80,000 ಬೆಲೆ, 45+ Km ಮೈಲೇಜ್.. Honda Activa 110ಗೆ ಬದಲಾಗಿ ಈ 3 ಸ್ಕೂಟರ್‌ಗಳನ್ನು ತೆಗೆದುಕೊಳ್ಳಬಹುದು!

ಹೋಂಡಾ ಆಕ್ಟಿವಾ 110 (Honda Activa 110) ಜನಪ್ರಿಯ ಸ್ಕೂಟರ್ ಆಗಿದ್ದು, ದಿನಬಳಕೆಗೆ ಹೆಚ್ಚು ಸೂಕ್ತವಾಗಿದೆ. ರೂ.80,000 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 109.51 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 45 ಕೆಎಂಪಿಎಲ್‌ಗೂ ಅಧಿಕ ಮೈಲೇಜ್ ನೀಡುತ್ತದೆ. 4.2-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಹಾಗೂ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. ನೀವು 'ಆಕ್ಟಿವಾ 110'ಗೆ ಪರ್ಯಾಯವಾಗಿ ಈ 3 ಸ್ಕೂಟರ್‌ಗಳನ್ನು ಕೂಡ ಖರೀದಿ ಮಾಡಬಹುದು. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಹೀರೋ ಜೂಮ್ 110 (Hero Xoom 110):

ಇದು ಪ್ರಮುಖ ಸ್ಕೂಟರ್ ಆಗಿದ್ದು, 'ಹೋಂಡಾ ಆಕ್ಟಿವಾ 110'ಗೆ ಅತ್ಯುತ್ತಮವಾದ ಬದಲಿ ಆಯ್ಕೆಯಾಗಲಿದೆ. ಅದಕ್ಕೆ ತಕ್ಕಂತೆ ರೂ.72,000 ರಿಂದ ರೂ.84,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಪೋಲ್‌ಸ್ಟಾರ್ ಬ್ಲೂ, ಸ್ಪೋರ್ಟ್ ರೆಡ್, ಬ್ಲ್ಯಾಕ್ ಹಾಗೂ ಮ್ಯಾಟ್ ಅಬ್ರಾಕ್ಸ್ ಆರೆಂಜ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Best 3 Alternative Scooters For Honda Activa 110 Xoom Jupiter Pleasure Plus

ಈ ಸ್ಕೂಟರ್, ಬಲಿಷ್ಠವಾದ 110.9 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಪಡೆದಿದ್ದು, 53 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಬೂಟ್‌ಲೈಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಟಿವಿಎಸ್ ಜುಪಿಟರ್ 110 (TVS Jupiter 110):

ಇದನ್ನು ಕೂಡ 'ಹೋಂಡಾ ಆಕ್ಟಿವಾ 110'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದಾಗಿದೆ. ಈ ಸ್ಕೂಟರ್ ರೂ.77,000 ರಿಂದ 90,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಜೊತೆಗೆ ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಡಾನ್ ಬ್ಲೂ, ಗ್ಯಾಲಕ್ಟಿಕ್ ಕಾಪರ್ ಮ್ಯಾಟ್ ಮತ್ತು ಸ್ಟಾರ್ಲೈಟ್ ಬ್ಲೂ ಗ್ಲೋಸ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Best 3 Alternative Scooters For Honda Activa 110 Xoom Jupiter Pleasure Plus

ನೂತನ ಸ್ಕೂಟರ್ ಶಕ್ತಿಯುತವಾದ ಪವರ್‌ಟ್ರೇನ್‌ ಆಯ್ಕೆಯನ್ನು ಹೊಂದಿದೆ. 113 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 7.91 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 9.8 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 48 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಜುಪಿಟರ್ ಸ್ಕೂಟರ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಇಂಟಲಿಜೆಂಟ್ ಸ್ಟಾರ್ಟ್/ಸ್ಟಾಪ್, ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್ ಮತ್ತು ಯುಎಸ್‌‍ಬಿ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 5.1 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

Best 3 Alternative Scooters For Honda Activa 110 Xoom Jupiter Pleasure Plus

ಹೀರೋ ಪ್ಲೆಷರ್ ಪ್ಲಸ್ (Hero Pleasure Plus):

ಇದು ಪ್ರಮುಖ ಸ್ಕೂಟರ್ ಆಗಿದ್ದು, 'ಹೋಂಡಾ ಆಕ್ಟಿವಾ 110'ಗೆ ಉತ್ತಮವಾದ ಬದಲಿ ಆಯ್ಕೆಯಾಗಲಿದೆ. ಅತಿ ಕಡಿಮೆ ಬೆಲೆಗೂ ಸಿಗಲಿದ್ದು, ರೂ.71,000 ರಿಂದ ರೂ.83,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಪರ್ಲ್ ಸಿಲ್ವರ್ ವೈಟ್, ಬ್ಲೂಯಿಶ್ ಟೀಲ್, ಅಬ್ರಾಕ್ಸ್ ಆರೆಂಜ್ ಬ್ಲೂ ಮತ್ತು ಬ್ಲೂಯಿಶ್ ಟೀಲ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

Best 3 Alternative Scooters For Honda Activa 110 Xoom Jupiter Pleasure Plus

ಈ ಸ್ಕೂಟರ್ 110 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಮತ್ತು ಎಲ್‌ಸಿಡಿ ಸ್ಕ್ರೀನ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇದರೊಟ್ಟಿಗೆ ಬರೋಬ್ಬರಿ 4.8 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

Article Published On: Friday, June 13, 2025, 17:30 [IST]
English summary
Best 3 alternative scooters for honda activa 110 xoom jupiter pleasure plus
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+