ಬಡವರ ಬಂಡಿ 'ಹೀರೋ ಸ್ಪ್ಲೆಂಡರ್ ಪ್ಲ​ಸ್‌'ಗೆ 3 ಪರ್ಯಾಯ ಬೈಕ್‌ಗಳಿವು.. 70+ ಕಿ.ಮೀ ಮೈಲೇಜ್, ಬೆಲೆಯೂ ಅಗ್ಗ!

ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ಜನಪ್ರಿಯ ಮೋಟಾರ್‌ಸೈಕಲ್ ಆಗಿದೆ. ಇದು ರೂ.76,000 ರಿಂದ ರೂ.79,000 (ಎಕ್ಸ್-ಶೋರೂಂ) ದರದಲ್ಲಿ ಖರೀದಿಗೆ ದೊರೆಯುತ್ತದೆ. 97.2 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಫೋರ್ಸ್ ಸಿಲ್ವರ್ ಹಾಗೂ ಬ್ಲ್ಯಾಕ್ ರೆಡ್ ಪರ್ಪಲ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. 9.8 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ. ಈ 'ಸ್ಪ್ಲೆಂಡರ್ ಪ್ಲಸ್‌'ಗೆ ಪರ್ಯಾಯವಾಗಿ ಗ್ರಾಹಕರು ಈ 3 ಬೈಕ್‌ಗಳನ್ನು ಖರೀದಿ ಮಾಡಬಹುದು. ಬನ್ನಿ.. ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರವನ್ನು ತಿಳಿಯೋಣ.

ಟಿವಿಎಸ್ ರೇಡಿಯನ್ (TVS Radeon): ಈ ಮೋಟಾರ್‌ಸೈಕಲ್ ರೂ.70,000 ರಿಂದ ರೂ.84,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 109.7 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 8.19 ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 4-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

Best 3 Alternatives For Hero Splendor Plus Bike TVS Radeon Honda Dream CD110 Bajaj CT 110X

ಈ ಟಿವಿಎಸ್ ರೇಡಿಯನ್ ಬೈಕ್ 73 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡುಯಲ್-ಪಾಡ್ ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಬ್ಲೂ, ಮೆಟಲ್ ಬ್ಲ್ಯಾಕ್ ಮತ್ತು ರಾಯಲ್ ಪರ್ಪಲ್ ಬಣ್ಣಗಳೊಂದಿಗೂ ಸಿಗುತ್ತದೆ. ಹೊಸ ರೇಡಿಯನ್ ಬೈಕ್ 113 ಕೆಜಿ ತೂಕವಿದ್ದು, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಸಿಡಿ 110 ಡ್ರಿಮ್ (Honda CD 110 Dream): ಇದು ಕೂಡ ಹೀರೋ ಸ್ಪ್ಲೆಂಡರ್ ಪ್ಲ​ಸ್‌ಗೆ ಪರ್ಯಾಯವಾಗಿದೆ. ರೂ.76,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 109. 51 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.79 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 9.30 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.

Best 3 Alternatives For Hero Splendor Plus Bike TVS Radeon Honda Dream CD110 Bajaj CT 110X

ನೂತನ ಹೋಂಡಾ ಸಿಡಿ 110 ಡ್ರಿಮ್ ಮೋಟಾರ್‌ಸೈಕಲ್ 65 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟೂ-ಪಾಡ್ ಅನಲಾಗ್ ಇನ್ಸ್ಟ್ರುಮೆಂಟ್ ಸೆಟಪ್, ಸ್ಟಾರ್ಟ್/ಸ್ಟಾಪ್ ಸ್ವಿಚ್ ಹಾಗೂ ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಬ್ಲ್ಯಾಕ್ ವಿತ್ ಬ್ಲ್ಯೂ, ಬ್ಲ್ಯಾಕ್ ವಿತ್ ರೆಡ್, ಬ್ಲ್ಯಾಕ್ ವಿತ್ ಗ್ರೀನ್ ಹಾಗೂ ಬ್ಲ್ಯಾಕ್ ಗ್ರೇ ಬಣ್ಣಗಳೊಂದಿಗೂ ದೊರೆಯುತ್ತದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಬಜಾಜ್ ಸಿಟಿ 110ಎಕ್ಸ್ (Bajaj CT 110X): ಈ ಬೈಕ್ ರೂ.70,000 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 115.45 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 8.6 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 9.8 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇದರೊಟ್ಟಿಗೆ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

Best 3 Alternatives For Hero Splendor Plus Bike TVS Radeon Honda Dream CD110 Bajaj CT 110X

ಈ ಬಜಾಜ್ ಸಿಟಿ 110ಎಕ್ಸ್ ಮೋಟಾರ್‌ಸೈಕಲ್ 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಟ್ವಿನ್ ಪಾಡ್ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ನೂತನ ಬೈಕ್ 127 ಕೆಜಿ ತೂಕ ಸಹ ಇದ್ದು, ಪ್ರಯಾಣಿಕರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, March 30, 2025, 19:41 [IST]
English summary
Best 3 alternatives for hero splendor plus bike tvs radeon honda dream cd110 bajaj ct 110x
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+