ರೂ.1.19 ಲಕ್ಷ.. ಬಲಿಷ್ಠವಾದ ಹೊಸ TVS Ntorq 150ಗೆ ಮೂರು ಜನಪ್ರಿಯ ಬದಲಿ ಸ್ಕೂಟರ್‌ಗಳಿವು, ಯಾವುವು?
ಬಹುನಿರೀಕ್ಷಿತ ಟಿವಿಎಸ್ ಎನ್‌ಟಾರ್ಕ್ 150 (TVS Ntorq 150) ಸ್ಕೂಟರ್ ಗುರುವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಇದು ರೂ.1.19 ಲಕ್ಷದಿಂದ ರೂ.1.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 149.7 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 40 ಕಿ.ಮೀ ವರೆಗೆ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ. ಫುಲ್ ಟಿಎಫ್‌ಟಿ ಡಿಸ್‌ಪ್ಲೇ, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಟ್ರಾಕ್ಷನ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ. ನೀವು 'ಎನ್‌ಟಾರ್ಕ್ 150'ಗೆ ಪರ್ಯಾಯವಾಗಿ ಈ 3 ಸ್ಕೂಟರ್‌ಗಳನ್ನು ಖರೀದಿ ಮಾಡಬಹುದು. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.
ಹೀರೋ ಜೂಮ್ 160 (Hero Xoom 160):
ಇದೊಂದು ಪ್ರಮುಖ ಸ್ಕೂಟರ್ ಆಗಿದ್ದು, ಟಿವಿಎಸ್ ಎನ್‌ಟಾರ್ಕ್ 150ಗೆ ಅತ್ಯುತ್ತಮವಾದ ಬದಲಿ ಆಯ್ಕೆಯಾಗಲಿದೆ. ರೂ.1.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಈ ತಿಂಗಳೇ ವಿತರಣೆಯು ಶುರುವಾಗಲಿದೆ. ಉತ್ತಮವಾದ ವಿನ್ಯಾಸವನ್ನು ಪಡೆದಿದೆ. ಮ್ಯಾಟ್ ರೇನ್‌ಫಾರೆಸ್ಟ್ ಗ್ರೇ, ಸಮ್ಮಿಟ್ ವೈಟ್, ಕ್ಯಾನ್ಯನ್ ರೆಡ್ & ಮ್ಯಾಟ್ ವಾಲ್ಕ್ಯಾನಿಕ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಜೂಮ್ 160 ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 156-ಸಿಸಿ ಸಿಂಗಲ್-ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 40 ಕಿ.ಮೀ ವರೆಗೆ ಮೈಲೇಜ್ ನೀಡಬಹುದು. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 5.9 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಈ ಸ್ಕೂಟರ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಬ್ಲೂಟೂತ್ ಕನೆಕ್ಟಿವಿಟಿ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಸಿಂಗಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಯಮಹಾ ಏರೋಕ್ಸ್ 155 (Yamaha Aerox 155):
ಇದು ವಿಶ್ವಾಸಾರ್ಹ ಸ್ಕೂಟರ್ ಎಂದೇ ಹೆಸರುವಾಗಿದ್ದು, ಟಿವಿಎಸ್ ಎನ್‌ಟಾರ್ಕ್ 150ಗೆ ಪರ್ಯಾಯವಾಗಲಿದೆ. ರೂ.1.50 ಲಕ್ಷದಿಂದ ರೂ.1.54 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಮೆಟಾಲಿಕ್ ಬ್ಲ್ಯಾಕ್, ಗ್ರೇ ವರ್ಮಿಲಿಯನ್, ಐಸ್ ಫ್ಲೂ ವರ್ಮಿಲಿಯನ್, ರೇಸಿಂಗ್ ಬ್ಲೂ ಹಾಗೂ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.
ಹೊಸ ಯಮಹಾ ಏರೋಕ್ಸ್ 155 ಸ್ಕೂಟರ್ ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 155-ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 48.62 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಎಪ್ರಿಲಿಯಾ ಎಸ್ಆರ್ 160 (Aprilia SR 160):
ಈ ಸ್ಕೂಟರ್‌ನ್ನು ಟಿವಿಎಸ್ ಎನ್‌ಟಾರ್ಕ್ 150ಗೆ ಬದಲಾಗಿ ತೆಗೆದುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.1.31 ಲಕ್ಷದಿಂದ ರೂ.1.41 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಸೆನ್ಸ್ ವೈಟ್, ಸ್ಟಾರ್ಮ್ ಗ್ರೇ, ವೈಬ್ರೆಂಟ್ ಬ್ಲೂ, ಎನಿಗ್ಮಾ ಬ್ಲ್ಯಾಕ್ ಹಾಗೂ ಪವರ್ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಇದರ ಪವರ್‌ಟ್ರೇನ್ ಸಾಕಷ್ಟು ಬಲಿಷ್ಠವಾಗಿದೆ. 160 ಸಿಸಿ 3-ವಾಲ್ವ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದೆ. 35 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಬೂಟ್ ಲ್ಯಾಂಪ್‌ನೊಂದಿಗೆ 11 ಲೀಟರ್ ಸಾಮರ್ಥ್ಯದ ಬೂಟ್ ಸ್ಟೋರೇಜ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ ಸಿಂಗಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್ ಹಾಗೂ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications