ರೂ.99,900.. 158 ಕಿ.ಮೀ ರೇಂಜ್.. ಹೊಸ TVS Orbiterಗೆ ಪರ್ಯಾಯ ಆಯ್ಕೆಯಾಗಬಲ್ಲ 3 ಜನಪ್ರಿಯ ಸ್ಕೂಟರ್‌ಗಳಿವು!
ನಿನ್ನೆಯಷ್ಟೇ ಹೊಚ್ಚ ಹೊಸ ಟಿವಿಎಸ್ ಆರ್ಬಿಟರ್ (TVS Orbiter) ಇ-ಸ್ಕೂಟರ್ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಇದು ರೂ.99,900 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 3.1 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 158 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಕ್ರೂಸ್ ಕಂಟ್ರೋಲ್, ಹಿಲ್ ಹೋಲ್ಡ್ ಫಂಕ್ಷನ್, ರಿವರ್ಸ್ ಪಾರ್ಕಿಂಗ್ ಅಸಿಸ್ಟ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನೂ ಹೊಂದಿದೆ. ಇದೇ 'ಆರ್ಬಿಟರ್'ಗೆ ಬದಲಾಗಿ ಗ್ರಾಹಕರು ಈ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಕೊಂಡುಕೊಳ್ಳಬಹುದು. ಬನ್ನಿ, ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಎಥರ್ ರಿಜ್ಟಾ (Ather Rizta):
ಇದು ಪ್ರಖ್ಯಾತ ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಟಿವಿಎಸ್ ಆರ್ಬಿಟರ್‌ಗೆ ಅತ್ಯುತ್ತಮವಾದ ಬದಲಿ ಆಯ್ಕೆಯಾಗಲಿದೆ. ರೂ.75,999 ರಿಂದ ರೂ.1.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಡೆಕ್ಕನ್ ಗ್ರೇ, ಸಿಯಾಚಿನ್ ವೈಟ್, ಪ್ಯಾಂಗೊಂಗ್ ಬ್ಲೂ, ಕಾರ್ಡಮೊಮ್ ಗ್ರೀನ್ ಹಾಗೂ ಪ್ಯಾಂಗೊಂಗ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಸ್ಕೂಟರ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2.9 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 3.7 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 123 ರಿಂದ 160 ಕಿಲೋಮೀಟರ್ ಓಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.
ನೂತನ ರಿಜ್ಟಾ ಇಕೋ & ಜಿಪ್ ಎಂಬ 3 ರೈಡಿಂಗ್ ಮೋಡ್‌ಗಳನ್ನು ಹೊಂದಿದೆ. 7-ಇಂಚಿರುವ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಸ್ಕ್ರೀನ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ವಿಡಾ ವಿ2 (Hero Vida V2):
ಇದನ್ನು ಕೂಡ ಟಿವಿಎಸ್ ಆರ್ಬಿಟರ್‌ಗೆ ಪರ್ಯಾಯವಾಗಿ ಖರೀದಿ ಮಾಡಬಹುದು. ಅದಕ್ಕೆ ತಕ್ಕಂತೆ ರೂ.74,000 ರಿಂದ ರೂ.1.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ವಿ2 ಲೈಟ್, ವಿ2 ಪ್ಲಸ್ ಮತ್ತು ವಿ2 ಪ್ರೊ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಮ್ಯಾಟ್ ವೈಟ್, ಗ್ಲಾಸಿ ಬ್ಲ್ಯಾಕ್, ಗ್ಲಾಸಿ ಸ್ಪೋರ್ಟ್ಸ್ ರೆಡ್, ಮ್ಯಾಟ್ ಅಬ್ರಾಕ್ಸ್ ಆರೆಂಜ್ ಹಾಗೂ ಮ್ಯಾಟ್ ನೆಕ್ಸಸ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಎಲೆಕ್ಟ್ರಿಕ್ ಸ್ಕೂಟರ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್), 3.44 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) & 3.94 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 94 ರಿಂದ 165 ಕಿಲೋಮೀಟರ್ ಕ್ರಮಿಸುತ್ತದೆ. 7-ಇಂಚಿರುವ ಟಿಎಫ್‌ಟಿ ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಆಕ್ಟಿವಾ ಇ (Honda Activa e):
ಇದು ಜನಪ್ರಿಯ ಸ್ಕೂಟರ್ ಆಗಿದ್ದು, ಟಿವಿಎಸ್ ಆರ್ಬಿಟರ್‌ಗೆ ಬದಲಿ ಆಯ್ಕೆಯಾಗಲಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.1.17 ಲಕ್ಷದಿಂದ ರೂ.1.52 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಶಾಲೋ ಬ್ಲೂ, ಪರ್ಲ್ ಮಿಸ್ಟಿ ವೈಟ್ ಮತ್ತು ಪರ್ಲ್ ಸೆರಿನಿಟಿ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ಹೊಸ ಆಕ್ಟಿವಾ ಇ ಸ್ಕೂಟರ್ 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯವಿರುವ 2 ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 102 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 7.0-ಇಂಚಿರುವ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications