Hero: ಅಗ್ಗದ ಹೀರೋ ವಿಡಾ ವಿಎಕ್ಸ್2ಗೆ ಬದಲಿ ಆಯ್ಕೆಯಾಗಬಲ್ಲ 5 ಟೂ-ವೀಲರ್‌ಗಳಿವು.. ಅಷ್ಟೇ ಬೆಲೆಗೆ ಸಿಗುತ್ತವೆ!
ಇತ್ತೀಚೆಗೆ ಹೀರೋ ವಿಡಾ ವಿಎಕ್ಸ್2 (Hero Vida Vx2) ಇ-ಸ್ಕೂಟರ್‌ನ್ನು ಬಿಡುಗಡೆಗೊಳಿಸಲಾಗಿತ್ತು. ಈ ಎಲೆಕ್ಟ್ರಿಕ್ ಸ್ಕೂಟರ್‌ನ ಆರಂಭಿಕ ಬೆಲೆ ರೂ.59,000 ಇದ್ದು, 2.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 3.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. 92 ರಿಂದ 142 ಕಿಲೋಮೀಟರ್ ರಿಂದ ರೇಂಜ್ (ಮೈಲೇಜ್) ನೀಡುತ್ತದೆ. ಎಲ್‌ಸಿಡಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. ನೀವು ದಿನನಿತ್ಯದ ಬಳಕೆಗಾಗಿ 'ವಿಡಾ ವಿಎಕ್ಸ್2'ಗೆ ಪರ್ಯಾಯವಾಗಿ ಈ 5 ದ್ವಿಚಕ್ರ ವಾಹನಗಳನ್ನು ಖರೀದಿ ಮಾಡಬಹುದು. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಹೀರೋ ಎಚ್ಎಫ್ 100 (Hero HF 100):
ಈ ಬೈಕ್‌ನ್ನು 'ಹೀರೋ ವಿಡಾ ವಿಎಕ್ಸ್2' ಎಲೆಕ್ಟ್ರಿಕ್ ಸ್ಕೂಟರ್‌ಗೆ ಬದಲಾಗಿ ಖರೀದಿ ಮಾಡಬಹುದು. ಇದು ಹೆಚ್ಚು-ಕಮ್ಮಿ ಆ ಬೆಲೆಗೆ ಸಿಗಲಿದ್ದು, ರೂ.49,999 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಹೀರೋ ಎಚ್ಎಫ್ 100 ಮೋಟಾರ್‌ಸೈಕಲ್ ತುಂಬಾ ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ರೆಡ್-ಬ್ಲ್ಯಾಕ್ & ಬ್ಲ್ಯೂ- ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್, ಕಿಕ್-ಸ್ಟಾರ್ಟರ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟ್ ಒಳಗೊಂಡಂತೆ ವಿವಿಧ ಬಣ್ಣಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಟಿವಿಎಸ್ ಎಕ್ಸ್ಎಲ್ 100 (TVS XL 100):
ಇದನ್ನು 'ಹೀರೋ ವಿಡಾ ವಿಎಕ್ಸ್2' ಇ-ಸ್ಕೂಟರ್‌ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.46,954 ರಿಂದ ರೂ.62,905 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಜೊತೆಗೆ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಗ್ರೀನ್, ರೆಡ್ ಮತ್ತು ಬ್ಲ್ಯಾಕ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಮೊಪೆಡ್ 99.7 ಸಿಸಿ ಸಿಂಗಲ್-ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 65 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಸ್ಪ್ಲಿಟ್ ಸೀಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಟಿವಿಎಸ್ ರೇಡಿಯನ್ (TVS Radeon):
ಇದು ಜನಪ್ರಿಯ ಮೋಟಾರ್‌ಸೈಕಲ್ ಆಗಿದ್ದು, 'ಹೀರೋ ವಿಡಾ ವಿಎಕ್ಸ್2' ಎಲೆಕ್ಟ್ರಿಕ್ ಸ್ಕೂಟರ್‌ಗೆ ಬದಲಾಗಿ ಮನೆಗೆ ತರಬಹುದು. ಈ ಬೈಕ್ ರೂ.59,880 ರಿಂದ ರೂ.83,984 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 109.7 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 73 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಬಜಾಜ್ ಪ್ಲಾಟಿನಾ 100 (Bajaj Platina 100):
ಈ ಬೈಕ್‌ನ್ನು 'ಹೀರೋ ವಿಡಾ ವಿಎಕ್ಸ್2' ಇ-ಸ್ಕೂಟರ್‌ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ಇದು ರೂ.68,742 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 102 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ಹಲವು ಒಳಗೊಂಡಿದೆ.

ಹೋಂಡಾ ಶೈನ್ 100 (Honda Shine 100):
ಇದನ್ನು 'ಹೀರೋ ವಿಡಾ ವಿಎಕ್ಸ್2' ಎಲೆಕ್ಟ್ರಿಕ್ ಸ್ಕೂಟರ್‌ಗೆ ಬದಲಾಗಿ ಖರೀದಿ ಮಾಡಬಹುದು. ಈ ಮೋಟಾರ್‌ಸೈಕಲ್ ರೂ.68,767 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 98.98 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 65 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಸೈಡ್-ಸ್ಟ್ಯಾಂಡ್ ಸೆನ್ಸರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ.


Click it and Unblock the Notifications