56 ಕಿ.ಮೀ ಮೈಲೇಜ್.. ರೂ.72,000, ಹೊಸ ಹೀರೋ ಡೆಸ್ಟಿನಿ 110ಗೆ ಪರ್ಯಾಯವಾಗಲ್ಲ 3 ಸ್ಕೂಟರ್‌ಗಳಿವು.. ಬೆಲೆ ಎಷ್ಟು?
ಈಚೆಗೆ ಹೊಚ್ಚ ಹೊಸ ಹೀರೋ ಡೆಸ್ಟಿನಿ 110 (Hero Destini 110) ಸ್ಕೂಟರ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ಇದು ರೂ.72,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಟರ್ನಲ್ ವೈಟ್, ಮ್ಯಾಟ್ ಸ್ಟೀಲ್ ಗ್ರೇ, ನೆಕ್ಸಸ್ ಬ್ಲೂ ಹಾಗೂ ಗ್ರೂವಿ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 110.9 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 56.2 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಅನಲಾಗ್ ಸ್ಪೀಡೋಮೀಟರ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ನೀವು ಇದೇ 'ಡೆಸ್ಟಿನಿ 110'ಗೆ ಬದಲಾಗಿ ಈ 3 ಸ್ಕೂಟರ್‌ಗಳನ್ನು ಖರೀದಿ ಮಾಡಬಹುದು. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಹೋಂಡಾ ಆಕ್ಟಿವಾ 110 (Honda Activa 110):
ಇದೊಂದು ಜನಪ್ರಿಯ ಸ್ಕೂಟರ್ ಎಂದೇ ಹೆಸರುವಾಗಿದೆ. 'ಹೀರೋ ಡೆಸ್ಟಿನಿ 110'ಗೆ ಪರ್ಯಾಯ ಆಯ್ಕೆಯಾಗಲಿದೆ. ಕನಿಷ್ಠ ರೂ.74,369 ರಿಂದ 87,693 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಸೈರನ್ ಬ್ಲೂ, ಪರ್ಲ್ ಪ್ರೆಷಿಯಸ್ ವೈಟ್, ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಡೀಸೆಂಟ್ ಬ್ಲೂ ಮೆಟಾಲಿಕ್, ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್ ಹಾಗೂ ಪರ್ಲ್ ಸೈರನ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಸ್ಕೂಟರ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 109.51 ಸಿಸಿ ಒಬಿಡಿ-2ಬಿ, ಏರ್-ಕೋಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 7250 ಆರ್‌ಪಿಎಂನಲ್ಲಿ 8.18 ಬಿಹೆಚ್‌ಪಿ (ಅಶ್ವ ಶಕ್ತಿ) ಹಾಗೂ 5750 ಆರ್‌ಪಿಎಂನಲ್ಲಿ 8.87 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 50 ರಿಂದ 55 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.
ನೂತನ' ಆಕ್ಟಿವಾ' ಸ್ಕೂಟರ್ 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 10.3 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. 4.2 ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನುಒಳಗೊಂಡಿದೆ. ಸುರಕ್ಷತೆಗಾಗಿ ಪ್ರಯಾಣಿಕರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಟಿವಿಎಸ್ ಜುಪಿಟರ್ 110 (TVS Jupiter 110):
ಇದು ಕೂಡ 'ಹೀರೋ ಡೆಸ್ಟಿನಿ 110'ಗೆ ಬದಲಿ ಆಯ್ಕೆಯಾಗಲಿದೆ. ರೂ.75,900 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 113 ಸಿಸಿ ಸಿಂಗಲ್- ಸಿಲಿಂಡರ್, ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 48 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.
ಈ ಸ್ಕೂಟರ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಇಂಟಲಿಜೆಂಟ್ ಸ್ಟಾರ್ಟ್-ಸ್ಟಾಪ್ ಹಾಗೂ ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಟೈಟಾನಿಯಂ ಗ್ರೇ ಮ್ಯಾಟ್, ಡಾನ್ ಬ್ಲೂ ಮ್ಯಾಟ್, ಸ್ಟಾರ್ಡಸ್ಟ್ ಬ್ಲ್ಯಾಕ್, ಸ್ಟಾರ್ಲೈಟ್ ಬ್ಲೂ ಗ್ಲಾಸ್ ಹಾಗೂ ಗ್ಯಾಲಕ್ಟಿಕ್ ಕಾಪರ್ ಮ್ಯಾಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ಜೂಮ್ 110 (Hero Xoom 110):
ಇದೊಂದು ಸ್ವತಃ ಹೀರೋ ಕಂಪನಿಯ ಸ್ಕೂಟರ್ ಆಗಿದ್ದು, ನೂತನ 'ಹೀರೋ ಡೆಸ್ಟಿನಿ 110'ಗೆ ಪರ್ಯಾಯವಾಗಲಿದೆ. ರೂ.76,251 ರಿಂದ ರೂ.81,920 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 110.9 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 53 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಹೊಸ 'ಜೂಮ್' ಸ್ಕೂಟರ್ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಬ್ಲ್ಯಾಕ್, ಮ್ಯಾಟ್ ಅಬ್ರಾಕ್ಸ್ ಆರೆಂಜ್ ,ಪರ್ಲ್ ಸಿಲ್ವರ್ ವೈಟ್, ಸ್ಪೋರ್ಟ್ ರೆಡ್, ಮ್ಯಾಟ್ ಶ್ಯಾಡೋ ಗ್ರೇ ಹಾಗೂ ಪೋಲ್‌ಸ್ಟಾರ್ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಬೂಟ್‌ಲೈಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications