Honda Activa e ಬದಲಾಗಿ ಈ 3 ಪೆಟ್ರೋಲ್ ಚಾಲಿತ ಸ್ಕೂಟರ್‌ಗಳನ್ನು ತೆಗೆದುಕೊಳ್ಳಬಹುದು.. ಯಾವುವು, ಬೆಲೆ ಎಷ್ಟು?

ಹೋಂಡಾ ಆಕ್ಟಿವಾ ಇ (Honda Activa e) ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.1.17 ಲಕ್ಷದಿಂದ ರೂ.1.52 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5 ಕೆಡಬ್ಲ್ಯೂಹೆಚ್ ಸಾಮರ್ಥ್ಯವಿರುವ ಎರಡು ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 102 ಕಿಲೋಮೀಟರ್ ಓಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. ನೀವು 'ಹೋಂಡಾ ಆಕ್ಟಿವಾ ಇ' ಬದಲಿಗೆ ಹೆಚ್ಚು-ಕಮ್ಮಿ ಅದೇ ಬೆಲೆಗೆ ಈ 3 ಪೆಟ್ರೋಲ್ ಚಾಲಿತ ಸ್ಕೂಟರ್‌ಗಳನ್ನು ಖರೀದಿಸಬಹುದು. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಮೊದಲಿಗೆ ಸುಜುಕಿ ಆಕ್ಸೆಸ್ 125 (Suzuki Access 125) ಸ್ಕೂಟರ್ ಬಗ್ಗೆ ಮಾತನಾಡೋಣ. ಇದನ್ನು ದೇಶೀಯ ಗ್ರಾಹಕರು, ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್‌ಗೆ ಪರ್ಯಾಯವಾಗಿ ಕೊಂಡುಕೊಳ್ಳಬಬಹುದು. ಈ ಸ್ಕೂಟರ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ರೂ.86,500 ರಿಂದ ರೂ.98,000 (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ.

Best 3 Alternative Petrol Scooters For Honda Activa E Details

ನೂತನ ಸುಜುಕಿ ಆಕ್ಸೆಸ್ ಸ್ಕೂಟರ್ ಬೆಲೆಗೆ ತಕ್ಕಂತೆಯೇ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದು ಕೊಂಚ ಅಧಿಕವೇ ಶಕ್ತಿಯುತವಾದ 124 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 47 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಡಿಸ್ಕ್ ಹಾಗೂ ಹಿಂಭಾಗ (ರೇರ್) ಡ್ರಮ್ ಬ್ರೇಕ್‌ನ್ನು ತನ್ನದಾಗಿಸಿಕೊಂಡಿದೆ.

ಟಿವಿಎಸ್ ಜುಪಿಟರ್ 125 (TVS Jupiter 125) ಕುರಿತಂತೆ ಹೇಳುವುದಾದರೆ, ಇದು ಸಹ ಜನಪ್ರಿಯ ಸ್ಕೂಟರ್ ಆಗಿದ್ದು, ಅತಿ ಕಡಿಮೆ ಬೆಲೆಗೂ ಸಿಗುತ್ತದೆ. ಇದರಿಂದ ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಈ ಸ್ಕೂಟರ್ ಕನಿಷ್ಠ ರೂ.88,000 ಹಾಗೂ ಗರಿಷ್ಠ ರೂ.99,000 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ.

Best 3 Alternative Petrol Scooters For Honda Activa E Details

ನೂತನ ಜುಪಿಟರ್ 125 ಸ್ಕೂಟರ್ ಅತ್ಯುತ್ತಮವಾಗಿಯೂ ಕಾರ್ಯನಿರ್ವಹಿಸುತ್ತದೆ. ಇದು 124.8 ಸಿಸಿ ಸಾಮರ್ಥ್ಯವಿರುವ ಪೆಟ್ರೋಲ್ ಎಂಜಿನ್ ಹೊಂದಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಯುಎಸ್‌‍ಬಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಕಡೆಯದಾಗಿ ಹೀರೋ ಜೂಮ್ 125 (Hero Xoom 125) ಸ್ಕೂಟರ್ ಬಗ್ಗೆ ಮಾತನಾಡುವುದಾದರೆ, ಇದು ಕೈಗೆಟುಕುವ ಬೆಲೆಯಲ್ಲಿಯೇ ಸಿಗುತ್ತದೆ ಎಂದು ಹೇಳಬಹುದು. ಈ ಸ್ಕೂಟರ್ ರೂ.88,600 ರಿಂದ ರೂ.97,500 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದ್ದು, ಶ್ರೀಸಾಮಾನ್ಯರು ಕೂಡ ತಮ್ಮ ಕುಟುಂಬದ ದ್ವಿಚಕ್ರ ವಾಹನವಾಗಿ ಆಯ್ಕೆ ಮಾಡಿಕೊಳ್ಳಬಹುದು.

Best 3 Alternative Petrol Scooters For Honda Activa E Details

ಈ ಹೀರೋ ಜೂಮ್ 125 ಸ್ಕೂಟರ್ ಸಹ ಹೆಚ್ಚು ಶಕ್ತಿಯುತವಾಗಿರುವ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. ಇದು 124.6 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 52 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್‌ ಮತ್ತು ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಜೊತೆಗೆ ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ.

Best 3 Alternative Petrol Scooters For Honda Activa E Details

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, April 25, 2025, 15:42 [IST]
English summary
Best 3 alternative petrol scooters for honda activa e details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+