ಬ್ರೋ.. ನೀವು ಈಗಷ್ಟೇ ಬೈಕ್‌ನ್ನು ಚೆನ್ನಾಗಿ ಓಡಿಸುವುದನ್ನು ಕಲಿತ್ತಿದ್ದೀರಾ, ಇವು ಬೊಂಬಾಟ್ ಆಯ್ಕೆಯಾಗಬಲ್ಲವು!
ಡಿಗ್ರಿ ಕಾಲೇಜು ಮೆಟ್ಟಿಲು ಹತ್ತಿದ ಯುವಕರಿಗೆ ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಖರೀದಿ ಮಾಡಬೇಕು ಎಂಬ ಬಹುದೊಡ್ಡ ಆಸೆಯಿರುತ್ತದೆ. ಆದರೆ, ಯಾವ ಬೈಕ್‌ನ್ನು ಕೊಂಡುಕೊಳ್ಳಬೇಕು.. ಅದು ಪ್ರೀಮಿಯಂ ಆಗಿದೆಯೇ ಎಂಬಿತ್ಯಾದಿ ಗೊಂದಲಗಳಿರುತ್ತವೆ. ನೀವು ಈಗಷ್ಟೇ ಮೋಟಾರ್‌ಸೈಕಲ್‌ನ್ನು ಚೆನ್ನಾಗಿ ಓಡಿಸುವುದನ್ನು ಕಲಿತ್ತಿದ್ದೀರಾ.. ಹಾಗಾದರೆ, ಈ ಟಿವಿಎಸ್ ರೋನಿನ್, ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಹಾಗೂ ಬಜಾಜ್ ಪಲ್ಸರ್ ಎನ್160 ಬೈಕ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ.. ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
ಟಿವಿಎಸ್ ರೋನಿನ್ (TVS Ronin): ಇದು ಜನಪ್ರಿಯ ಬೈಕ್ ಆಗಿದ್ದು, ಯುವ ಗ್ರಾಹಕರಿಗೆ ಅತ್ಯುತ್ತಮ ಆಯ್ಕೆಯಾಗಲಿದೆ. ರೂ.1.36 ಲಕ್ಷದಿಂದ ರೂ.1.73 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಖರೀದಿಗೆ ದೊರೆಯುತ್ತದೆ. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದ್ದು, ರೌಂಡೆಡ್ ಎಲ್ಇಡಿ ಹೆಡ್‌ಲ್ಯಾಂಪ್, ಟಿ-ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟರ್ನ್ ಇಂಡಿಕೇಟರ್‌ಗಳನ್ನು ಪಡೆದಿದೆ.

ನೂತನ ಟಿವಿಎಸ್ ರೋನಿನ್ ಮೋಟಾರ್‌ಸೈಕಲ್ ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 225.9 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 42 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸಿಂಗಲ್-ಪಾಡ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.
ರಾಯಲ್ ಎನ್‌ಫೀಲ್ಡ್ ಬುಲೆಟ್ 350 (Royal Enfield Bullet 350): ಈ ಬೈಕ್ ಕೂಡ ಯುವಕರಿಗೆ ಹೆಚ್ಚು ಸೂಕ್ತವಾಗಲಿದೆ. ಇದು ರೂ.1.75 ಲಕ್ಷದಿಂದ ರೂ.2.18 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಜೊತೆಗೆ ಮಿಲಿಟರಿ ಬ್ಲ್ಯಾಕ್, ಮಿಲಿಟರಿ ರೆಡ್, ಮರೂನ್, ಸ್ಟ್ಯಾಂಡರ್ಡ್ ಬ್ಲ್ಯಾಕ್ ಹಾಗೂ ಬೆಟಾಲಿಯನ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಈ ಮೋಟಾರ್‌ಸೈಕಲ್ 349 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 37 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್‌ನ್ನು ಹೊಂದಿದೆ.
ಬಜಾಜ್ ಪಲ್ಸರ್ ಎನ್160 (Bajaj Pulsar N160): ಇದೊಂದು ಪ್ರಖ್ಯಾತ ಬೈಕ್ ಆಗಿದ್ದು, ಯುವ ಗ್ರಾಹಕರಿಗೆ ಬೊಂಬಾಟ್ ಆಯ್ಕೆಯಾಗಲಿದೆ. ರೂ.1.22 ಲಕ್ಷದಿಂದ ರೂ.1.34 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಮತ್ತು ಎಲ್ಇಡಿ ಡಿಆರ್‌ಎಲ್‌ಗಳನ್ನು ಒಳಗೊಂಡಿದೆ. ರೇಸಿಂಗ್ ರೆಡ್, ಕೆರಿಬಿಯನ್ ಬ್ಲೂ, ಬ್ರೂಕ್ಲಿನ್ ಬ್ಲ್ಯಾಕ್ & ಪರ್ಲ್ ಮೆಟಾಲಿಕ್ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ ಪಲ್ಸರ್ ಎನ್160 ಮೋಟಾರ್‌ಸೈಕಲ್ 164.82 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದ್ದು, 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 59 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications