125 Tvs Jupiter 125 Hero Destini 125

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, April 1, 2025, 8:30 [IST]
English summary
Best 3 alternative for honda activa 125 scooter suzuki access 125 tvs jupiter 125 hero destini 125
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+