Honda: 55 Km ಮೈಲೇಜ್.. 89,000 ರೂಪಾಯಿ, ಜನಪ್ರಿಯ ಹೋಂಡಾ ಆಕ್ಟಿವಾ 125ಗೆ 3 ಬದಲಿ ಸ್ಕೂಟರ್‌ಗಳಿವು, ಬೆಲೆ ಎಷ್ಟು?
ಹೋಂಡಾ ಆಕ್ಟಿವಾ 125 (Honda Activa 125) ಪ್ರಮುಖ ಸ್ಕೂಟರ್ ಆಗಿದ್ದು, ದಿನಬಳಕೆಗೆ ಹೆಚ್ಚು ಸೂಕ್ತವಾಗಿದೆ. ಮಧ್ಯಮ ವರ್ಗದ ಗ್ರಾಹಕರು ಕೂಡ ಮೆಚ್ಚಿಕೊಂಡಿದ್ದಾರೆ. ರೂ.89,152 ರಿಂದ ರೂ.92,796 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಡೀಪ್ ಗ್ರೌಂಡ್ ಗ್ರೇ, ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಮತ್ತು ಪರ್ಲ್ ಸೈರನ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 162 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1260 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಈ ಸ್ಕೂಟರ್ 123.92-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 47 ರಿಂದ 55 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 4.2-ಇಂಚಿನ ಟಿಎಫ್‌ಟಿ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಮತ್ತು ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ನೀವು ಇದೇ 'ಹೋಂಡಾ ಆಕ್ಟಿವಾ 125'ಗೆ ಪರ್ಯಾಯವಾಗಿ ಈ 3 ಪರ್ಯಾಯ ಸ್ಕೂಟರ್‌ಗಳಾದ ಸುಜುಕಿ ಆಕ್ಸೆಸ್ 125, ಟಿವಿಎಸ್ ಜುಪಿಟರ್ 125, ಹೀರೋ ಡೆಸ್ಟಿನಿ 125, ಸುಜುಕಿ ಬರ್ಗ್‌ಮನ್ ಸ್ಟ್ರೀಟ್ ಹಾಗೂ ಹೀರೋ ಜೂಮ್ 125ಗಳನ್ನು ಖರೀದಿ ಮಾಡಬಹುದು. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಸುಜುಕಿ ಆಕ್ಸೆಸ್ 125 (Suzuki Access 125):
ಈ ಸ್ಕೂಟರ್‌ನ್ನು 'ಹೋಂಡಾ ಆಕ್ಟಿವಾ 125'ಗೆ ಬದಲಾಗಿ ಖರೀದಿಸಬಹುದು. ಅದಕ್ಕೆ ತಕ್ಕಂತೆ ರೂ.80,572 ರಿಂದ ರೂ.97,166 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 124-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 45 ರಿಂದ 64 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 4.2-ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನಂತಹ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಟಿವಿಎಸ್ ಜುಪಿಟರ್ 125 (TVS Jupiter 125):
ಇದು ಪ್ರಖ್ಯಾತ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. 'ಹೋಂಡಾ ಆಕ್ಟಿವಾ 125'ಗೂ ಪರ್ಯಾಯ ಆಯ್ಕೆಯಾಗಲಿದೆ. ರೂ.83,250 ರಿಂದ ರೂ.92,250 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 124.8-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 57.27 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಸಾಕೆಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಹೀರೋ ಡೆಸ್ಟಿನಿ 125 (Hero Destini 125):
ಈ ಸ್ಕೂಟರ್‌ನ್ನು 'ಹೋಂಡಾ ಆಕ್ಟಿವಾ 125'ಗೆ ಬದಲಾಗಿ ಮನೆಗೆ ತರಬಹುದು. ರೂ.83,997 ರಿಂದ ರೂ.84,919 (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 124.6-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 59 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಸುಜುಕಿ ಬರ್ಗ್‌ಮನ್ ಸ್ಟ್ರೀಟ್ (Suzuki Burgman Street):
ಇದೊಂದು ಜನಪ್ರಿಯ ಸ್ಕೂಟರ್ ಆಗಿದ್ದು, 'ಹೋಂಡಾ ಆಕ್ಟಿವಾ 125'ಗೂ ಪರ್ಯಾಯವಾಗಲಿದೆ. ರೂ.93,382 ರಿಂದ ರೂ.97,233 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 48 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಹೀರೋ ಜೂಮ್ 125 (Hero Xoom 125):
ಈ ಸ್ಕೂಟರ್‌ನ್ನು 'ಹೋಂಡಾ ಆಕ್ಟಿವಾ 125'ಗೆ ಬದಲಾಗಿ ತೆಗೆದುಕೊಳ್ಳಬಹುದು. ರೂ.80,494 ರಿಂದ ರೂ.86,025 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 124.6-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 45 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








