ಅಗ್ಗದ 'Honda Activa' ಇ-ಸ್ಕೂಟರ್‌ಗೆ ಬದಲಿ ಆಯ್ಕೆಯಾಗಬಲ್ಲ 5 ಎಲೆಕ್ಟ್ರಿಕ್ ಟೂ-ವೀಲರ್‌ಗಳಿವು.. ಬೆಲೆಯೂ ಕಡಿಮೆ!
ಹೋಂಡಾ ಆಕ್ಟಿವಾ (Honda Activa) ಜನಪ್ರಿಯ ಸ್ಕೂಟರ್ ಆಗಿದ್ದು, ಮಧ್ಯಮ ವರ್ಗದ ಜನರ ನೆಚ್ಚಿನ ದ್ವಿಚಕ್ರ ವಾಹನವಾಗಿ ಹೊರಹೊಮ್ಮಿದೆ. ಕಳೆದ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಹೊಚ್ಚ ಹೊಸ 'ಆಕ್ಟಿವಾ'ವನ್ನು ಎಲೆಕ್ಟ್ರಿಕ್ ರೂಪದಲ್ಲಿಯೂ ಬಿಡುಗಡೆಗೊಳಿಸಿತ್ತು. ಇದು ರೂ.1.17 ಲಕ್ಷದಿಂದ ರೂ.1.52 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಎರಡು ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 102 ಕಿ.ಮೀ ರೇಂಜ್ ಕೊಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ನೀವು 'ಹೋಂಡಾ ಆಕ್ಟಿವಾ ಇ' ಬೆಲೆಗೆ ಅಷ್ಟೇ ಚೆನ್ನಾಗಿರುವ 5 ಎಲೆಕ್ಟ್ರಿಕ್ ಟೂ-ವೀಲರ್‌ಗಳನ್ನು ಕೂಡ ಖರೀದಿ ಮಾಡಬಹುದು. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ಮಾಹಿತಿಯನ್ನು ತಿಳಿಯೋಣ.
ಟಿವಿಎಸ್ ಐಕ್ಯೂಬ್ (TVS iQube): ಇದು ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯಲಿದೆ. ಇದರಿಂದಾಗಿ ಸಾಮಾನ್ಯ ವರ್ಗದ ಜನರು ಸಹ ಸುಲಭವಾಗಿ ಕೊಂಡುಕೊಳ್ಳಬಹುದು. ಈ ಸ್ಕೂಟರ್ ರೂ.89,999 (ಎಕ್ಸ್-ಶೋರೂಂ) ಆರಂಭಿಕ ದರವನ್ನು ಪಡೆದಿದೆ.

ನೂತನ ಟಿವಿಎಸ್ ಐಕ್ಯೂಬ್ ಎಲೆಕ್ಕ್ಟ್ರಿಕ್ ಸ್ಕೂಟರ್, 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 3.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 75 ರಿಂದ 100 ಕಿ.ಮೀ ಓಡುತ್ತದೆ. 5-ಇಂಚಿನ ಟಿಎಫ್‌ಟಿ ಸ್ಕ್ರೀನ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮತ್ತು ವೆಹಿಕಲ್ ಕ್ರ್ಯಾಶ್-ಟೌ ಅಲರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಓಲಾ ಎಸ್1 ಪ್ರೊ ಪ್ಲಸ್ (OLA S1 Pro+): ಈ ಎಲೆಕ್ಟ್ರಿಕ್ ಸ್ಕೂಟರ್, ರೂ.1.48 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 5.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 242 ರಿಂದ 320 ಕಿ.ಮೀ ಕ್ರಮಿಸುತ್ತದೆ.

ಹೀರೋ ವಿಡಾ ವಿ2 ಪ್ಲಸ್ (Hero Vida V2 Plus): ಇದೊಂದು ಪ್ರಖ್ಯಾತ ಎಲೆಕ್ಟ್ರಿಕ್ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. 'ಹೋಂಡಾ ಆಕ್ಟಿವಾ ಇ'ಗೆ ಪರ್ಯಾಯ ಆಯ್ಕೆಯಾಗಲಿದ್ದು, ಬಡ ಹಾಗೂ ಮಧ್ಯಮ ವರ್ಗದ ಖರೀದಿದಾರರು ಸುಲಭವಾಗಿ ಕೊಂಡುಕೊಳ್ಳಬಹುದು. ಈ ಸ್ಕೂಟರ್ ರೂ.85,300 (ಎಕ್ಸ್-ಶೋರೂಂ) ದರವನ್ನು ಪಡೆದಿದೆ.
ಈ ಹೀರೋ ವಿಡಾ ವಿ2 ಪ್ಲಸ್ ಇ-ಸ್ಕೂಟರ್ 3.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 5.22 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 25 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಭರ್ತಿ ಚಾರ್ಜ್‌ನಲ್ಲಿ 143 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಎಥರ್ 450ಎಸ್ (Ather 450S): ಈ ಎಲೆಕ್ಟ್ರಿಕ್ ಸ್ಕೂಟರ್ ಕಡಿಮೆ ಬೆಲೆಯಲ್ಲಿಯೇ ಗ್ರಾಹಕರ ಖರೀದಿಗೆ ದೊರೆಯಲಿದ್ದು, ರೂ.1.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 2.9 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 122 ಕಿ.ಮೀ ಓಡುತ್ತದೆ.

ರಿವೋಲ್ಟ್ ಆರ್‌ವಿ400 (Revolt RV400): ಇದು ಜನಪ್ರಿಯ ಎಲೆಕ್ಟ್ರಿಕ್ ಬೈಕ್ ಆಗಿದೆ. ರೂ.1.23 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 3.24 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 150 ಕಿ.ಮೀ ಕ್ರಮಿಸುತ್ತದೆ. ಜೊತೆಗೆ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications