47 ಕಿ.ಮೀ ಮೈಲೇಜ್.. ರೂ.93 927, ಯುವಕರ ಮೆಚ್ಚಿನ TVS NTORQ 125ಗೆ 3 ಬದಲಿ ಸ್ಕೂಟರ್‌ಗಳಿವು!
ಟಿವಿಎಸ್ ಎನ್‌ಟಾರ್ಕ್ 125 (TVS NTORQ 125) ಯುವಕರ ಮೆಚ್ಚಿನ ಸ್ಕೂಟರ್ ಆಗಿದೆ. ಇದು ರೂ.93 927 ರಿಂದ ರೂ.1.10 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 124.8 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 47 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜರ್ ಮತ್ತು 20-ಲೀ. ಅಂಡರ್ ಸೀಟ್ ಸ್ಟೋರೇಜ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ನೀವು 'ಎನ್‌ಟಾರ್ಕ್ 125'ಗೆ ಪರ್ಯಾಯವಾಗಿ ಈ 3 ಜನಪ್ರಿಯ ಸ್ಕೂಟರ್‌ಗಳನ್ನು ಖರೀದಿ ಮಾಡಬಹುದು. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಹೋಂಡಾ ಡಿಯೋ 125 (Honda Dio 125):
ಇದೊಂದು ಪ್ರಖ್ಯಾತ ಸ್ಕೂಟರ್ ಆಗಿದ್ದು, 'ಟಿವಿಎಸ್ ಎನ್‌ಟಾರ್ಕ್ 125'ಗೆ ಅತ್ಯುತ್ತಮವಾದ ಬದಲಿ ಆಯ್ಕೆಯಾಗಲಿದೆ. ಅದಕ್ಕೆ ತಕ್ಕಂತೆ ರೂ.91,649 ರಿಂದ ರೂ.97,044 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 123.92 ಸಿಸಿ ಏರ್-ಕೋಲ್ಡ್ ಫ್ಯುಯೆಲ್-ಇಂಜೆಕ್ಟ್ದ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 48 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಈ ಸ್ಕೂಟರ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಫಂಕ್ಷನ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಜೊತೆಗೆ 1830 ಎಂಎಂ ಉದ್ದ, 707 ಎಂಎಂ ಅಗಲ ಮತ್ತು 1172 ಎಂಎಂ ಎತ್ತರವು ಇದೆ. 5.3 ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಸುಜುಕಿ ಆಕ್ಸೆಸ್ 125 (Suzuki Access 125):
ಈ ಸ್ಕೂಟರ್‌ನ್ನು 'ಟಿವಿಎಸ್ ಎನ್‌ಟಾರ್ಕ್ 125'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ಇದು ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.87,000 ರಿಂದ 98,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಜೊತೆಗೆ ತುಂಬಾ ಸರಳವಾದ ವಿನ್ಯಾಸ ಹೊಂದಿದ್ದು, ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಶೈನಿ ಬೀಜ್, ಪರ್ಲ್ ಗ್ರೇಸ್ ವೈಟ್, ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್ ಮತ್ತು ಸಾಲಿಡ್ ಐಸ್ ಗ್ರೀನ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ ಆಕ್ಸೆಸ್ ಸ್ಕೂಟರ್ 125 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 45 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಬರೋಬ್ಬರಿ 106 ಕೆಜಿ ತೂಕವಿದೆ.160 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1265 ಎಂಎಂ ಉದ್ದದ ವೀಲ್‌ಬೇಸ್‌ನ್ನು ಪಡೆದಿದೆ. 5 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.
ಇದು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂಭಾಗ (ರೇರ್) ಸಿಂಗಲ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಇದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೀರೋ ಡೆಸ್ಟಿನಿ 125 (Hero Destini 125):
ಈ ಸ್ಕೂಟರ್‌ನ್ನು ಕೂಡ 'ಟಿವಿಎಸ್ ಎನ್‌ಟಾರ್ಕ್ 125'ಗೆ ಬದಲಾಗಿ ತೆಗೆದುಕೊಳ್ಳಬಹುದು. ಅದಕ್ಕೆ ಅನುಗುಣವಾಗಿ ಬಜೆಟ್ ಬೆಲೆಯಲ್ಲಿಯೂ ಸಿಗುತ್ತದೆ. ರೂ.99,000 ರಿಂದ ರೂ.1.13 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 124 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 59 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಹೊಸ ಡೆಸ್ಟಿನಿ ಸ್ಕೂಟರ್ ಡಿಜಿಟಲ್ ಡಿಸ್‌ಪ್ಲೇ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಬೂಟ್ ಲ್ಯಾಂಪ್ & ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸರಿ ಸುಮಾರು 115 ಕೆಜಿ ತೂಕವಿದ್ದು, 5.3 ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications